ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

|
Google Oneindia Kannada News

ಞನವದೆಹಲಿ, ಅಕ್ಟೋಬರ್ 26; ಎಐಸಿಸಿ ಅಧ್ಯಕ್ಷರಾಗಿ ಕರ್ನಾಟಕ ಮೂಲದ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಮಾಡಿದರು. ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಬುಧವಾರ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಿದರು. 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಇನ್ನು ಮುಂದೆ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿದ್ದಾರೆ.

ಕರ್ನಾಟಕ, ರಾಜಸ್ಥಾನ ನಾಯಕತ್ವ ಬಿಕ್ಕಟ್ಟು: ಮಲ್ಲಿಕಾರ್ಜುನ ಖರ್ಗೆ ಮುಂದಿವೆ ಹಲವು ಸವಾಲುಕರ್ನಾಟಕ, ರಾಜಸ್ಥಾನ ನಾಯಕತ್ವ ಬಿಕ್ಕಟ್ಟು: ಮಲ್ಲಿಕಾರ್ಜುನ ಖರ್ಗೆ ಮುಂದಿವೆ ಹಲವು ಸವಾಲು

ಸಂಸದ ರಾಹುಲ್ ಗಾಂಧಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಹಲವು ನಾಯಕರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮುಂದಿರುವ ಸವಾಲುಗಳು!ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮುಂದಿರುವ ಸವಾಲುಗಳು!

Mallikarjun Kharge

ಅಧಿಕಾರ ಸ್ವೀಕಾರ ಸಮಾರಂಭಕ್ಕೂ ಮುನ್ನ ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಉಸ್ತುವಾರಿ ಮಧುಸೂದನ ಮಿಸ್ತ್ರಿ ಪ್ರಮಾಣ ಪತ್ರವನ್ನು ನೀಡಿದರು.

ಮಲ್ಲಿಕಾರ್ಜುನ ಖರ್ಗೆ ಕನ್ನಡಿಗರ ಹೆಮ್ಮೆ: ರಾಜ್ಯ ಕಾಂಗ್ರೆಸ್‌ ನಾಯಕರ ಶುಭಾಶಯಮಲ್ಲಿಕಾರ್ಜುನ ಖರ್ಗೆ ಕನ್ನಡಿಗರ ಹೆಮ್ಮೆ: ರಾಜ್ಯ ಕಾಂಗ್ರೆಸ್‌ ನಾಯಕರ ಶುಭಾಶಯ

ಅಧಿಕಾರ ಹಸ್ತಾಂತರ ಮಾಡಿದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಸೋನಿಯಾ ಗಾಂಧಿ, "ನನಗೆ ಎಲ್ಲರಿಗಿಂತ ಹೆಚ್ಚು ಖುಷಿಯಾಗಿದೆ. ತಮ್ಮ ನಿಷ್ಠೆ, ಪ್ರಮಾಣಿಕತೆಯಿಂದ ಮಲ್ಲಿಕಾರ್ಜುನ ಖರ್ಗೆ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಅವರು ನನಗೆ ತೋರಿಸಿರುವ ಪ್ರೀತಿ, ಗೌರವಕ್ಕೆ ಅಭಾರಿಯಾಗಿದ್ದೇನೆ" ಎಂದರು.

"ನನ್ನ ಶಕ್ತಿ, ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಭಾವಿಸಿದ್ದೇನೆ" ಎಂದು ಸೋನಿಯಾ ಗಾಂಧಿ ಭರವಸೆ ವ್ಯಕ್ತಪಡಿಸಿದರು.

1972 ರಿಂದ 2008ರ ತನಕ 9 ಬಾರಿ ಶಾಸಕರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದಾರೆ. 2009 ರಿಂದ 2019ರ ತನಕ 2 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

2009 ರಿಂದ 2014ರ ತನಕ ಕೇಂದ್ರ ಸಚಿವರಾಗಿ, 2014-2019ರ ತನಕ ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ, 2021-2022ರ ತನಕ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಕಾರ್ಯ ನಿರ್ವಹಣೆ ಮಾಡಿದ್ದಾರೆ.

English summary
Karnataka based Congress senior leader Mallikarjun Kharge took charge as AICC president on October 26, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X