Mahua Moitra: ಸಂಸತ್ತಿನ ನೀತಿ ನಿಯಮಗಳ ಸಮಿತಿಯಿಂದ ಸಂಸದೆ ಮಹುವಾ ಮೊಯಿತ್ರಾ ವಿಚಾರಣೆ- ಇಲ್ಲಿವೆ ಪ್ರಮುಖ ಅಂಶಗಳು
ನವದೆಹಲಿ, ಅಕ್ಟೋಬರ್ 02: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿಚಾರಣೆ ನಡೆಯಲಿದೆ. ಸಂಸತ್ತಿನ ನೀತಿ ನಿಯಮಗಳ ಸಮಿತಿಯು ಈ ವಿಚಾರಣೆಯನ್ನು ಮಾಡಲಿದೆ.
ತೃಣಮೂಲ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟಕ್ಕೆ ಈ ಆರೋಪವು ಕಾರಣವಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೀತಿ ನಿಯಮಗಳ ಸಮಿತಿ ಮುಂದೆ ಹಾಜರಾಗಲಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಎತ್ತುವುದಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಮೊಯಿತ್ರಾ ಲಂಚ ಮತ್ತು ಹಣಕಾಸಿನ ಅನುಕೂಲಗಳನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಟಿಎಂಸಿ ಸಂಸದೆ ಮೊಯುತ್ರಾ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ, ತಮ್ಮ ಸಂಸತ್ತಿನ ಲಾಗಿನ್ ಐಡಿಯನ್ನು ಹಿರಾನಂದನಿ ಅವರೊಂದಿಗೆ ಹಂಚಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಘಟನೆ ಕುರಿತ ಪ್ರಮುಖ ಅಂಶಗಳು
ಲಂಚ, ಉಡುಗೊರೆಗಳು ಮತ್ತು ಇತರ ಹಣಕಾಸಿನ ಲಾಭಗಳನ್ನು ಮೊಯಿತ್ರಾ ಪಡೆದಿದ್ದಾರೆ. ದುಬೈನಿಂದ ತಮ್ ಸಂಸದೀಯ ಖಾತೆಗೆ ಲಾಗ್ ಇನ್ ಮಾಡಿರುವ ಹಿರಾನಂದನಿ ಈ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಬಿಲಿಯನೇರ್ ಗೌತಮ್ ಅದಾನಿಯನ್ನು ಗುರಿಯಾಗಿಟ್ಟುಕೊಂಡು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ಅವರು ಈ ಲಂಚವನ್ನು ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ದೂರು ನೀಡಿದ್ದಾರೆ.
#WATCH | TMC MP Mahua Moitra arrives at the Parliament in Delhi.
— ANI (@ANI) November 2, 2023
She is appearing before the Parliament Ethics Committee in connection with the 'cash for query' charge against her. pic.twitter.com/Hl4ZqG3eEl
ಈ ಕುರಿತು ಪ್ರತಿಕ್ರಿಯಿಸಿರುವ ಮೊಯಿತ್ರಾ ಅವರು ದೇಹದ್ರಾಯ್ ಮತ್ತು ಹಿರಾನಂದನಿ ಅವರನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಅಕ್ಟೋಬರ್ 26 ರಂದು ದೇಹದ್ರಾಯ್ ಸಮಿತಿಯ ಮುಂದೆ ಮೊಯಿತ್ರಾ ಹಾಜರಾಗಿದ್ದರು. ಹಿರಾನಂದನಿ ಅವರೊಂದಿಗೆ ತಮ್ಮ ಲಾಗ್ ಇನ್ ಐಡಿಯನ್ನು ಹಂಚಕೊಂಡಿರುವುದಾಗಿ ಮೊಯಿತ್ರಾ ಒಪ್ಪಿಕೊಂಡಿದ್ದಾರೆ.

ಹಿರಾನಂದಾನಿ ಅವರು ಮೊಯಿತ್ರಾ ಅವರಿಗೆ ಉಡುಗೊರೆಗಳನ್ನು ನೀಡಿದ್ದಾಗಿ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.
ಟಿಎಂಸಿ ಸಂಸದೆ ಅದಾನಿ ಗ್ರೂಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಬಯಸಿದ್ದಾರೆ ಎಂದು ಅವರು ಆರೋಪಿಸಲಾಗಿದೆ.
ಆಪಾದಿತ ಅಪರಾಧವನ್ನು ತನಿಖೆ ಮಾಡಲು ಸಮಿತಿಗೆ ಅಧಿಕಾರವಿಲ್ಲ. ಅಂತಹ ಪ್ರಕರಣಗಳನ್ನು ತನಿಖಾ ಸಂಸ್ಥೆಗಳು ಮಾತ್ರ ತೆಗೆದುಕೊಳ್ಳಬಹುದು ಎಂದು ಮೊಯಿತ್ರಾ ಹೇಳಿದ್ದಾರೆ.
ಮೊಯಿತ್ರಾ ವಿರುದ್ಧದ ಆರೋಪಗಳು ಸಾಬೀತಾದರೆ, ಅದು ವಿಶೇಷ ಹಕ್ಕುಗಳ ಉಲ್ಲಂಘನೆ ಎಂದರ್ಥ ಮತ್ತು ಲೋಕಸಭೆಯಿಂದ ಅವರನ್ನು ಅಮಾನತುಗೊಳಿಸಬಹುದು.
ಮೊಯಿತ್ರಾ ಅವರ ಸಂಸದೀಯ ಖಾತೆಯನ್ನು ದುಬೈನಿಂದ 47 ಬಾರಿ ಲಾಗ್ ಇನ್ ಮಾಡಲಾಗಿದೆ ಎಂದು ಮೂಲಗಳು ವರದಿ ಮಾಡಿವೆ. ದರ್ಶನ್ ಹಿರಾನಂದಾನಿ ದುಬೈ ಮೂಲದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದಾರೆ ಎಂದು ತಿಳಿದುಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications