Breaking: ಮಹಾರಾಷ್ಟ್ರ ರಾಜಕೀಯ: ಅಜಿತ್ ಪವಾರ್‌ನಿಂದ NCPಗೆ ಬಿಗ್ ಶಾಕ್, ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ
ಬೆಂಗಳೂರು, ಜಲೈ 02: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಹಿರಿಯ ನಾಯಕ ಅಜಿತ್ ಪವಾರ್ ಅವರು ಸ್ವಪಕ್ಷಕ್ಕೆ ಬಿಗ್ ಶಾಕ್ ನೀಡಲು ಸಜ್ಜಾಗಿದ್ದಾರೆ. ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬೆನ್ನಲ್ಲೆ ಅವರು ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಹಲವು ನಾಯಕರ ಜೊತೆ ಚರ್ಚಿಸಿರುವ ಅಜಿತ್ ಪವಾರ್ ಅವರು ಆಡಳಿತ ಪಕ್ಷ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಬಗ್ಗೆ ಒಲವು ತೋರಿಸಿದ್ದಾರೆ. ಸಭೆ ಬಲಿಕ ನಾಯಕರ ಜೊತೆಗೆ ಅವರು ರಾಜಭವನಕ್ಕೆ ತಲುಪಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲರಿಗೆ ಶರದ್ ಪವಾರ್ ಅವರು ತಮ್ಮೊಂದಿಗೆ 29 ಶಾಸಕರ ಬೆಂಬಲ ಇರುವ ಬಗ್ಗೆ ಖಚಿತತೆಯ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಈ ಮೂಲಕ ವಿಪಕ್ಷದಲ್ಲಿರುವ ಶರದ್ ಪವಾರ್ ಆಡಳಿತ ಪಕ್ಷದೊಂದಿಗೆ ಕೈ ಜೋಡಿಸಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಅವರು ವಿರೋಧ ಪಕ್ಷದ ನಾಯಕರಾಗಿ ಮುಂದುವರಿಯಲು ಉತ್ಸುಕರಾಗಿಲ್ಲ ಎಂಬುದನ್ನು ಹೇಳಿದ್ದರು. ಅದರ ಬೆನ್ನಲ್ಲೇ ಇಂದಿನ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.












Click it and Unblock the Notifications