• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಹೈದರಾಬಾದ್‌ಗೆಬಂದ ಖರ್ಗೆ, ಭಾರತ್ ಜೋಡೋದಲ್ಲಿ ಭಾಗಿ

|
Google Oneindia Kannada News

ಹೈದರಾಬಾದ್‌, ನ. 01: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೈದರಾಬಾದ್‌ಗೆ ಬಂದಿಳಿದಿದ್ದಾರೆ. ಚಾರ್ಮಿನಾರ್ ಬಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಬಳಿಕ ಸಾರ್ವಜನಿಕ ಸಭೆಗೆ ಮಲ್ಲಿಕಾರ್ಜುನ ಖರ್ಗೆ ತೆರಳಲಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಖರ್ಗೆ ಭಾರತ್ ಜೋಡೋದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯನ್ನು ಬಲಿಪಶು ಮಾಡಿತಾ ಕಾಂಗ್ರೆಸ್?ಮಲ್ಲಿಕಾರ್ಜುನ ಖರ್ಗೆಯನ್ನು ಬಲಿಪಶು ಮಾಡಿತಾ ಕಾಂಗ್ರೆಸ್?

1990ರ ಅಕ್ಟೋಬರ್ 19 ರಂದು ಅವರ ತಂದೆ ಮತ್ತು ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸದ್ಭಾವನಾ ಯಾತ್ರೆಯನ್ನು ಆರಂಭಿಸಿದ ಚಾರ್ ಮಿನಾರ್‌ನಿಂದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಧ್ವಜಾರೋಹಣ ಮಾಡಲಿದ್ದಾರೆ. ಅಂದಿನಿಂದ ಕಾಂಗ್ರೆಸ್ ಪಕ್ಷವು ಪ್ರತಿ ವರ್ಷ ಚಾರ್ ಮಿನಾರ್‌ನಿಂದ ಧ್ವಜಾರೋಹಣ ಮಾಡುತ್ತಾ ಬಂದಿದೆ.

ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೈದರಾಬಾದ್‌ನ ನೆಕ್ಲೇಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಪ್ರತಿಮೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತ್ ಜೋಡೋ ಯಾತ್ರೆಗೆ ಸೇರಲಿದ್ದಾರೆ.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ 55 ನೇ ದಿನಕ್ಕೆ ಕಾಲಿಟ್ಟಿದೆ. ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿದೆ. ಕಳೆದ ವಾರ ಭಾರತ್ ಜೋಡೋ ಯಾತ್ರೆ ತೆಲಂಗಾಣವನ್ನು ಪ್ರವೇಶಿಸಿದೆ. ಅದಕ್ಕೂ ಮೊದಲು ರಾಹುಲ್ ಗಾಂಧಿ ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಸರಣಿ ಪಾದಯಾತ್ರೆ ನಡೆಸಿದ್ದಾರೆ.

Mallikarjun Kharge Lands In Hyderabad, He Will Join Bharat Jodo Yatra

24 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ಗಾಂಧಿಯೇತರ ಕುಟುಂಬದ ವ್ಯಕ್ತಿಯೊಬ್ಬರು ವಹಿಸಿಕೊಂಡಿದ್ದಾರೆ. ಗಾಂಧಿ ಕುಟುಂಬದವರು ಸ್ಪರ್ಧೆಯಿಂದ ಹೊರಗುಳಿದ ನಂತರ ನೇರ ಸ್ಪರ್ಧೆಯಲ್ಲಿ ಶಶಿ ತರೂರ್ ಅನ್ನು ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದಾರೆ. ವಿರೋಧ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಗೆ ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳು ಮೊದಲ ಸವಾಲಾಗಿವೆ.

ಮಲ್ಲಿಕಾರ್ಜುನ ಖರ್ಗೆ
Know all about
ಮಲ್ಲಿಕಾರ್ಜುನ ಖರ್ಗೆ
English summary
AICC president Mallikarjun Kharge landed in Hyderabad, He will join Congress leader Rahul Gandi lead Bharat Jodo Yatra. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X