ಮಲಯಾಳಂ ನಟಿ ಕಿಡ್ನಾಪ್ : ಕೊಯಮತ್ತೂರಿನಲ್ಲಿ 7 ಕಾಮುಕರ ಬಂಧನ
ಬಹುಭಾಷಾ ನಟಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು 7 ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಕೊಯಮತ್ತೂರಿನ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ, ಕೇರಳಕ್ಕೆ ಕರೆ ತರಲಾಗಿದೆ.
ಕೊಚ್ಚಿ, ಫೆಬ್ರವರಿ 19: ಬಹುಭಾಷಾ ನಟಿ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಏಳು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಕೊಯಮತ್ತೂರಿನ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ, ಕೇರಳಕ್ಕೆ ಕರೆ ತರಲಾಗಿದೆ.
ಫೆಬ್ರವರಿ 17 ರ ರಾತ್ರಿ 10.30 ಸುಮಾರಿಗೆ ನಡೆದ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸುನಿಲ್ ಕುಮಾರ್ ನನ್ನು ಬಂಧಿಸಲಾಗಿದೆ. [ನಟಿ ಅಪಹರಣ, ಲೈಂಗಿಕ ಕಿರುಕುಳ?]
ನೆಂಡುಂಬಚ್ಚೆರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕ ಮಾರ್ಟಿನ್ ನನ್ನು ಶನಿವಾರವೇ ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಹೇಳಿದ್ದಾರೆ.
ನಟಿಯನ್ನು ಬ್ಲಾಕ್ ಮೇಲ್ ಮಾಡುವ ಉದ್ದೇಶದಿಂದಲೇ ಅವರ ಮಾಜಿ ಕಾರು ಚಾಲಕ ಹಾಗೂ ಆತನ ಗುಂಪು ಈ ಕೃತ್ಯ ಎಸಗಿದೆ. ಬಲವಂತಾಗಿ ಫೋಟೋ ಮತ್ತು ವಿಡಿಯೋ ಕೂಡ ಮಾಡಿಕೊಂಡಿದ್ದಾರೆ. ದೈಹಿಕವಾಗಿ ಹಲ್ಲೆ, ಕಿರುಕುಳ ನೀಡಲಾಗಿದೆ ಎಂದು ಪೊಲೀಸ್ ಮುಖ್ಯಸ್ಥ ಲೋಕನಾಥ್ ಹೇಳಿದ್ದಾರೆ
ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿಕೊಂಡಿರುವ ಸಿಎಂ ಪಿ ವಿಜಯನ್, ಇದೊಂದು ದುರದುಷ್ಟಕರ ಘಟನೆ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಚಿತ್ರರಂಗದ ಆಕ್ರೋಶ: ಈ ನಡುವೆ ನಟಿ ಅವರು ಧೃತಿಗೆಡಬಾರದು ನಾವು ನಿಮ್ಮೊಂದಿಗಿದ್ದೇವೆ ಎಂದು ಕೇರಳ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹೇಳಿದ್ದಾರೆ. ನಟ ಪೃಥ್ವಿರಾಜ್, ನಟಿ ಭಾಮಾ ಸೇರಿದಂತೆ ಸಾರ್ವಜನಿಕರು ಕೂಡಾ ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಮುಂದಾಗಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications