ಭಾರತ್ ಜೋಡೋನಲ್ಲಿ ರಾಷ್ಟ್ರಗೀತೆಗೆ ಅವಮಾನ? ರಾಹುಲ್ ವಿರುದ್ಧ ಬಿಜೆಪಿ ಕಿಡಿ

ಮುಂಬೈ, ನ.17: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿದ್ದು, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ವಾಸಿಮ್‌ನಲ್ಲಿ ಬುಧವಾರ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ಕೆಲವು ನಿಮಿಷಗಳ ಕಾಲ ರಾಷ್ಟ್ರಗೀತೆಯ ಬದಲಿಗೆ ತಪ್ಪಾಗಿ ನೇಪಾಳದ ರಾಷ್ಟ್ರಗೀತೆ ಹಾಕಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ ನಾಯಕ ನಿತೇಶ್ ರಾಣೆ ಅವರು ಘಟನೆಯ ವಿಡಿಯೋವನ್ನು ಹಂಚಿಕೊಂಡು "ಪಾಪು ಕಾ ಕಾಮಿಡಿ ಸರ್ಕಸ್" ಎಂದು ಟ್ವೀಟ್ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಕೂಡ ಇದೇ ವಿಡಿಯೋವನ್ನು ಹಂಚಿಕೊಂಡಿದ್ದು, "ಇದೇನಿದು ರಾಹುಲ್ ಗಾಂಧಿ?" ಎಂದು ಪ್ರಶ್ನಿಸಿದ್ದಾರೆ.

Maharashtra: Wrong Song Played Instead Of National Anthem In Bharat Jodo Yatra

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋವು ವಾಸಿಮ್‌ನಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವಿಡಿಯೋವಾಗಿದೆ. ರಾಹುಲ್ ಗಾಂಧಿಯವರ ಭಾಷಣದ ಕೊನೆಯಲ್ಲಿ, ರಾಷ್ಟ್ರಗೀತೆ ನುಡಿಸುವಂತೆ ರಾಹುಲ್ ಗಾಂಧಿ ಮೈಕ್‌ನಲ್ಲಿ ಘೋಷಿಸಿದ್ದರು. ವೇದಿಕೆಯಲ್ಲಿದ್ದ ಮುಖಂಡರು ಎಲ್ಲರು ಎದ್ದು ನಿಂತಿದ್ದರು. ಆದರೆ ರಾಷ್ಟ್ರಗೀತೆ ಬದಲಿಗೆ ನೇಪಾಳದ ರಾಷ್ಟ್ರಗೀತೆ ಹಾಕಲಾಗಿದೆ ಕೆಲ ಸೆಕೆಂಡುಗಳಲ್ಲಿಯೇ ರಾಹುಲ್ ಗಾಂಧಿ ಸನ್ನೆ ಮಾಡಿ ಹಾಡನ್ನು ನಿಲ್ಲಿಸುತ್ತಾರೆ. ಬಳಿಕ ಜನ ಗಣ ಮನ ಶುರುವಾಗಿದೆ.

ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಿಜೆಪಿಗರು ಇದನ್ನು ವೈರಲ್ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪ್ರಸ್ತುತ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿದೆ. ಬೆಲೆ ಏರಿಕೆ ವಿಚಾರವಾಗಿ ಬುಧವಾರ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಸೆಪ್ಟೆಂರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಇದುವರೆಗೆ ಆರು ರಾಜ್ಯಗಳ 28 ಜಿಲ್ಲೆಗಳನ್ನು ಸುತ್ತಿದೆ. ಪ್ರಸ್ತುತ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿದ್ದು, ನವೆಂಬರ್ 20ರಂದು ಮಧ್ಯಪ್ರದೇಶಕ್ಕೆ ಪ್ರವೇಶಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+