Mahua Moitra: ಭಾರತಕ್ಕಿಂತ ಬಾಂಗ್ಲಾದೇಶವೇ ಬೆಟರ್‌: ಸಂಸದೆ ಮಹುವಾ ಮೋಯಿತ್ರಾ ವಿವಾದಾತ್ಮಕ ಹೇಳಿಕೆ

ನವದೆಹಲಿ: ಟಿಎಂಸಿ (TMC) ಪಕ್ಷದ ಪ್ರಭಾವಿ ನಾಯಕಿ ಹಾಗೂ ಸಂಸದೆ ಮಹುವಾ ಮೋಯಿತ್ರಾ ಅವರು ದೇಶದಲ್ಲಿ ಸದಾ ಚರ್ಚೆಯಲ್ಲಿರುವ 'ಅಕ್ರಮ ವಲಸೆ' ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಭರದಲ್ಲಿ ಮಹುವಾ ಮೋಯಿತ್ರಾ ಅವರು ಭಾರತದ ಅಭಿವೃದ್ಧಿಯನ್ನು ನೆರೆಯ ಬಾಂಗ್ಲಾದೇಶಕ್ಕೆ ಹೋಲಿಕೆ ಮಾಡಿ ಮಾತನಾಡಿದ್ದಾರೆ.

ಮಹುವಾ ಮೋಯಿತ್ರಾ ಹೇಳಿದ್ದೇನು?

ಸಂಸತ್ತಿನಲ್ಲಿ ಅಕ್ರಮ ವಲಸಿಗರ ವಿಷಯದ ಕುರಿತು ಮಾತನಾಡಿದ ಮಹುವಾ ಮೋಯಿತ್ರಾ, ಕೇಂದ್ರ ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ್ದಾರೆ. "ನಿಜ ಹೇಳಬೇಕೆಂದರೆ, ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಬಂದು ವಾಸಿಸಲು ಯಾರಿಗೆ ತಾನೇ ಇಷ್ಟವಿದೆ? ನೀವೇ ಒಮ್ಮೆ ಅಂಕಿ-ಅಂಶಗಳನ್ನು ಗಮನಿಸಿ. ಭಾರತಕ್ಕಿಂತಲೂ ನೆರೆಯ ಬಾಂಗ್ಲಾದೇಶದಲ್ಲಿ ಉತ್ತಮ ಮೂಲಸೌಕರ್ಯ, ಜಿಡಿಪಿ ಪ್ರಗತಿ ಹಾಗೂ ಆರೋಗ್ಯ ರಕ್ಷಣೆಯ ವ್ಯವಸ್ಥೆಗಳು ಅತ್ಯುತ್ತಮವಾಗಿವೆ" ಎಂದು ಅವರು ಪ್ರತಿಪಾದಿಸಿದ್ದಾರೆ.

{image-mahuain-69321783070922jpeg kannada.oneindia.com}

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ಪ್ರಸ್ತಾಪಿಸಿದ ಮಹುವಾ, "ಇಡೀ ಪ್ರಪಂಚವೇ ಭಾರತದಲ್ಲಿ ಬಂದು ನೆಲೆಸಲು ಕಾತುರದಿಂದ ಕಾಯುತ್ತಿದೆ ಎಂದು ಮೋದಿ ಮತ್ತು ಅಮಿತ್ ಶಾ ಅವರು ಅಂದುಕೊಳ್ಳುವುದನ್ನು ನಿಲ್ಲಿಸಬೇಕು. ವಾಸ್ತವ ಹಾಗಿಲ್ಲ ಎಂದು ಟೀಕಿಸಿದ್ದಾರೆ. ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸುವ ನೆಪದಲ್ಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭಾರತದ್ದೇ ರಾಜ್ಯವಾದ ಪಶ್ಚಿಮ ಬಂಗಾಳದ ಕಾನೂನುಬದ್ಧ ಬೆಂಗಾಲಿ ಮಾತನಾಡುವ ಬಡ ವಲಸೆ ಕಾರ್ಮಿಕರನ್ನು ಅನಗತ್ಯವಾಗಿ ಗುರಿಪಡಿಸಲಾಗುತ್ತಿದೆ, ಬಂಧಿಸಲಾಗುತ್ತಿದೆ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; l ಕಾನೂನು ವ್ಯವಸ್ಥೆ ಹಾಳಗಿದೆ ಎಂದ MP

ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ

ಮಹುವಾ ಮೋಯಿತ್ರಾ ಅವರ ಈ ಹೇಳಿಕೆಯ ಪೋಸ್ಟರ್ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಪರ-ವಿರೋಧದ ಚರ್ಚೆಗಳು ಶುರುವಾಗಿವೆ. ದೇಶದ ಸಂಸದೆಯಾಗಿ ಭಾರತದ ಆರ್ಥಿಕತೆ ಮತ್ತು ಮೂಲಸೌಕರ್ಯವನ್ನು ಬಾಂಗ್ಲಾದೇಶಕ್ಕೆ ಹೋಲಿಸಿ ಕೀಳಾಗಿ ಮಾತನಾಡುವುದು ಸರಿಯಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ದೇಶದ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಮಹುವಾ ಅವರು ದೇಶದ ಆರ್ಥಿಕ ಮತ್ತು ಸಾಮಾಜಿಕ ಸೂಚ್ಯಂಕಗಳ ವಾಸ್ತವ ಸ್ಥಿತಿಯನ್ನು ಎತ್ತಿ ತೋರಿಸಿದ್ದಾರೆ. ಅಕ್ರಮ ವಲಸೆಯ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ದೇಶದ ನಿಜವಾದ ಅಭಿವೃದ್ಧಿಯ ಕಡೆ ಗಮನ ಹರಿಸಬೇಕು ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದಾರೆ ಎಂದೂ ಕೆಲ ಬೆಂಬಲಿಗರು ವಾದಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಹಾಗೂ ಸಂಸತ್ತಿನಲ್ಲಿ ತಮ್ಮ ಖಡಕ್ ಭಾಷಣಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಮಹುವಾ ಮೋಯಿತ್ರಾ ಅವರ ಈ ಹೊಸ ಹೇಳಿಕೆಯು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಮಹುವಾ ಮೊಯಿತ್ರಾ ಅವರ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ದೇಶದ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವನ್ನು ಮೊಯಿತ್ರಾ ಹಗುರವಾಗಿ ಪರಿಗಣಿಸುತ್ತಿದ್ದಾರೆ ಮತ್ತು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಕ್ರಮ ನುಸುಳುವಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಗಡಿ ರಕ್ಷಣಾ ಪಡೆಗಳ ಶ್ರಮವನ್ನು ಇಂತಹ ಹೇಳಿಕೆಗಳು ಅವಮಾನಿಸುತ್ತವೆ ಎಂದು ಟೀಕಿಸಿದೆ. ಭಾಷೆ ಮತ್ತು ಗುರುತಿನ ಆಧಾರದ ಮೇಲೆ ಭಾರತೀಯ ನಾಗರಿಕರನ್ನು ತಾರತಮ್ಯ ಮಾಡಬಾರದು ಎಂದು ವಿರೋಧ ಪಕ್ಷದ ನಾಯಕರು ಮೊಯಿತ್ರಾ ಪರ ನಿಂತಿದ್ದಾರೆ. ಪಶ್ಚಿಮ ಬಂಗಾಳದ ಜನರಿಗೆ ಭಾರತದ ಯಾವುದೇ ಭಾಗದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಸಾಂವಿಧಾನಿಕ ಹಕ್ಕಿದೆ. ಕೇವಲ ಭಾಷೆಯ ಆಧಾರದ ಮೇಲೆ ಅವರ ಪೌರತ್ವವನ್ನು ಪ್ರಶ್ನಿಸುವುದು ತಪ್ಪು ಎಂದು ವಾದಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+