Mahua Moitra: ಅವ್ರು ಅನೈತಿಕ, ವೈಯಕ್ತಿಕ ಪ್ರಶ್ನೆ ಕೇಳಿದ್ರು- ಸದನ ಸಮಿತಿ ವಿಚಾರಣೆಯಿಂದ ಹೊರನಡೆದ ಮಹುವಾ ಮೊಯಿತ್ರಾ
ಸಂಸತ್ತಿನ ನೀತಿ ನಿಯಮಗಳ ಸಮಿತಿಯ ಮುಖ್ಯಸ್ಥರು ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಆರೋಪಿಸಿದ್ದಾರೆ.
ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಇಚ್ಛೆಯ ಮೇರೆಗೆ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ಲಂಚ ಸ್ವೀಕರಿಸಿದ್ದಾರೆ ಎಂಬ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಆರೋಪಿಸಿದ್ದಾರೆ. ಇದನ್ನು ಸದನ ಸಮಿತಿಯು ತನಿಖೆ ನಡೆಸುತ್ತಿದೆ.

ಸದನ ಸಮಿತಿಗೆ ಬರೆದ ಪತ್ರದಲ್ಲಿ, ತಮ್ಮ ಮೇಲಿನ ಆರೋಪಗಳನ್ನು ಮಹುವಾ ತಿರಸ್ಕರಿಸಿದ್ದಾರೆ. ಲಂಚ ನೀಡಿರುವ ಆರೋಪ ಎದುರಿಸುತ್ತಿರುವ ಉದ್ಯಮಿ ದರ್ಶನ್ ಹೀರಾನಂದಾನಿ ಮತ್ತು ದೂರುದಾರರಾದ ವಕೀಲ ಜೈ ದೇಹದ್ರಾಯಿ ಅವರನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ಮೊಯಿತ್ರಾ ಒತ್ತಾಯಿಸಿದ್ದಾರೆ.
ಮೊಯಿತ್ರಾ ಅವರಿಗೆ ಕೇಳಲಾದ ಸಮಿತಿಯ ಅಧ್ಯಕ್ಷರ ಪ್ರಶ್ನೆಗಳು 'ಅಗೌರವ ಮತ್ತು ಅನೈತಿಕ' ಎಂದು ಕಾಂಗ್ರೆಸ್ ಸಂಸದ ಮತ್ತು ಪ್ಯಾನಲ್ ಸದಸ್ಯ ಎನ್ ಉತ್ತಮ್ ಕುಮಾರ್ ರೆಡ್ಡಿ ಸಹ ಆರೋಪಿಸಿದ್ದಾರೆ
ಅಕ್ಟೋಬರ್ 19 ರಂದು ಸಲ್ಲಿಸಿದ ಅಫಿಡವಿಟ್‌ನಲ್ಲಿ, ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹೀರಾನಂದಿನಿಗೆ ಒದಗಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅಕ್ಟೋಬರ್ 15 ರಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿ ಅದಾನಿ ಅವರ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತಲು ಮಹುವಾ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದ ಅವರು ಸಮಿತಿಯು ವರದಿ ಸಲ್ಲಿಸುವವರೆಗೆ ಅವರನ್ನು ಸದನದಿಂದ ಅಮಾನತುಗೊಳಿಸುವಂತೆ ಕೋರಿದ್ದಾರೆ.
ಏತನ್ಮಧ್ಯೆ, ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ತಮ್ಮ ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹೀರಾನಂದನಿಗೆ ನೀಡಿದ್ದರು. ಆದರೆ ಅವರಿಂದ ಯಾವುದೇ ಹಣವನ್ನು ತೆಗೆದುಕೊಳ್ಳಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಕೇಂದ್ರ ತನಿಖಾ ದಳಕ್ಕೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಇಂದು ಸದನ ಸಮಿತಿಯು ಮೊಹುವಾ ಅವರ ವಿಚಾರಣೆಗೆ ಕರೆದಿತ್ತು. ಆದರೆ, ಮೊಹುವಾ ಅವರು ಈ ವಿಚಾರಣೆಯಿಂದ ಹೊರಬಂದಿದ್ದಾರೆ.












Click it and Unblock the Notifications