Maharashtra Politics: ಬಿಜೆಪಿ ಏಕನಾಥ್ ಶಿಂಧೆ ಸರ್ಕಾರದಲ್ಲಿ DCM ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜಲೈ 02: ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಯಾಗಿದೆ. ಎನ್‌ಸಿಪಿ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಸ್ಥಾನ ನಿರಾಕರಣೆ ಬಳಿಕ ಬಂಡಾಯವೆದ್ದ ಅಜಿತ್ ಪವಾರ್ ಅವರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಯಾಣ ವಚನ ಸ್ವೀಕರಿಸಿದ್ದಾರೆ.

ಬಂಡಾಯವೆದ್ದಿದ್ದ ಅಜಿತ್ ಪವಾರ್ ಅವರು, ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಜೊತೆ ಸಭೆ ನಡೆಸಿದ್ದರು. ಅದರ ಬೆನ್ನಲ್ಲೆ ರಾಜ್ಯಪಾಲ ರಮೇಶ್ ಪೈಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಮೇಶ್ ಪೈಸ್ ಪ್ರತಿಜ್ಞಾ ವಿಧಿ ಬೋಧಿಸಿದರು.

Maharashtra Politics: NCP Leader Ajit Pawar Takes oath As DMC In BJP Eknath Shinde govt

ಎನ್‌ಸಿಪಿ ಬಿಟ್ಟ ನಾಯಕ ಅಜಿತ್ ಪವಾರ್ ಜೊತೆ 29 ಶಾಸಕರ ಬೆಂಬಲ ಹೊಂದಿದ್ದಾರೆ. ಸದ್ಯ ಅದರಲ್ಲಿ ಎಂಟು ಏಕನಾಥ್ ಶಿಂಧೆ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ಪವಾರ್ ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ. ಭಾನುವಾರ ಬೆಳಗ್ಗೆ ಎನ್‌ಸಿಪಿ ಶಾಸಕರ ಸೇರಿದಂತೆ ಕೆಲವು ನಾಯಕರು ಅಜಿತ್ ಪವಾರ್ ಅವರ ಮುಂಬೈ ನಿವಾಸದಲ್ಲಿ ಸಭೆ ನಡೆಸಿದರು. ಎನ್‌ಸಿಪಿ ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಲೆ ಮತ್ತು ಹಿರಿಯ ನಾಯಕ ಛಗನ್ ಭುಜಬಲ್ ಸಹ ಉಪಸ್ಥಿತರಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಸಭೆಗೆ ಗೈರಾಗಿದ್ದರು ಎಂದು ತಿಳಿದು ಬಂದಿದೆ.

9 ನಾಯಕರ ಸಹಿತ ಶಿಂಧೆ ಸರ್ಕಾರ ಸೇರ್ಪಡೆ
ಈ ಹಿಂದೆಯೆ ಅಜಿತ್ ಪವಾರ್ ಅವರು ಆಡಳಿತ ಪಕ್ಷ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಬಗ್ಗೆ ಒಲವು ತೋರಿಸಿದ್ದರು. ಇತ್ತ ಎನ್‌ಸಿಪಿ ಪಕ್ಷ ಸಂಘಟನೆ ಬಗ್ಗೆ ಉತ್ಸುಕತೆ ತೋರದೆ ಒಂದಷ್ಟು ಅಂಶಗಳನ್ನು ಬಹಿರಂಗಪಡಿಸಿದ್ದರು.

ಅದಾದ ಕೆಲವು ದಿನಗಳಲ್ಲಿ ಇಂದು ನಡೆದ ಸಭೆ ಬಳಿಕ ಅಜಿತ್ ಪಾವಾರ್ ಅವರು ಬಿಜೆಪಿ ಸರ್ಕಾರದ ಸಹಮತದಲ್ಲಿ ಅಧಿಕಾರ ಹಿಡಿದ ಏಕನಾಥ್ ಶಿಂಧೆ ಸರ್ಕಾರವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರೊಂದಿಗೆ ಎಂಟು ಮಂದಿ ಸಚಿವರಾಗಿದ್ದಾರೆ. ಅಜಿತ್ ಪವಾರ್ ಅವರ ಈ ಬಂಡಾಯದ ನಿರ್ಧಾರ ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಸಂಚಲನ ಸಷ್ಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+