Arun Gandhi Death: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ನಿಧನ
ಮುಂಬೈ,ಮೇ3: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಮಂಗಳವಾರ ನಿಧನರಾದರು.
ಸಾಮಾಜಿಕ ರಾಜಕೀಯ ಹೋರಾಟಗಾರರು ಹಾಗೂ ಲೇಖಕರು ಆದ ಅರುಣ್ ಗಾಂಧಿ (89) ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಮಂಗಳವಾರ ಮೃತಪಟ್ಟಿದ್ದು, ಅಂತ್ಯಕ್ರಿಯೆಯನ್ನು ಕೊಲ್ಲಾಪುರದಲ್ಲಿ ನಡೆಸಲಾಯಿತು ಎಂದು ಅರುಣ್ ಗಾಂಧಿ ಅವರ ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.

ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ, ಸಾಮಾಜಿಕ ಕಾರ್ಯಕರ್ತನಾಗಿ ತಮ್ಮ ಅಜ್ಜನಾದ ಮಹಾತ್ಮ ಗಾಂಧಿ ಅವರ ಹೆಜ್ಜೆಗಳನ್ನು ಅನುಸರಿಸಿದರು.
ದಿ ಗಿಫ್ಟ್ ಆಫ್ ಆ್ಯಂಗರ್ ಆಂಡ್ ಅದರ್ ಲೆಸ್ಸನ್ಸ್ ಫ್ರಂ ಮೈ ಗ್ರ್ಯಾಂಡ್ಫಾದರ್ ಮಹಾತ್ಮ ಗಾಂಧಿ ಸೇರಿದಂತೆ ಅರುಣ್ ಗಾಂಧಿ ಅವರು ಕೂಡ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ.
1987ರಲ್ಲಿ ಅರುಣ್ ಗಾಂಧಿ ಅವರು ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದರು. ಟೆನ್ನೆಸ್ಸೀಯ ಮೆಂಫಿಸ್‌ನಲ್ಲಿ ತಮ್ಮ ಜೀವನದ ಹಲವು ವರ್ಷಗಳನ್ನು ಕಳೆದರು. ಕ್ರಿಶ್ಚಿಯನ್ ಬ್ರದರ್ಸ್ ವಿಶ್ವವಿದ್ಯಾಲಯದಲ್ಲಿ ಅಹಿಂಸೆಗೆ ಸಂಬಂಧಿಸಿದ ಸಂಸ್ಥೆಯನ್ನು ಸ್ಥಾಪಿಸಿದರು.












Click it and Unblock the Notifications