ಕೋಲ್ಕತ್ತಾ : ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಆಕಸ್ಮಿಕ
ಕೋಲ್ಕತ್ತಾ, ಸೆಪ್ಟೆಂಬರ್ 16 : ಕೋಲ್ಕತ್ತಾದ ಪ್ರಮುಖ ವ್ಯಾಪಾರಿ ಕೇಂದ್ರದಲ್ಲಿ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದೆ. 30 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿವೆ.
ಕೋಲ್ಕತ್ತಾದ ಭಾಗ್ರಿ ಮಾರ್ಕೆಟ್ನಲ್ಲಿ ಭಾನುವಾರ ತಡರಾತ್ರಿ 2.30ರ ಸುಮಾರಿಗೆ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಹುಹಂತದ ಕಟ್ಟಡದ ಹಲವು ಮಹಡಿಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಅಗ್ನಿ ಆಕಸ್ಮಿಕದಲ್ಲಿ ಇದುವರೆಗೂ ಯಾವುದೇ ಪ್ರಾಣಹಾನಿಯಾಗಿಲ್ಲ. ಮಾರುಕಟ್ಟೆಯ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.
30 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಮಾರುಕಟ್ಟೆಗೆ ಸಂಪರ್ಕ ಕಲ್ಪಿಸುವ ಮೂರು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಮಾರುಕಟ್ಟೆಯ ಕೆಳಗಿನ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು, 5 ಗಂಟೆಗಳ ಕಾರ್ಯಾಚರಣೆ ಬಳಿಕವೂ ನಮಗೆ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.
ಮಾರುಕಟ್ಟೆ ಕಟ್ಟಡದ ಸುತ್ತಮುತ್ತಲೂ ಹೆಚ್ಚು ಜಾಗವಿಲ್ಲ. ಆದ್ದರಿಂದ, ಹೈಡ್ರಾಲಿಕ್ ಉಪಕರಣಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications