ದಲಿತ ಬಾಲಕಿಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ
ಜೈಪುರ, ಜುಲೈ 15: ರಾಜಸ್ಥಾನದ ಕರೌಲಿಯಲ್ಲಿ 18 ವರ್ಷದ ದಲಿತ ಬಾಲಕಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಬಾಲಕಿಯ ಶವ ಗುರುವಾರ ಬಾವಿಯಲ್ಲಿ ಪತ್ತೆಯಾಗಿತ್ತು. ಆಕೆಯನ್ನು ಅಪಹರಿಸಲಾಗಿದೆ ಎಂದು ಹೇಳಲಾಗಿದೆ ಮತ್ತು ನಂತರ ಗುಂಡೇಟಿನ ಗಾಯ ಮತ್ತು ಆಸಿಡ್ ಸುಟ್ಟಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ ಸಾವಿಗೆ ಗುಂಡೇಟಿನ ಗಾಯವೇ ಕಾರಣ ಎಂದು ತಿಳಿದು ಬಂದಿದೆ.

ಕರೌಲಿ ಪೊಲೀಸ್ ವರಿಷ್ಠಾಧಿಕಾರಿ ಮಮತಾ ಗುಪ್ತಾ ಮಾತನಾಡಿ, ದಲಿತ ಬಾಲಕಿಯ ಹತ್ಯೆಯ ಪ್ರಮುಖ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಾಲಕಿಯ ಕುಟುಂಬ ಸದಸ್ಯರು ಶವವನ್ನು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ. ಪರಿಹಾರ ಮತ್ತು ಇತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬದೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನ ಉಸ್ತುವಾರಿ ಅರುಣ್ ಸಿಂಗ್ ಅವರು ಕರೌಲಿಯಲ್ಲಿ ಬಾಲಕಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು,
ತೋಡಭೀಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಪಿ ಆರ್ ಮೀನಾ ಅವರು ಮಬಾಲಕಿಯ ಶವವನ್ನು ಇರಿಸಲಾಗಿರುವ ಕರೌಲಿಯ ಆಸ್ಪತ್ರೆಗೆ ತಲುಪಿ, ಬಾಲಕಿಯ ಕುಟುಂಬ ಸದಸ್ಯರೊಂದಿಗೆ ಧರಣಿ ಕುಳಿತಿರುವ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರನ್ನು ಭೇಟಿ ಮಾಡಿದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ಪರಿಹಾರ ನೀಡಬೇಕು ಎಂದು ಬಾಲಕಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ವಿರೋಧ ಪಕ್ಷಗಳ ಸದಸ್ಯರು ಶುಕ್ರವಾರ ರಾಜಸ್ಥಾನ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಸರ್ಕಾರದಿಂದ ಪ್ರತಿಕ್ರಿಯೆಗೆ ಒತ್ತಾಯಿಸಿದರು.
ಇಂದು ಮುಂಜಾನೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.












Click it and Unblock the Notifications