ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮಲ್ಲಿಕಾರ್ಜುನ ಖರ್ಗೆ
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಭಾನುವಾರ ಸಂಜೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯಾತ್ರಾರ್ಥಿಗಳಿಂದ ತುಂಬಿದ ಬಸ್ಸು ಕಂದಕಕ್ಕೆ ಉರುಳಿದ ಪರಿಣಾಮ 9 ಜನರು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲೇ ಈ ಭಯೋತ್ಪಾದಕ ದಾಳಿ ನಡೆದಿದೆ. ಘಟನೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಲವಾಗಿ ಖಂಡಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅವರ ಎನ್‌ಡಿಎ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿ ಹಲವಾರು ದೇಶಗಳ ಮುಖ್ಯಸ್ಥರು ದೇಶದಲ್ಲಿದ್ದಾಗಲೂ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯು ಕನಿಷ್ಠ 10 ಭಾರತೀಯರ ಜೀವಹಾನಿಗೆ ಕಾರಣವಾಗಿದೆ.
ನಮ್ಮ ಜನರ ಮೇಲಿನ ಈ ಭೀಕರ ಭಯೋತ್ಪಾದಕ ದಾಳಿಯನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸರ್ಕಾರ ಮತ್ತು ಅಧಿಕಾರಿಗಳು ತಕ್ಷಣ ನೆರವು ಮತ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Even while PM, Shri Narendra Modi and his NDA Govt get sworn in and heads of several countries are in the country, a dastardly terrorist attack on a bus carrying pilgrims has resulted in loss of lives of at least 10 Indians.
— Mallikarjun Kharge (@kharge) June 9, 2024
We unequivocally condemn this gruesome terror attack…
ಮೋದಿ ಭರವಸೆ ಸುಳ್ಳಾಗಿವೆ
ಕೇವಲ ಮೂರು ವಾರಗಳ ಹಿಂದೆ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆದಿತ್ತು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಘಟನೆಗಳು ನಿರಂತರವಾಗಿ ಮುಂದುವರೆದಿದೆ. ಮೋದಿ ಸರ್ಕಾರದಿಂದ ಶಾಂತಿ ಮತ್ತು ಸಹಜತೆಯನ್ನು ತರುವ ಎಲ್ಲಾ ಪ್ರಚಾರಗಳು ಸುಳ್ಳಾಗಿವೆ. ಭಯೋತ್ಪಾದನೆ ವಿರುದ್ಧ ಭಾರತ ಒಗ್ಗಟ್ಟಾಗಿ ನಿಂತಿದೆ ಎಂದು ಹೇಳಿದ್ದಾರೆ.
ಘಟನೆ ವಿವರ
ಬಸ್ ಶಿವ ಖೋರಿ ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ದಾಳಿ ನಡೆದಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಬಸ್ ಕಮರಿಗೆ ಬಿದ್ದಿದೆ. 9 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.












Click it and Unblock the Notifications