ಅಂಬೇಡ್ಕರ್ ಕುರಿತು ಅವಹೇಳನ : ಮಸಿ ದಾಳಿಗೆ ಭೀತಿಗೆ ಫೇಸ್ ಶೀಲ್ಡ್ ಧರಿಸಿದ ಬಿಜೆಪಿ ಸಚಿವ
ಮುಂಬೈ, ಡಿ. 18: ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಮಹಾರಾಷ್ಟ್ರ ಸಚಿವರ ಮೇಲೆ ಕಳೆದ ವಾರ ಮಸಿ ದಾಳಿ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ.
ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದರು. ಈ ಸಮಯದಲ್ಲಿ, ಅವರು ಫೇಸ್ ಶೀಲ್ಡ್ ಧರಿಸಿ ಮುಚ್ಚೆನ್ನರಿಕೆ ತೆಗೆದುಕೊಂಡಿದ್ದಾರೆ. ಕಳೆದ ವಾರ ಚಿಂಚ್‌ವಾಡ್ ಪ್ರದೇಶದಲ್ಲಿಯೇ ಅವರ ಮೇಲೆ ಮಸಿ ಎರಚಲಾಗಿತ್ತು.
ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಇಲ್ಲಿಯೂ ಮಸಿ ಎರಚಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಬಂದ ಕಾರಣ ಪೊಲೀಸರು ಎಚ್ಚರಿಕೆ ನೀಡಿದ್ದರು. ಹೀಗಾಗಿ ಸಚಿವ ಚಂದ್ರಕಾಂತ್ ಪಾಟೀಲ್ ಫೇಸ್ ಶೀಲ್ಡ್ ಧರಿಸಿ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದಾರೆ.

ಸಚಿವರು, ಸಮಾಜ ಸುಧಾರಕರಾದ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಸರ್ಕಾರದ ಅನುದಾನವನ್ನು ಅವಲಂಬಿಸಿರದೆ ಹಣಕ್ಕಾಗಿ ಜನರ ಬಳಿ "ಭಿಕ್ಷೆ" ಬೇಡಿದ್ದರು ಎಂಬ ಹೇಳಿಕೆ ನೀಡಿದ್ದರು. ಭಿಕ್ಷೆ ಎಂಬ ಪದ ಬಳಸಿದ್ದಕ್ಕೆ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿತ್ತು.
ಇನ್ನು, ಮಸಿ ದಾಳಿ ಬೆದರಿಕೆಯೊಡ್ಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ವಿಕಾಸ್ ಲೋಲೆ ಮತ್ತು ದಶರತ್ ಪಾಟೀಲ್ ಎಂಬುವವರ ವಿರುದ್ಧ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ಸಾಂಗ್ವಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವ ಉದ್ದೇಶದಿಂದ) ಮತ್ತು 505 (1) (ಬಿ) (ಸಾರ್ವಜನಿಕ ದುಷ್ಕೃತ್ಯಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು, ಸಾಮಾಜಿಕ ಮಾಧ್ಯಮದಲ್ಲಿ ಚಂದ್ರಕಾಂತ್ ಪಾಟೀಲ್ ಅವರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದ ಮೇಲೆ ಕೋಟ್ರೂಡ್ ಪೊಲೀಸರು ಮತ್ತೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್‌ಸ್ಟಾಗ್ರಾಮ್ ರೀಲ್ ಆಧಾರದ ಮೇಲೆ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ರುಡ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.












Click it and Unblock the Notifications