ಮೈನ್‌ಪುರಿ ಉಪಚುನಾವಣೆ 2022: ಡಿಂಪಲ್ ಯಾದವ್ ಎಸ್‌ಪಿ ಅಭ್ಯರ್ಥಿ

ಲಕ್ನೋ ನವೆಂಬರ್ 10: ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರನ್ನು ಮೈನ್‌ಪುರಿ ಲೋಕಸಭಾ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ಮೈನ್‌ಪುರಿ ಲೋಕಸಭಾ ಕ್ಷೇತ್ರವು ತೆರವಾಗಿದ್ದು, ಉಪಚುನಾವಣೆ ನಡೆಯುತ್ತಿದೆ. ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರನ್ನು ಎಸ್ಪಿ ನಾಮನಿರ್ದೇಶನ ಮಾಡಿದೆ.

ಡಿಂಪಲ್ ಯಾದವ್ ಅವರನ್ನು ಸ್ಪರ್ಧಿಸಬೇಕು ಎಂದು ಎಸ್ಪಿ ವಕ್ತಾರ ಅನುರಾಗ್ ಭದೌರಿಯಾ ಅವರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಮತ್ತು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ದಾಖಲೆ ಮತಗಳಿಂದ ಗೆದ್ದು ಡಿಂಪಲ್ ಯಾದವ್ ಅವರನ್ನು ಲೋಕಸಭೆಗೆ ಕಳುಹಿಸಲು ಪಕ್ಷ ಯೋಚಿಸಿದೆ.

Mainpuri By-Election 2022: Dimple Yadav Candidate from Mainpuri

ಹಲವು ರಾಜ್ಯಗಳ ಐದು ವಿಧಾನಸಭಾ ಸ್ಥಾನಗಳು ಹಾಗೂ ಉತ್ತರಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರಕ್ಕೆ ಡಿಸೆಂಬರ್ 5ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ವಿಧಾನಸಭೆ ಸ್ಥಾನಗಳು ಉತ್ತರಪ್ರದೇಶ, ಒಡಿಶಾ, ಬಿಹಾರ ಹಾಗೂ ಛತ್ತೀಸ್‌ಗಢದಲ್ಲಿ ಹರಡಿಕೊಂಡಿವೆ.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದಾಗಿ ಮೈನ್‌ಪುರಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ 2019ರಿಂದ ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿತರಾಗಿ, ಶಿಕ್ಷೆಗೆ ಗುರಿಯಾದ ನಂತರ ಅನರ್ಹಗೊಳಸಲ್ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ರಾಂಪುರ ವಿಧಾನಸಭಾ ಸ್ಥಾನವು ತೆರವಾಗಿತ್ತು.

ಇನ್ನೂ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಒಡಿಶಾದ ಪಡಂಪುರ, ರಾಜಸ್ಥಾನದ ಸರ್ದರ್ಶಹರ್, ಬಿಹಾರದ ಕುರ್ಹಾನಿ ಹಾಗೂ ಛತ್ತೀಸ್‌ಗಢದ ಭಾನುಪ್ರತಾಪುರ್‌ದಲ್ಲಿ ಡಿ.5ರಂದು ಉಪಚುನಾವಣೆಯಲ್ಲಿ ಮತದಾನ ನಡೆಯಲಿದೆ. ಎಲ್ಲಾ ಉಪಚುನಾವಣೆಯ ಮತ ಎಣಿಕೆ ಡಿಸೆಂಬರ್ 8ರಂದು ನಡೆಯಲಿದೆ. ಡಿಸೆಂಬರ್ 8ರಂದು ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮತ ಎಣಿಕೆಯೂ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+