ಗೃಹಸಚಿವ ಅಮಿತ್ ಶಾ ಪತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ!
ನವದೆಹಲಿ: ದೇಶದ ಮೂಲೆ ಮೂಲೆಯಲ್ಲೂ ಈಗ ಮಣಿಪುರ ಹಿಂಸಾಚಾರ ಪ್ರತಿಧ್ವನಿಸುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಇದೇ ಅಸ್ತ್ರ ಬಳಸಿ ವಾಗ್ದಾಳಿ ನಡೆಸುತ್ತಿವೆ. ಇದೇ ಹೊತ್ತಲ್ಲಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಅಸಮಾಧಾನ ಹೊರಹಾಕಿದ್ದಾರೆ. ಹಾಗಾದರೆ ಖರ್ಗೆ ಅವರ ಪತ್ರದಲ್ಲಿ ಇರುವ ಅಂಶವಾದರೂ ಏನು? ಬನ್ನಿ ತಿಳಿಯೋಣ.
ಅಂದಹಾಗೆ ಮಣಿಪುರ ಹಿಂಸಾಚಾರ ಸಮಸ್ಯೆ ಬಗ್ಗೆ ಸಂಸತ್ತಲ್ಲಿ ಚರ್ಚಿಸಲು ಪ್ರತಿಪಕ್ಷಗಳ ಅಮೂಲ್ಯ ಸಹಕಾರ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪತ್ರ ಬರೆದಿದ್ದರು. ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಸಾಮರಸ್ಯ ರೀತಿಯಲ್ಲಿ ಕಂಡುಕೊಳ್ಳಲು ಪಕ್ಷ ಭೇದ ಮರೆತು ಸಹಕಾರ ನೀಡುವಂತೆ ಮನವಿ ಮಾಡಿದ್ದರು. ಇದೀಗ ಎಐಸಿಸಿ ಅಧ್ಯಕ್ಷ ಖರ್ಗೆ ಅವರು ಅಮಿತ್ ಶಾ ಅವರಿಗೆ ಪತ್ರವನ್ನ ಬರೆದಿದ್ದು, ಸಂಸತ್ ಅಧಿವೇಶನದಲ್ಲಿ ಮಣಿಪುರ ಹಿಂಸೆಯ ಕುರಿತು ಚರ್ಚೆ ನಡೆಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಈ ಮೂಲಕ ವಿಪಕ್ಷಗಳು ಹಾಗೂ ಆಡಳಿತ ಪಕ್ಷದ ನಡುವೆ ಮಣಿಪುರ ವಿಚಾರದಲ್ಲಿ ಕಿರಿಕ್ ಮತ್ತಷ್ಟು ಜೋರಾಗಿದೆ.

ಎಐಸಿಸಿ ಅಧ್ಯಕ್ಷರ ಪತ್ರದಲ್ಲಿ ಏನಿದೆ?
ಮಲ್ಲಿಕಾರ್ಜುನ ಖರ್ಗೆ ಬರೆದ ಪತ್ರದಲ್ಲಿ ಅಮಿತ್ ಶಾ ಪತ್ರಕ್ಕೆ ಉತ್ತರ ನೀಡಲಾಗಿದೆ. 'ನಾವು ನಿಮ್ಮಿಂದ ಸ್ವೀಕರಿಸಿದ ಪತ್ರವು ವಾಸ್ತವಿಕವಲ್ಲ... ನಿಮ್ಮ ಪತ್ರದಲ್ಲಿರುವ ಪದಗಳಿಗೆ ಮತ್ತು ನಿಮ್ಮ ಕಾರ್ಯವಿಧಾನಕ್ಕೂ ಗಮನಾರ್ಹ ವ್ಯತ್ಯಾಸವಿದೆ. ಸರ್ಕಾರವು ಅಸಹಿಷ್ಣುತೆ ತೋರುತ್ತಿದೆ ಮತ್ತು ಸಂಸತ್ತಿನಲ್ಲಿ ತನ್ನ ಇಚ್ಛೆಯನ್ನು ಒತ್ತಾಯಿಸುತ್ತಿದೆ' ಅಂತಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಈ ಮೂಲಕ ಮೊದಲೇ ಚರ್ಚೆಗೆ ಗುರಿಯಾಗಿರುವ ಮಣಿಪುರ ಘಟನೆಗೆ ರೋಚಕ ತಿರುವು ಸಿಕ್ಕಂತಾಗಿದೆ. ವಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ಕಿರಿಕಿರಿ ಮತ್ತೊಂದು ಹಂತಕ್ಕೆ ಹೋಗುವ ಲಕ್ಷಣ ಕೂಡ ಈ ಮೂಲಕ ಗೋಚರಿಸಿದೆ.
एक ही दिन में आदरणीय प्रधानमंत्री देश के विपक्षी दलों को अंग्रेज शासकों और आतंकवादी दल से जोड़ते हैं और उसी दिन गृहमंत्री भावनात्मक पत्र लिखकर विपक्ष से सकारात्मक रवैये की अपेक्षा करते हैं। सत्ता पक्ष और विपक्ष में समन्वय का अभाव वर्षों से दिख रहा था, अब यह खाई सत्तापक्ष के अंदर… pic.twitter.com/GcTgSwHsrT
— Mallikarjun Kharge (@kharge) July 26, 2023
ತಿರುಗೇಟು ನೀಡಿದ ಕೇಂದ್ರ ಸಚಿವ
ಇನ್ನು ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದ್ದು, ಈ ಬಗ್ಗೆ ಆಡಳಿತ ಪಕ್ಷದಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಜನರಿಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಮೇಲೆ ವಿಶ್ವಾಸವಿದೆ. ಅವರು ಕಳೆದ ಅವಧಿಯಲ್ಲೂ ಅವಿಶ್ವಾಸ ನಿರ್ಣಯ ತಂದರು. ಅವರಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಈ ಮೂಲಕ ಆಡಳಿತ ಪಕ್ಷದ ನಾಯಕರು ಹಾಗೂ ವಿಪಕ್ಷಗಳ ನಾಯಕರ ನಡುವೆ ಮಣಿಪುರ ಘಟನೆ ದೊಡ್ಡ ಕಿಚ್ಚನ್ನೇ ಹಚಿದಂತೆ ಕಾಣುತ್ತಿದೆ.
ಒಟ್ಟಾರೆ ಹೇಳುವುದಾದ್ರೆ ಸಂಸತ್‌ನ ಮುಂಗಾರು ಅಧಿವೇಶನ ಮಣಿಪುರ ವಿಚಾರವಾಗಿ ಸಾಕಷ್ಟು ಚರ್ಚೆಗೆ ಈಡಾಗಿದೆ. ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಇದೇ ವಿಚಾರ ಹಿಡಿದು ವಾಗ್ದಾಳಿ ನಡೆಸುತ್ತಿದ್ದರೆ, ಆಡಳಿ ಪಕ್ಷದ ನಾಯಕರು ಅದಕ್ಕೆ ತಿರುಗೇಟು ನೀಡುತ್ತಿದ್ದಾರೆ. ಹೀಗೆ ಇಬ್ಬರ ನಡುವೆ ಆರೋಪ ಮತ್ತು ಪ್ರತ್ಯಾರೋಪ ಜೋರಾಗಿದೆ. ಅಧಿವೇಶನ ಮುಗಿಯುವ ತನಕ ಈ ತಿಕ್ಕಾಟ ಕೂಡ ಮುಗಿಯುವ ಲಕ್ಷಣ ಕಾಣುತ್ತಿಲ್ಲ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications