ಮಹಾರಾಷ್ಟ್ರ: ಅಕೋಲಾದಲ್ಲಿ ಎರಡು ಗುಂಪುಗಳ ನಡುವಿನ ಹಿಂಸಾತ್ಮಕ ಘರ್ಷಣೆ: ಮಹಿಳೆ ಸಾವು, 25 ಬಂಧನ
ಅಕೋಲಾ ಮೇ 14: ಮಹಾರಾಷ್ಟ್ರದ ಅಕೋಲಾದ ಓಲ್ಡ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಸಣ್ಣ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಈ ಸಂದರ್ಭದಲ್ಲಿ ಹಲವಾರು ವಾಹನಗಳನ್ನು ಹಾನಿಗೊಳಗಾಗಿದ್ದು ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಅಕೋಲಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಮತ್ತು ಹಿಂಸಾಚಾರ ಇನ್‌ಸ್ಟಾಗ್ರಾಮ್ ನಲ್ಲಿ ಹಾಕಲಾದ ಪೋಸ್ಟ್‌ನಿಂದಾಗಿ ನಡೆದಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿವಾದಾತ್ಮಕ ಪೋಸ್ಟ್ ಹಿಂಸಾಚಾರಕ್ಕೆ ಕಾರಣವಾಗಿದೆ. ಹಿಂಸಾಚಾರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮಹಿಳೆ ಸಾವು, 25 ಜನ ಬಂಧನ
ಘರ್ಷಣೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಪೊಲೀಸರು ಸೇರಿದ್ದಾರೆ. ಕಲ್ಲು ತೂರಾಟದ ವೇಳೆ ಅವರಿಗೆ ಗಾಯಗಳಾಗಿವೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. 120 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈವರೆಗೆ 25 ಜನರನ್ನು ಬಂಧಿಸಲಾಗಿದೆ. ಗಲಭೆಗೆ ಪ್ರಚೋದನೆ ಮತ್ತು ಶಾಂತಿ ಕದಡುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
इंस्टाग्राम पर विवादित पोस्ट के बाद अकोला में हिंसा, एक की मौत । महाराष्ट्र के अकोला में दो समुदायों के बीच हिंसक झड़प हो गई, इस दौरान उपद्रवियों ने तोड़फोड़ के साथ ही आगजनी की अकोला में धारा 144 लागू ।#अकोला #AkolaViolance #Maharashtra pic.twitter.com/xVkBIYCPmd
— Namrata Dubey (@namrata_INDIATV) May 14, 2023
ಒಂದು ಸಮುದಾಯದ ಪ್ರವಾದಿಯ ಬಗ್ಗೆ ವಿವಾದಾತ್ಮಕ ಪೋಸ್ಟ್ ಮಾಡಲಾಗಿದ್ದು ಹಿಂಸಾಚಾರ ಕಾರಣ ಎನ್ನಲಾಗುತ್ತಿದೆ. ಸದ್ಯ ಪೋಸ್ಟ್ ಅನ್ನು ಅಳಿಸಲಾಗಿದೆ. ಆದರೆ ಎರಡೂ ಗುಂಪಿನವರು ಜಗಳವಾಡಿಕೊಂಡು ವಿಷಯ ಘರ್ಷಣೆಗೆ ತಿರುಗಿದೆ. ಹಿಂಸಾಚಾರದ ವೇಳೆ ಸುಮಾರು 8 ರಿಂದ 10 ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಬಲಪ್ರಯೋಗ ಮಾಡಬೇಕಾಯಿತು.
ಸೆಕ್ಷನ್ 144 ಜಾರಿ
ಸ್ಥಳದಲ್ಲಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೀಮಾ ಅರೋರಾ ಆದೇಶದ ಮೇರೆಗೆ ಅಕೋಲಾ ನಗರದಲ್ಲಿ ಸೆಕ್ಷನ್-144 ಜಾರಿಗೊಳಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಅಕೋಲಾ ಜಿಲ್ಲಾಧಿಕಾರಿ ನೀಮಾ ಅರೋರಾ, ಎರಡು ಗುಂಪುಗಳ ನಡುವಿನ ಹಿಂಸಾಚಾರದ ನಂತರ ನಗರದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಸಾಕ್ಷಿಗಳ ಆಧಾರದ ಮೇಲೆ ಉಳಿದ ಗಲಭೆಕೋರರಿಗಾಗಿ ಶೋಧ ನಡೆಯುತ್ತಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಮಹಾರಾಷ್ಟ್ರ ರಾಜ್ಯ ಮೀಸಲು ಪೊಲೀಸ್ ಪಡೆ (ಎಸ್‌ಆರ್‌ಪಿಎಫ್) ಮತ್ತು ಗಲಭೆ ನಿಯಂತ್ರಣ ಪೊಲೀಸ್ ಪಡೆ (ಆರ್‌ಸಿಪಿಎಫ್) ಅನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ.
ಗಮನಾರ್ಹವಾಗಿ, ಇದು ಅಕೋಲಾದಲ್ಲಿ ವರದಿಯಾದ ಎರಡನೇ ಘಟನೆಯಾಗಿದೆ. ಕೆಲವು ದಿನಗಳ ಹಿಂದೆ, ಅಕೋಟ್ ಫೈಲ್ ಪ್ರದೇಶದ ಶಂಕರ್ ನಗರ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿತ್ತು.












Click it and Unblock the Notifications