ಮಹಾರಾಷ್ಟ್ರದ ರಾಯಗಡದಲ್ಲಿ ಭೂಕುಸಿತ: 13 ಸಾವು, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಮುಂಬೈ, ಜುಲೈ. 20: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಇದರಿಂದ ಸುಮಾರು 48 ಕುಟುಂಬಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಭೂಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದೂ ಅವರು ಹೇಳಿದ್ದಾರೆ. ಅಲ್ಲದೆ, ಭೂಕುಸಿತ ಸಂಭವಿಸಿದ ಪರ್ವತದ ತುದಿಯನ್ನು ತಲುಪಲು ಪರಿಣಿತ ಚಾರಣಿಗರನ್ನು ಕರೆಸಲಾಗಿದೆ. ಭೂಕುಸಿತದಿಂದ ಸುಮಾರು 46 ಮನೆಗಳು ಹಾನಿಗೊಳಗಾಗಿದ್ದು, 20ಕ್ಕೂ ಹೆಚ್ಚು ಮನೆಗಳು ಕೆಸರಿನಲ್ಲಿ ಮುಳುಗಿವೆ.

Maharashtra rain: Landslide kills 13 in Raigad district, over 100 are feared trapped

ಭೂಕುಸಿತ ಸಂಭವಿಸಿದಾಗ ಹೆಚ್ಚಿನ ಜನರು ಮಲಗಿದ್ದ ಕಾರಣ ಮತ್ತು ತಮ್ಮನ್ನು ರಕ್ಷಿಸಿಕೊಳ್ಳುವ ಅವಕಾಶ ಸಿಗದ ಕಾರಣ ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಕೆಲವು ಮಕ್ಕಳು ಆಟವಾಡಲು ಮೊಬೈಲ್ ನೆಟ್‌ವರ್ಕ್‌ಗಾಗಿ ಹಳ್ಳಿಯಿಂದ ಹೊರಗೆ ಹೋಗಿದ್ದರು. ಅಲ್ಲಿಂದ ಭೂಕುಸಿತವನ್ನು ಮೊದಲು ಗಮನಿಸಿದ ಅವರು ಕೆಲವು ಗ್ರಾಮಸ್ಥರನ್ನು ಎಚ್ಚರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ ಎಂದು ಎನ್‌ಡಿಆರ್‌ಎಫ್ ತಿಳಿಸಿದೆ. ರಾಯಗಡದ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, 48 ಕುಟುಂಬಗಳಿಗೆ ಹಾನಿಯಾಗಿದೆ.

ಇನ್ನು, ಯುಬಿಟಿ ಶಿವ ಸೇನಾ ಶಾಸಕ ಆದಿತ್ಯ ಠಾಕ್ರೆ ಕೂಡ ರಾಯಗಡದಲ್ಲಿ ಭೂಕುಸಿತದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. "ಭೂಕುಸಿತ ಸ್ಥಳದ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ನಾವು ಗ್ರಾಮಸ್ಥರೊಂದಿಗೆ ಮಾತನಾಡಲು ಪ್ರಯತ್ನಿಸಿದ್ದೇವೆ, ಆದರೆ ಅಲ್ಲಿಗೆ ತಲುಪುವುದು ಕಷ್ಟ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾವು ಅಲ್ಲಿಗೆ ಹೋಗಬೇಕೆಂದು ಒತ್ತಾಯಿಸುವ ಮೂಲಕ ರಾಜ್ಯದ ಮೇಲೆ ಹೆಚ್ಚಿನ ಒತ್ತಡ ಹೇರಲು ನಾವು ಬಯಸುವುದಿಲ್ಲ" ಎಂದು ಹೇಳಿದ್ದಾರೆ.

Maharashtra rain: Landslide kills 13 in Raigad district, over 100 are feared trapped

ಈ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ನಾನು ಸಮಸ್ಯೆಯನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ನಾವು ನಂತರ ಈ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತೇವೆ. ಆದರೆ ನಾವು ಮೊದಲು ಜೀವಗಳನ್ನು ಉಳಿಸಬೇಕಾಗಿರುವುದರಿಂದ ನಾವು ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಗಳತ್ತ ಗಮನ ಹರಿಸುತ್ತೇವೆ" ಎಂದು ಶಾಸಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಭೂಕುಸಿತದ ಅವಶೇಷಗಳಿಂದ 12 ಮೃತದೇಹಗಳನ್ನು ಪಡೆಯಲಾಗಿದೆ. ಇದಲ್ಲದೆ, ಒಬ್ಬ ರಕ್ಷಣಾ ಕಾರ್ಯಕರ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದಾರೆ. ಇದರ ಜೊತೆಗೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ರಾಯಗಢದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ತುರ್ತು ನಿಯಂತ್ರಣ ಕೊಠಡಿಯನ್ನು ತಲುಪಿದ್ದಾರೆ.

ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭೂಕುಸಿತದಿಂದ ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದು, ಈ ಘಟನೆಯ ಬಗ್ಗೆ ತಿಳಿದ ನಂತರ ನಾನು ನಿನ್ನೆ ರಾತ್ರಿಯಿಂದ ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೆ. ಎನ್‌ಡಿಆರ್‌ಎಫ್‌ನ ಎರಡು ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿದ್ದು, ಇನ್ನೂ ಎರಡು ತಂಡಗಳು ಶೀಘ್ರದಲ್ಲೇ ತಲುಪಲಿವೆ ಎಂದು ತಿಳಿಸಿದ್ದಾರೆ.

''ಪ್ರಾಥಮಿಕ ಮಾಹಿತಿಯ ಪ್ರಕಾರ ಒಟ್ಟು 48 ಕುಟುಂಬಗಳು ಇಲ್ಲಿದ್ದು, ಸುಮಾರು 75 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಇದುವರೆಗೆ 5 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮೃತರ ವಾರಸುದಾರರಿಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದ್ದು, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ನಾವು ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ" ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+