'ಮಹಾ' ಬೆಂಕಿಗೆ ತುಪ್ಪ ಸುರಿದ ಉದ್ಧವ್‌ ಠಾಕ್ರೆ: ಬೆಳಗಾವಿ ಮರುನಾಮಕರಣಕ್ಕೂ ವಿರೋಧ

ಬೆಂಗಳೂರು, ಡಿಸೆಂಬರ್‌ 27: ಕರ್ನಾಟಕದ ಬೆಳಗಾವಿ ಹಾಗೂ ಮರಾಠಿ ಭಾಷಿಗ ಹಳ್ಳಿಗಳನ್ನು ಪಡೆದೇ ತೀರುತ್ತೇವೆ ಎಂದು ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಹೇಳಿದೆ. ಕರ್ನಾಟಕವು ಮರಾಠಿ ವಿರೋಧ ನಿಲುವನ್ನು ಅನುಸರಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಆರೋಪಿಸಿದ್ದಾರೆ.

 ಕಾನೂನಾತ್ಮಕ ಹೋರಾಟಕ್ಕೆ ಮಹಾ ಸರ್ಕಾರ ನಿರ್ಣಯ

ಕಾನೂನಾತ್ಮಕ ಹೋರಾಟಕ್ಕೆ ಮಹಾ ಸರ್ಕಾರ ನಿರ್ಣಯ

ರಾಜ್ಯದ ಪ್ರಮುಖ ನಗರಗಳಾದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ಹಾಗೂ 865 ಮರಾಠಿ ಭಾಷಿಕರನ್ನು ಹೊಂದಿರುವ ಗ್ರಾಮಗಳನ್ನು ಸೇರಿಸಿಕೊಳ್ಳಲು ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಮಹಾರಾಷ್ಟ್ರ ಸರ್ಕಾರ ಹೇಳಿದೆ. ಈ ಕುರಿತು ನಿರ್ಣಯವನ್ನೂ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

 ಶಿವಸೇನಾ ನಾಯಕರ ಉದ್ಧಟತನದ ಹೇಳಿಕೆ

ಶಿವಸೇನಾ ನಾಯಕರ ಉದ್ಧಟತನದ ಹೇಳಿಕೆ

ಬೆಳಗಾವಿ ವಿಚಾರವಾಗಿ ತಂಟೆ ತೆಗೆಯುತ್ತಲೇ ಬಂದಿರುವ ಶಿವಸೇನಾ ಮುಖಂಡರು ಬೆಳಗಾವಿ ವಿಚಾರವಾಗಿ ವಿವಾದಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಉದ್ಧವ್ ಠಾಕ್ರೆ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಸುಪ್ರೀಂ ಕೋರ್ಟ್‌ ಮೊರೆ ಹೊಗುತ್ತೇವೆ ಎಂದು ತಿಳಿಸಿದ್ದಾರೆ.

'ನಾವು ಇಂದಿನ ನಿರ್ಣಯವನ್ನು ಬೆಂಬಲಿಸಿದ್ದೇವೆ. ಮಹಾರಾಷ್ಟ್ರದ ಪರವಾಗಿ ಏನೇ ನಡೆದರೂ ನಾವು ಬೆಂಬಲಿಸುತ್ತೇವೆ. ಆದರೆ ಕೆಲವು ಪ್ರಶ್ನೆಗಳಿವೆ. 2 ವರ್ಷಗಳಿಂದ, ಜನರು (ಗಡಿ ಪ್ರದೇಶಗಳಲ್ಲಿ ವಾಸಿಸುತ್ತಿರುವವರು) ಮಹಾರಾಷ್ಟ್ರಕ್ಕೆ ಸೇರಿಸಲು ಒತ್ತಾಯಿಸುತ್ತಿದ್ದಾರೆ, ನಾವು ಏನು ಮಾಡುತ್ತಿದ್ದೇವೆ' ಎಂದು ಕೇಳಿದ್ದಾರೆ.

'2008 ರಲ್ಲಿ ಸುಪ್ರೀಂ ಕೋರ್ಟ್‌ ಹೇಳಿದಂತೆ ವಿವಾದಿತ ಪ್ರದೇಶವನ್ನು(ಬೆಳಗಾವಿ) ಕೇಂದ್ರಡಳಿತ ಪ್ರದೇಶವೆಂದು ಘೋಷಿಸಲು ಸಾಧ್ಯವಿಲ್ಲ ಎಂದು ಇಂದು ಸರ್ಕಾರ ಹೇಳುತ್ತಿದೆ. ಆದರೆ, ಈಗ ಪರಿಸ್ಥಿತಿ ಹಾಗೆಯೇ ಇಲ್ಲ. ಕರ್ನಾಟಕ ಸರ್ಕಾರ ಅದನ್ನು ಪಾಲಿಸುತ್ತಿಲ್ಲ. ಅವರು ಅಲ್ಲಿ ವಿಧಾನಸಭೆ ಅಧಿವೇಶನ ನಡೆಸುತ್ತಿದ್ದಾರೆ, ಬೆಳಗಾವಿ ಎಂದು ಮರುನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಇಡಬೇಕು. ಇದನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು' ಎಂದು ಠಾಕ್ರೆ ಒತ್ತಾಯಿಸಿದ್ದಾರೆ.

ಉದ್ಧವ್‌ ಬಣದ ಶಿವಸೇನಾ ನಾಯಕ, ರಾಜ್ಯಸಭಾ ಮುಖಂಡ ಸಂಜಯ ರಾವುತ್‌, ಭಾರತದೊಳಗೆ ಚೀನಾ ನುಗ್ಗಿದೆ ಹಾಗೆ, ನಾವು ಬೆಳಗಾವಿಯೊಳಗೆ ನುಗ್ಗುತ್ತೇವೆ ಎಂದು ಹೇಳಿದ್ದರು.

 ರಾಜ್ಯದ ಒಂದು ಹಳ್ಳಿಯನ್ನೂ ಬಿಟ್ಟು ಕೊಡುವುದಿಲ್ಲ ಎಂದ ಡಿಕೆಶಿ

ರಾಜ್ಯದ ಒಂದು ಹಳ್ಳಿಯನ್ನೂ ಬಿಟ್ಟು ಕೊಡುವುದಿಲ್ಲ ಎಂದ ಡಿಕೆಶಿ

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, 'ರಾಜ್ಯದ ಗಡಿಯಲ್ಲಿರುವ ಹಳ್ಳಿಗಳನ್ನು ಸೇರ್ಪಡೆಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೈಗೊಂಡಿರುವ ನಿರ್ಣಯವನ್ನು ಕಾಂಗ್ರೆಸ್‌ ಪಕ್ಷ ಖಂಡಿಸುತ್ತದೆ. ನಮ್ಮ ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ' ಎಂದು ಹೇಳಿದ್ದಾರೆ.

'ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಹಾಗಾಗಿ ಇದು ಚುನಾವಣೆಗಾಗಿ ನಡೆಸುತ್ತಿರುವ ಕುತಂತ್ರ ಎಂಬುದರಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಕನ್ನಡ ಭಾಷೆ, ನೆಲ, ಜಲ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಈ ವಿಷಯದಲ್ಲಿ ಎಂಥ ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ' ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

 ಕನ್ನಡ ಪರ ಸಂಘಟನೆಗಳ ವಿರೋಧಮಹಾರಾಷ್ಟ್ರ ಸರ್ಕಾರದ ಈ ಉದ್ಧಟತನದ ನಿರ್ಣಯವು ಎರಡೂ ರಾಜ್ಯಗಳ ನಡುವಿನ ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಒಯ್ದಿದೆ. ಇದರ ವಿರುದ್ಧ ಕನ್ನಡ ಪರ ಸಂಘಟನೆಗಳು ಕೆಂಡ ಕಾರಿವೆ. ರಾಜ್ಯದ ರಾಜಕೀಯ ನಾಯಕರು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಾರಾಷ್ಟ್ರ ಸರ್ಕಾರದ ನಿರ್ಣಯವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇದರಿಂದ ಪ್ರಚೋದನೆ ಆಗಲಿದೆಯೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ಮಹಾರಾಷ್ಟ್ರ ಸರ್ಕಾರದ ಈ ಉದ್ಧಟತನದ ನಿರ್ಣಯವು ಎರಡೂ ರಾಜ್ಯಗಳ ನಡುವಿನ ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಒಯ್ದಿದೆ. ಇದರ ವಿರುದ್ಧ ಕನ್ನಡ ಪರ ಸಂಘಟನೆಗಳು ಕೆಂಡ ಕಾರಿವೆ. ರಾಜ್ಯದ ರಾಜಕೀಯ ನಾಯಕರು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಾರಾಷ್ಟ್ರ ಸರ್ಕಾರದ ನಿರ್ಣಯವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇದರಿಂದ ಪ್ರಚೋದನೆ ಆಗಲಿದೆಯೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ಮಹಾರಾಷ್ಟ್ರ ಸರ್ಕಾರದ ಈ ಉದ್ಧಟತನದ ನಿರ್ಣಯವು ಎರಡೂ ರಾಜ್ಯಗಳ ನಡುವಿನ ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಒಯ್ದಿದೆ. ಇದರ ವಿರುದ್ಧ ಕನ್ನಡ ಪರ ಸಂಘಟನೆಗಳು ಕೆಂಡ ಕಾರಿವೆ. ರಾಜ್ಯದ ರಾಜಕೀಯ ನಾಯಕರು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಾರಾಷ್ಟ್ರ ಸರ್ಕಾರದ ನಿರ್ಣಯವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇದರಿಂದ ಪ್ರಚೋದನೆ ಆಗಲಿದೆಯೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಈ ಉದ್ಧಟತನದ ನಿರ್ಣಯವು ಎರಡೂ ರಾಜ್ಯಗಳ ನಡುವಿನ ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಒಯ್ದಿದೆ. ಇದರ ವಿರುದ್ಧ ಕನ್ನಡ ಪರ ಸಂಘಟನೆಗಳು ಕೆಂಡ ಕಾರಿವೆ. ರಾಜ್ಯದ ರಾಜಕೀಯ ನಾಯಕರು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ನಿರ್ಣಯವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇದರಿಂದ ಪ್ರಚೋದನೆ ಆಗಲಿದೆಯೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+