ದೇಶವು ಅಚ್ಛೇ ದಿನವನ್ನು ಸುಳ್ಳು ಭಾಷಣ & ಜಾಹೀರಾತುಗಳಲ್ಲಿ ಹುಡುಕುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಲೇವಡಿ
ನವದೆಹಲಿ, ಜನವರಿ 04: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
कच्चे तेल के दाम लुढ़क रहें हैं, पर मोदी सरकार की लूटखोरी पर कोई लगाम नहीं है।
— Mallikarjun Kharge (@kharge) January 4, 2024
मोदी जी के मंत्री जी खुद कह रहें हैं कि "तेल कंपनियों से दाम घटाने के बारे में कोई बात नहीं हुई है।"
तेल कंपनियां हर एक लीटर पेट्रोल पर जनता से ₹8 से ₹10 और डीज़ल पर ₹3 से ₹4 मुनाफ़ा कमा रहीं… pic.twitter.com/dIJOQP0sVB
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿಯುತ್ತಿದೆ, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಲೂಟಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಲೇವಡಿ ಮಾಡಿದ್ದಾರೆ.

ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಸಾರ್ವಜನಿಕರಿಂದ ₹8 ರಿಂದ ₹10 ಲಾಭ ಮತ್ತು ಡೀಸೆಲ್ ಮೇಲೆ ₹3 ರಿಂದ ₹4 ಲಾಭ ಗಳಿಸುತ್ತಿವೆ .ತೈಲ ಕಂಪನಿಗಳ ಜೊತೆ ಬೆಲೆ ಇಳಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಮೋದಿ ಸರ್ಕಾರದ ಮಂತ್ರಿಗಳೇ ಹೇಳುತ್ತಿದ್ದಾರೆ. ದೇಶವು ಬಿಜೆಪಿಯ ಅಚ್ಛೇ ದಿನವನ್ನು ಸುಳ್ಳು ಭಾಷಣಗಳಲ್ಲಿ ಮತ್ತು ಪೊಳ್ಳು ಜಾಹೀರಾತುಗಳಲ್ಲಿ ಹುಡುಕುತ್ತಿದೆ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ 19 ತಿಂಗಳಲ್ಲಿ ಕಚ್ಚಾ ತೈಲವು ಶೇಕಡಾ 31 ರಷ್ಟು ಕಡಿಮೆಯಾಗಿದೆ ಎಂದು ಹೇಳುವ ಚಾರ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಬಗ್ಗೆ ಈವರೆಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ.
ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆಯಲ್ಲಿ ಭಾರೀ ಏರಿಳಿತ ಉಂಟಾಗುತ್ತಿದೆ. ಬಹುತೇಕ ಕಡಿಮೆಯಾಗುತ್ತಿದೆ. ಹೀಗಾಗಿ ದೇಶದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ದೇಶದಲ್ಲಿ ಸದ್ಯಕ್ಕೆ ತೈಲ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಕಚ್ಛಾ ತೈಲ ಬೆಲೆ ವಿಪರೀತ ಏರಿಕೆ ಕಂಡಿದ್ದಾಗ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸಿದ್ದವು. ಕಚ್ಛಾ ತೈಲ ಬೆಲೆ ಬೇಡಿಕೆಗೆ ಅನುಗುಣವಾಗಿ ಏರಿಳಿತ ಕಾಣುತ್ತದೆ. ಕೆಲವು ಅಂತಾರಾಷ್ಟ್ರೀಯ ವಿದ್ಯಮಾನಗಳೂ ತೈಲ ಬೆಲೆ ಏರಿಳಿತಕ್ಕೆ ಕಾರಣ ಆಗುತ್ತದೆ. ಹೀಗಾಗಿ ಈ ಲೆಕ್ಕಾಚಾರವನ್ನು ಆಧರಿಸಿ ಪೆಟ್ರೋಲ್ ಹಾಗೂ ಡೀಸೆಲ್ ದರ ಕೆಲ ದಿನಗಳ ಮಟ್ಟಿಗೆ ಇಳಿಕೆ ಮಾಡಲು ಆಗುವುದಿಲ್ಲ. ಸದ್ಯದ ಮಟ್ಟಿಗೆ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಳಿತ ಕಂಡು ಬರುತ್ತಿದೆ. ಹೀಗಾಗಿ ತೈಲ ಮಾರುಕಟ್ಟೆ ಕಂಪನಿಗಳು ತೈಲ ಬೆಲೆ ಇಳಿಕೆ ಸಂಬಂಧ ಯಾವುದೇ ಚರ್ಚೆ ನಡೆಸಿಲ್ಲ ಎಂದು ಕೇಂದ್ರ ಹರ್ದೀಪ್ ಸಿಂಗ್ ಪುರಿ ಸ್ಪಷ್ಟವಾಗಿ ತಿಳಿಸಿದ್ದಾರೆ.












Click it and Unblock the Notifications