ಹರಿಯಾಣ ಕೆಮಿಕಲ್ ಪ್ಲಾಂಟ್‌ನಲ್ಲಿ ಭಾರೀ ಅಗ್ನಿ ಅವಘಡ: ಕಾರ್ಯಾಚರಣೆಗೆ ದೆಹಲಿ ಅಗ್ನಿಶಾಮಕದಳ ಸಾಥ್

ಹರಿಯಾಣ, ಏಪ್ರಿಲ್ 17: ಹರಿಯಾಣದ ಸೋನಿಪತ್‌ನ ಕುಂಡ್ಲಿ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾನುವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹರಿಯಾಣದ ವಿಶೇಷ ಕೋರಿಕೆಯ ಮೇರೆಗೆ, ದೆಹಲಿ ಅಗ್ನಿಶಾಮಕ ಸೇವೆಯು ತನ್ನ ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ಕಳುಹಿಸಲಾಗಿದೆ.

ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುವುದು ಇನ್ನೂ ಕೂಡಾ ತಿಳಿದು ಬಂದಿಲ್ಲ. ಪ್ರಸ್ತುತ ರಾಸಾಯನಿಕ ಕಾರ್ಖಾನೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಎಎನ್‌ಐ 12 ಸೆಕೆಂಡ್‌ಗಳ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಕಾರ್ಖಾನೆಯಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಮುಂಬೈನ ನಲಸೋಪರದ ಪಾಂಡೆ ನಗರ ಪ್ರದೇಶದ ಗೋಡೌನ್‌ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Major fire breaks out at Haryana chemical plant, Delhi Firefighters Join Operation

ಮುಂಬೈ ಅಗ್ನಿಶಾಮಕ ದಳದ ಪ್ರಕಾರ, ಮಾರ್ಚ್ 29 ರ ಸಂಜೆ ಮುಂಬಾದೇವಿ ದೇವಸ್ಥಾನದ ಬಳಿಯ ಪಟೇಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐದು ಜನರು ಗಾಯಗೊಂಡಿದ್ದರು. ಇನ್ನು ಭಾನುವಾರ ಗ್ರೀನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಹೊಸದಿಲ್ಲಿಯ ಉಪಹಾರ್ ಸಿನಿಮಾ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯನ್ನು ನಿಯಂತ್ರಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಸಿನಿಮಾ ಹಾಲ್‌ನಲ್ಲಿದ್ದ ಪೀಠೋಪಕರಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

Recommended Video

      ಫುಲ್ ಜೋಶ್‌ನಲ್ಲಿ KGF 2 ನೋಡಿದ RCB ಪ್ಲೇಯರ್ಸ್ ಏನ್‌ ಹೇಳ್ಬೋದು?ಗೆಸ್ ಮಾಡಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+