ನಿತ್ಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಾನೆಂದು ಮಗನಿಗೆ ವಿಷ ಹಾಕಿ ಕೊಂದ ತಂದೆ
ಮಹಾರಾಷ್ಟ್ರ, ಫೆಬ್ರವರಿ 02: ಮಗ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಾನೆ ಎಂದು ತಂದೆಯೇ ಮಗನನ್ನು ವಿಷ ಹಾಕಿ ಕೊಂದ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವ್ಯಕ್ತಿಯೊಬ್ಬ ತನ್ನ 14 ವರ್ಷದ ಮಗನಿಗೆ ವಿಷ ನೀಡಿ ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಮಗ ನಾಪತ್ತೆಯಾಗಿದ್ದ ಕಥೆ ಕಟ್ಟಿದ ತಂದೆ ಈಗ ಜೈಲುಪಾಲಾಗಿದ್ದು, ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸಿದ ಪೊಲೀಸರೇ ಶಾಕ್ ಆಗಿದ್ದಾರೆ.
ವಿಜಯ್ ಬಟ್ಟು ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದ್ದು, ವಿಶಾಲ್ ಕೊಲೆಯಾದ ಬಾಲಕ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಿಜಯ್ ಬಟ್ಟು ಟೈಲರ್ ಕೆಲಸ ಮಾಡುತ್ತಿದ್ದು, ಸೋಲಾಪುರ ನಗರದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ. ಸುಖ ಜೀವನ ನಡೆಸುತ್ತಿದ್ದ ಈ ಕುಟುಂಬದಲ್ಲಿ ಮಗನ ವರ್ತನೆ ಬಿರುಗಾಳಿ ಎಬ್ಬಿಸಿದೆ.

ಜನವರಿ 13ರಂದು ವಿಶಾಲ್ ಎಂಬ 14 ವರ್ಷದ ಬಾಲಕ ಕಾಣೆಯಾಗಿದ್ದಾನೆ ಎನ್ನುವ ದೂರು ದಾಖಲಾಗಿತ್ತು. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸ್‌ರು ತನಿಖೆ ಆರಂಭಿಸಿದ್ದು, ಬಾಲಕನಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕನೊಬ್ಬನ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಬಾಲಕನ ಶವ ಪತ್ತೆ ಬಗ್ಗೆ ವಿಶಾಲ್ ಕುಟುಂಬಸ್ಥರಿಗೆ ತಿಳಿಸಿದ್ದರು.
ಇದಾದ ಬಳಿಕ ಕುಟುಂಬದವರು ಶವವನ್ನು ತಮ್ಮ ಕಾಣೆಯಾದ ಮಗ ವಿಶಾಲ್ ಎಂದು ಗುರುತಿಸಿದ್ದಾರೆ . ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸವ ಮೊದಲು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಬಾಲಕ ವಿಷ ಸೇವಿಸಿಯಿಂದ ಸಾವನ್ನಪ್ಪಿದ್ದಾನೆ ಎಂದು ವರದಿ ಬಂದಿತ್ತು. ಬಾಲಕನ ಸಾವಿನ ಬಗ್ಗೆ ಅನುಮಾನಗೊಂಡ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಕುಟುಂಬಸ್ಥರನ್ನು ವಿಚಾರಣೆಗೆ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ತಂದೆಯ ವರ್ತನೆಯಲ್ಲಿ ಅನುಮಾನ ಬಂದಿದೆ ಎನ್ನಲಾಗಿದೆ.
ತಂದೆ ವಿಜಯ್ ಬಟ್ಟು ಜೊತೆಗೆ ಹೋಗಿದ್ದ ಮಗ ವಾಪಸ್ ಬರುವಾಗ ಇರಲಿಲ್ಲ. ತಂದೆ ಜೊತೆ ಹೋದ ಮಗನೇ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ವಿವಿಧ ಆಯಾಮಾಗಳಲ್ಲಿ ತನಿಖೆ ನಡೆಸಿ ತಂದೆಯನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ತಂದೆ ವಿಜಯ್ ಬಟ್ಟು ತಾನೇ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
14 ವರ್ಷದ ಮಗನ ಕೊಲೆಗೆ ಕಾರಣವೇನು..?
ತನ್ನ 14 ವರ್ಷದ ಮಗ ಮೊಬೈನಲ್ಲಿ ಪ್ರತಿದಿನ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಎಷ್ಟು ಹೇಳಿದರೂ ಕೇಳುತ್ತಿಲ್ಲ, ಶಾಲೆಯಲ್ಲಿ ಹುಡುಗಿಯರನ್ನು ಚುಡಾಯಿಸುತ್ತಿದ್ದ, ಇದರಿಂದ ಶಾಲೆಗಳಿಂದಲೂ ನಿತ್ಯ ದೂರುಗಳು ಬರುತ್ತಿದ್ದವು. ಹೀಗಾಗಿ ಮಗ ಮಗ ದಾರಿ ತಪ್ಪುತ್ತಿದ್ದಾನೆ ಎಂದು ತಿಳಿದ ತಂದೆ ಅನೇಕ ಬಾರಿ ಬುದ್ಧಿ ಹೇಳಿದ್ದಾರೆ. ಮಗ ಎಷ್ಟು ಹೇಳಿದರೂ ಕೇಳುತ್ತಿಲ್ಲ ಎಂದು ಗೊತ್ತಾದಾಗ ಆರೋಪಿ ಮಗನನ್ನೇ ಕೊಲೆ ಮಾಡಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
ಜನವರಿ 13 ರಂದು ಮಗನ ಜೊತೆ ತನ್ನ ದ್ವಿಚಕ್ರ ವಾಹನದಲ್ಲಿ ತುಳಜಾಪುರ ರಸ್ತೆಗೆ ಕರೆದೊಯದಿದ್ದ ತಂದೆ ತಂಪು ಪಾನೀಯ ಖರೀದಿಸಿ ಅದರಲ್ಲಿ ವಿಷ ಹಾಕಿ ಮಗನಿಗೆ ನೀಡಿದ್ದಾರೆ. ಶೀಘ್ರದಲ್ಲೇ ವಿಶಾಲ್ ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿದ್ದು, ಆರೋಪಿ ವಿಜಯ್ ಬಟ್ಟು ಮಗನ ಮೃತದೇಹ ಅಲ್ಲೇ ಬಿಟ್ಟು ಮನೆಗೆ ವಾಪಸ್ ಆಗಿದ್ದಾನೆ ಎನ್ನಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications