ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಎಚ್‌ಡಿಕೆ ಕಿಡಿ; ಬಿಜೆಪಿ ನಾಯಕರು ಹೇಳಿದ್ದೇನು

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು, "ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎನ್ನುವ ಪುರಂದರದಾಸ ಸಾಲುಗಳನ್ನು ಉಲ್ಲೇಖಿಸಿದ್ದಾರೆ.

ರಾಷ್ಟ್ರದ ಗೌರವಾನ್ವಿತ ಪ್ರಧಾನಿಗಳಾದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ರಾಜಕೀಯ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆ. ಅವರ ಮಾತು ಮಾನವೀಯತೆಯ ಅಣಕ ಹಾಗೂ ಅವರಲ್ಲಿ ಅಡಗಿರುವ ನಿಗೂಢ ಕ್ರೂರ ಮನಃಸ್ಥಿತಿಯ ಪ್ರತೀಕ. ಅದುವೇ ಇಂತಹ ನುಡಿಮುತ್ತುಗಳನ್ನು ನುಡಿಸಿರಬೇಕು.

Mallikarjun Kharge Remarks on PM Modi Draw Sharp Criticism from Kumaraswamy R Ashoka Bjp

'ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ' ಎಂದು ಶ್ರೀ ಪುರಂದರದಾಸರು ಸುಮ್ಮನೆ ಹೇಳಿದ್ದಲ್ಲ, ಬಹುಶಃ ಇಂಥ ನಾಲಿಗೆಗಳನ್ನು ತಿದ್ದಬೇಕು ಎಂಬ ಉದ್ದೇಶದಿಂದಲೇ ಹೇಳಿರಬೇಕು. ಖರ್ಗೆ ಅವರ ಈ ಹೇಳಿಕೆಯನ್ನು ಖಂಡಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಪೂಜ್ಯ ತಂದೆಯವರನ್ನು ರಾಜಕೀಯ ಟಾರ್ಗೆಟ್ ಮಾಡಿಕೊಂಡು ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ. ಅವರ ವರ್ತನೆ ಕೇವಲ ಹತಾಶೆಯಷ್ಟೇ ಅಲ್ಲ, ನಾಚಿಕೆಗೇಡಿತನದ್ದು. ಇದು ಕಾಂಗ್ರೆಸ್ ಪಕ್ಷದ ಅಧಃಪತನದ ಪರಮಾವಧಿ. ಖರ್ಗೆ ಅವರು ಪ್ರಧಾನಿಗಳ ಕ್ಷಮೆ ಕೇಳಿ ತಮ್ಮ ಹಿರಿತನದ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಇನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಸಿರುವ ಅವಹೇಳನಕಾರಿ ಪದಗಳು ಕಾಂಗ್ರೆಸ್‌ನ ರಾಜಕೀಯ ಸಂಸ್ಕೃತಿಯ ಅಧಃಪತನಕ್ಕೆ ಸಾಕ್ಷಿ. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರ ಕುಟುಂಬದ ಬಗ್ಗೆಯೇ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ತನ್ನ ಹತಾಶೆ ಮತ್ತು ಹತಾಶ ಮನಸ್ಥಿತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ.

ವಿಚಾರಗಳ ಮೂಲಕ ರಾಜಕೀಯ ಎದುರಿಸುವ ಶಕ್ತಿ ಕಳೆದುಕೊಂಡಿರುವ ಕಾಂಗ್ರೆಸ್, ವೈಯಕ್ತಿಕ ನಿಂದನೆಗೆ ಇಳಿದಿರುವುದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ಇಂತಹ ಅಸಂಸ್ಕೃತ ರಾಜಕಾರಣಕ್ಕೆ ದೇಶದ ಜನತೆ ಎಂದಿಗೂ ಮನ್ನಣೆ ನೀಡುವುದಿಲ್ಲ ಎಂದೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.

ಇನ್ನು ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕವೂ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಂದೆಯವರ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಕೀಳುಮಟ್ಟದ ಹೇಳಿಕೆ ಅತ್ಯಂತ ಖಂಡನೀಯ. ಸರಣಿ ಚುನಾವಣಾ ಸೋಲುಗಳಿಂದ ದಿಕ್ಕೆಟ್ಟಿರುವ ಕಾಂಗ್ರೆಸ್, ಇಂದು ಎಲ್ಲಾ ಮಿತಿಗಳನ್ನು ಮೀರಿ ವೈಯಕ್ತಿಕ ನಿಂದನೆಗೆ ಇಳಿದಿದೆ. ಇದು ಕಾಂಗ್ರೆಸ್ ಪಕ್ಷದ ಹತಾಶೆ ಮತ್ತು ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ.

ಮಲ್ಲಿಕಾರ್ಜುನ ಖರ್ಗೆ ಅವರೇ, ನಿಮ್ಮ ಈ ಕೀಳುಮಟ್ಟದ ರಾಜಕೀಯ ಭಾಷೆಗೆ ದೇಶದ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ರಾಜಕೀಯ ವಿರೋಧವಿರಲಿ, ಆದರೆ ವೈಯಕ್ತಿಕ ದ್ವೇಷ ಸಲ್ಲದು. ಖರ್ಗೆ ಅವರೇ, ದೇಶದ ಜನತೆಯ ಮುಂದೆ ತಕ್ಷಣ ಕ್ಷಮೆಯಾಚಿಸಿ ಎಂದು ಆಗ್ರಹಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+