ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಅಶೋಕ್ ಗೆಹ್ಲೋಟ್, ಸಚಿನ ಪೈಲಟ್ ಜೊತೆಗೆ ಖರ್ಗೆ ಪ್ರತ್ಯೇಕ ಮಾತುಕತೆ
ನವದೆಹಲಿ, ಮೇ. 29: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ ನಂತರ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿತ್ತು. ಇದನ್ನು ಸುಲಭವಾಗಿ ಬಗೆಹರಿಸಿದ್ದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಈಗ ರಾಜಸ್ಥಾನದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ಬಗೆಹರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.
ಸೋಮವಾರ ನವದೆಹಲಿಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ತನ್ನದೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಲಿದ್ದಾರೆ. "ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬರಲಿ. ಪಕ್ಷದ ಹಿತದೃಷ್ಟಿಯಿಂದ ನಾವು ಚರ್ಚಿಸಿ ನಿರ್ಧರಿಸುತ್ತೇವೆ" ಎಂದು ಮಲ್ಲಿಕಾರ್ಜುನ ಖರ್ಗೆ ಸಭೆಯ ಮೊದಲು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿಯ ಪ್ರಮುಖ ಅಂಶಗಳು
1. ರಾಜಸ್ಥಾನ ಸರ್ಕಾರದಿಂದ ತಾನು ಮಾಡಿದ ಮೂರು ಬೇಡಿಕೆಗಳನ್ನು ಈ ತಿಂಗಳ ಅಂತ್ಯದೊಳಗೆ ಈಡೇರಿಸದಿದ್ದರೆ, ರಾಜ್ಯಾದ್ಯಂತ ಆಂದೋಲನವನ್ನು ಪ್ರಾರಂಭಿಸುವುದಾಗಿ ಸಚಿನ ಪೈಲಟ್ ಹೇಳಿದ್ದಾರೆ.
2. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಚಿನ್ ಪೈಲಟ್ ತಮ್ಮ ಬೇಡಿಕೆಗಳಲ್ಲಿ ಆಗ್ರಹಿಸಿದ್ದಾರೆ.
3. ಅಶೋಕ್ ಗೆಹ್ಲೋಟ್ ಅವರು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ದೆಹಲಿಯಲ್ಲಿ ರಾಜಸ್ಥಾನ ಭವನದ ಅಡಿಪಾಯವನ್ನು ಹಾಕಲಿದ್ದಾರೆ.
4. ಎಲ್ಲಾ ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ಹಿಂಬಾಲಕರ ಸಭೆಯನ್ನು ಮೇ 26 ರಂದು ನಿಗದಿಪಡಿಸಲಾಗಿತ್ತು. ಆದರೆ ನಂತರ ಅದನ್ನು ಮುಂದೂಡಲಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

5. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ನಿರ್ಣಾಯಕ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರನ್ನು ಒಂದೇ ವೇದಿಕೆಗೆ ತರಲು ಹೈಕಮಾಂಡ್ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದೆ.
6. ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಲು ಯಾವುದೇ ಕಾರಣಗಳಿಲ್ಲ ಕಾರಣ ಪ್ರತಿಪಕ್ಷಗಳು ಪೇಪರ್ ಸೋರಿಕೆಯ ಬಗ್ಗೆ ಮಾತನಾಡಲು ಪ್ರಾರಂಭಿಸಿವೆ ಎಂದು ಸಿಎಂ ಅಶೋಕ್ ಹ್ಲೋಟ್ ಕಿಡಿಕಾರಿದ್ದಾರೆ.
7. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒಟ್ಟಿಗೆ ತರುವಲ್ಲಿ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದಾರೆ. ಇದೇ ಸೂತ್ರವನ್ನು ರಾಜಸ್ಥಾನದಲ್ಲಿ ಪ್ರಯತ್ನಿಸಲು ಕಾಂಗ್ರೆಸ್ ಬಯಸುತ್ತಿದೆ.












Click it and Unblock the Notifications