ತಿರುಪತಿ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ

ಆಂಧ್ರಪ್ರದೇಶದ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಇರುವ ಅಂಗಡಿಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದಾಗಿ ಯಾರಿಗೂ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ದೇವಸ್ಥಾನದ ಸಮೀಪವಿರುವ ಫೋಟೋ ಫ್ರೇಮ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Major Fire Breaks Out Near Govindaraja Swamy Temple in Tirupati

ಬೆಂಕಿಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಾಲಯದ ಬಳಿ ಬೆಂಕಿ ಮತ್ತು ಭಾರಿ ಹೊಗೆಯನ್ನು ನೋಡಬಹುದಾಗಿದೆ. ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+