Maharashtra & Jharkhand: ಮಹಾರಾಷ್ಟ್ರ & ಜಾರ್ಖಂಡ್ ಚುನಾವಣೆ ಇಲ್ಲಿದೆ ಬಿಗ್ ಅಪ್ಡೇಟ್ಸ್
ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ಸ್ ಬಂದಿದೆ. ಈಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗಳು ನಡೆದಿದ್ದವು. ಇದೀಗ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ. ದೇಶದಲ್ಲಿ ಮುಂದಿನ ಹಂತದಲ್ಲಿ ಚುನಾವಣೆ ನಡೆಯುವ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳು ಇವೆ. ಈ ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆಯಲಿದೆ ಎನ್ನುವ ಕುತೂಹಲ ಇದೆ.
ಇದೀಗ ಮಹಾರಾಷ್ಟ್ರ ಚುನಾವಣೆ ಹಾಗೂ ಜಾರ್ಖಂಡ್ ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಸಾಧನೆ ಮಾಡಿ ಹುಮ್ಮಸ್ಸಿನಲ್ಲಿರುವ ಬಿಜೆಪಿ. ಈಗಾಗಲೇ ಮಹಾರಾಷ್ಟ್ರ ಚುನಾವಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಹಾಗೂ ತಂತ್ರದಲ್ಲಿ ತೊಡಗಿದೆ. ಇನ್ನು ಹರಿಯಾಣದ ಸೋಲಿನಿಂದ ಕಾಂಗ್ರೆಸ್‌ನ ನಾಯಕರು ಹಾಗೂ ಮುಖಂಡರಲ್ಲಿ ಕಳೆಗುಂದಿದೆ. ಆದರೆ, ಮಹಾರಾಷ್ಟ್ರದಲ್ಲಿ ಸಣ್ಣ ಪಕ್ಷಗಳು ಹಾಗೂ ಸ್ಥಳೀಯ ಪಕ್ಷಗಳು ಭಾರೀ ಸದ್ದು ಮಾಡುತ್ತಿವೆ. ಮಹಾರಾಷ್ಟ್ರದಲ್ಲಿ ಸಣ್ಣ ಪಕ್ಷಗಳು ಇಲ್ಲದೆ ಸರ್ಕಾರ ರಚನೆ ಮಾಡುವುದು ಅಸಾಧ್ಯ ಎಂದೇ ಹೇಳಲಾಗುತ್ತಿದೆ.

ಮುಂದಿನ ವಾರ ದಿನಾಂಕ ಘೋಷಣೆ ಸಾಧ್ಯತೆ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಭಾರತೀಯ ಚುನಾವಣಾ ಆಯೋಗವು ಮುಂದಿನ ವಾರ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ನವೆಂಬರ್ ಎರಡನೇ ವಾರದಲ್ಲಿ ಅಥವಾ ಮೂರನೇ ವಾರದಲ್ಲಿ ಜಾರ್ಖಂಡ್ ಹಾಗೂ ಮಹಾರಾಷ್ಟ್ರ ಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗವು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಾಲು ಸಾಲು ಹಬ್ಬ ಕಾರಣ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ಸಾಲು ಸಾಲು ಹಬ್ಬಗಳು ಇವೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆ ಸೇರಿದಂತೆ ಹಲವು ಕಾರಣಗಳಿಂದ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ಚುನಾವಣಾ ದಿನಾಂಕ ನಿಗದಿ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ. ಈ ಎರಡು ರಾಜ್ಯಗಳಲ್ಲಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ನಡುವೆ ಸಾಲು ಸಾಲು ಹಬ್ಬಗಳು ಇವೆ. ಅ. 29 ರಿಂದ ನವೆಂಬರ್ 3 ರವರೆಗೆ ದೀಪಾವಳಿ, ಛತ್ ಎನ್ನುವ ಹಬ್ಬ ಸೇರಿದಂತೆ ಹಲವು ಪ್ರಮುಖ ಹಾಗೂ ವಿಶೇಷ ಹಬ್ಬಗಳು ಇವೆ. ಹೀಗಾಗಿ, ಈ ಹಬ್ಬಗಳು ಮುಗಿದ ಮೇಲೆ ಚುನಾವಣೆ ನಿಗದಿ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಎಲ್ಲಾ ಪಕ್ಷಗಳಿಗೂ ಪ್ರಮುಖ ಚುನಾವಣೆ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿದಂತೆ ಸ್ಥಳೀಯ ಪಕ್ಷಗಳಿಗೆ ಅತ್ಯಂತ ಮುಖ್ಯ ಚುನಾವಣೆಯಾಗಿದೆ. ಈ ಎರಡೂ ರಾಜ್ಯಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಇದೀಗ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದರೆ, ಜಾರ್ಖಂಡ್‌ನಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷ ಅಧಿಕಾರದಲ್ಲಿ ಇದೆ. ಹರಿಯಾಣ ಗೆದ್ದ ಖುಷಿಯಲ್ಲಿ ಇರುವ ಬಿಜೆಪಿ ಈ ರಾಜ್ಯಗಳಲ್ಲೂ ಗೆಲ್ಲುವ ಕನಸು ಕಾಣುತ್ತಿದೆ. ಆದರೆ, ಸಣ್ಣ ತಪ್ಪಿನಿಂದ ಹರಿಯಾಣದಲ್ಲಿ ಅಧಿಕಾರ ಕೈತಪ್ಪಿಸಿಕೊಂಡಿರುವ ಕಾಂಗ್ರೆಸ್ ಈ ರಾಜ್ಯಗಳಲ್ಲಿ ಗೆಲ್ಲಲೇಬೇಕು ಎನ್ನುವ ಛಲದಲ್ಲಿದೆ.












Click it and Unblock the Notifications