ಮಣಿಪುರ ರಣರಂಗವಾಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಮಣಿಪುರದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ವಾಗ್ದಾಳಿ ನಡೆಸಿದ್ದು, ಮಣಿಪುರವನ್ನು "ಯುದ್ಧಭೂಮಿ" ಯಾಗಿ ಪರಿವರ್ತಿಸಲಾಗಿದೆ ಎಂದು ಹೇಳಿದ್ದಾರೆ.
"147 ದಿನಗಳಿಂದ ಮಣಿಪುರದ ಜನರು ನರಳುತ್ತಿದ್ದಾರೆ, ಆದರೆ ಪ್ರಧಾನಿ ಮೋದಿಗೆ ರಾಜ್ಯಕ್ಕೆ ಭೇಟಿ ನೀಡಲು ಸಮಯವಿಲ್ಲ. ಈ ಹಿಂಸಾಚಾರದಲ್ಲಿ ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಭಯಾನಕ ಚಿತ್ರಗಳು ಮತ್ತೊಮ್ಮೆ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಈ ಕಲಹದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂಬುದು ಈಗ ಸ್ಪಷ್ಟವಾಗಿದೆ" ಎಂದು ಮಲ್ಲಿಕಾರ್ಜು ಖರ್ಗೆ ಎಕ್ಸ್ (ಟ್ವಿಟರ್) ನಲ್ಲಿ ಬರೆದಿದ್ದಾರೆ.

ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ಖರ್ಗೆ, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು "ಅಸಮರ್ಥ" ಎಂದು ಕರೆದರು ಮತ್ತು ಅವರನ್ನು ತಕ್ಷಣ ವಜಾಗೊಳಿಸುವಂತೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಮಣಿಪುರ ಗಲಭೆಯನ್ನು ನಿಯಂತ್ರಿಸುವಲ್ಲಿ ಇದು ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದರು.
For 147 days, people of Manipur are suffering, but PM Modi does not have time to visit the state.
— Mallikarjun Kharge (@kharge) September 27, 2023
The horrific images of students being targeted in this violence has once again shocked the entire nation.
It is now apparent that violence against women and children was weaponised…
ವಿದ್ಯಾರ್ಥಿಗಳ ಹತ್ಯೆ, ಮಣಿಪುರ ಉದ್ವಿಗ್ನ
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತೇಯಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯಿಂದಾಗಿ ಮಣಿಪುರದಲ್ಲಿ ಹೊಸ ಉದ್ವಿಗ್ನತೆ ಉಂಟಾಗಿದೆ. ಮಂಗಳವಾರ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮತ್ತೆ ಆರಂಭಿಸಲಾದ ನಂತರ ಇಬ್ಬರು ವಿದ್ಯಾರ್ಥಿಗಳ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಅವರು ಸಶಸ್ತ್ರ ಗುಂಪಿನ ತಾತ್ಕಾಲಿಕ ಕಾಡಿನ ಶಿಬಿರದಂತೆ ಕಂಡುಬರುವ ಹುಲ್ಲಿನ ಕಾಂಪೌಂಡ್‌ನಲ್ಲಿ ಕುಳಿತಿರುವುದನ್ನು ಕಾಣಬಹುದು.
ವಿದ್ಯಾರ್ಥಿಗಳು ಮತ್ತು ನಿವಾಸಿಗಳು ಪೂರ್ಣ ಶಕ್ತಿಯಿಂದ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಪ್ರತಿಭಟನಾಕಾರರು ಪೊಲೀಸರು ಮತ್ತು ರ್‍ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿಗಳೊಂದಿಗೆ ಘರ್ಷಣೆ ನಡೆಸಿದರು, 25 ರಿಂದ 30 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.
ಏತನ್ಮಧ್ಯೆ, ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳ ತಂಡವು ಏಜೆನ್ಸಿಯ ವಿಶೇಷ ನಿರ್ದೇಶಕ ಅಜಯ್ ಭಟ್ನಾಗರ್ ನೇತೃತ್ವದಲ್ಲಿ ಬುಧವಾರ ಇಂಫಾಲ್ ತಲುಪಲಿದ್ದು, ಇಬ್ಬರು ವಿದ್ಯಾರ್ಥಿಗಳ ಅಪಹರಣ ಮತ್ತು ಕೊಲೆ ಪ್ರಕರಣದ ಬಗ್ಗೆ ತನಿಖೆ ನಡೆಸಲಿದ್ದಾರೆ.
ಮಣಿಪುರ ಹಿಂಸಾಚಾರ
ಮೇ 3 ರಂದು ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾಯಿತು, ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದವು. ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟು ಮೈತೇಯಿ ಪಾಲನ್ನು ಹೊಂದಿದ್ದರೆ, ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಒಟ್ಟು ಜನಸಂಖ್ಯೆಯ 40 ಪ್ರತಿಶತದಷ್ಟಿದ್ದಾರೆ.
ಮೇ ತಿಂಗಳಿನಿಂದೀಚೆಗೆ, ರಾಜ್ಯದಲ್ಲಿ ನಡೆದ ಜನಾಂಗೀಯ ಘರ್ಷಣೆಗಳಲ್ಲಿ 175 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.












Click it and Unblock the Notifications