ಚಾನಲ್ ಸಂಪಾದಕನಿಗೆ ಜೈಲೂಟ ಗ್ಯಾರಂಟಿ - ಮಲ್ಯ
ನವದೆಹಲಿ, ಮಾರ್ಚ್, 30: ಅಂತೂ ಇಂತೂ ಸಾಲಗಾರ ವಿಜಯ್ ಮಲ್ಯ ಮರುಪಾವತಿ ಹಾದಿಗೆ ಬಂದಿದ್ದಾರೆ. ಸೆಪ್ಟೆಂಬರ್ 2016 ರೊಳಗೆ ಬ್ಯಾಂಕುಗಳಿಂದ ಪಡೆದುಕೊಂಡಿರುವ 4 ಸಾವಿರ ಕೋಟಿ ಸಾಲವನ್ನು ಮರುಪಾವತಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಲ ಹಿಂದಕ್ಕೆ ನೀಡುತ್ತೇನೆ ಎಂದು ಮಲ್ಯ ಹೇಳಿದ್ದಾರೆ.[ಸಾಲ ಮಾಡಿ ತುಪ್ಪ ತಿಂದವ್ರು ಮಲ್ಯ ಒಬ್ರೇ ಅಲ್ಲ ಸ್ವಾಮೀ!]
ಮಲ್ಯ ವಕೀಲರು ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ಬುಧವಾರ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ. ಮಲ್ಯರಿಂದ ಸಾಲ ಮರುಪಾವತಿಗೆ ಸಂಬಂಧಿಸಿ ಎಸ್ ಬಿಐ ನೇತೃತ್ವದ 17 ಬ್ಯಾಂಕುಗಳ ಒಕ್ಕೂಟ ಸುಪ್ರೀಂ ಮೆಟ್ಟಿಲೇರಿತ್ತು. ವಾರದೊಳಗೆ ಮಲ್ಯ ಉತ್ತರ ನೀಡಬೇಕು ಎಂದು ಅರ್ಜಿ ಸಲ್ಲಿಕೆ ಮಾಡಿತ್ತು. ಬುಧವಾರ ವಿಚಾರಣೆ ಆರಂಭಕ್ಕೂ ಮುನ್ನ ಮಲ್ಯ ಪರ ವಕೀಲರು ಸಾಲ ಮರುಪಾವತಿ ವಿಚಾರವನ್ನು ತಿಳಿಸಿದ್ದಾರೆ.[ಟಿಪ್ಪು ಖಡ್ಗ ತಂದ ಮಲ್ಯರ ಗತಕಾಲದ ವೈಭವ ಹೇಗಿತ್ತು?]

ಆದರೆ ಬ್ಯಾಂಕ್ ಗಳು ಹೇಳಿಕೆಗೆ ಅಪಸ್ವರ ಎತ್ತಿವೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದೇವೆ. ಸೆಪ್ಟೆಂಬರ್ ವರೆಗೆ ಕಾಯಲು ಅಸಾಧ್ಯ ಎಂದು ಹೇಳಿವೆ. ಒಟ್ಟಿನಲ್ಲಿ ಮಲ್ಯ ಕೆಲ ದಿನಗಳ ಅವಕಾಶ ಕೇಳಿದ್ದಾರೆ.
ವಿವಿಧ ಬ್ಯಾಂಕುಗಳಲ್ಲಿ 9 ಸಾವಿರ ಕೋಟಿಗೂ ಅಧಿಕ ಸಾಲ ಮಾಡಿರುವ ಮಲ್ಯ ಸುಸ್ತಿದಾರ ಎಂದು ಕರೆಸಿಕೊಂಡಿದ್ದಾರೆ. ಅಲ್ಲದೇ ಜಾರಿ ನಿರ್ದೇಶನಾಲಯ ಸಹ ಮಲ್ಯಗೆ ನೋಟಿಸ್ ನೀಡಿದ್ದು ಏಪ್ರಿಲ್ 2 ಕ್ಕೆ ಹಾಜರಾಗಿ ವಿವರಣೆ ನೀಡುವಂತೆ ತಿಳಿಸಿತ್ತು. ಸದ್ಯ ಮಲ್ಯ ಇಂಗ್ಲೆಂಡಿನಲ್ಲಿದ್ದು ಅರ್ಧಕ್ಕಿಂತ ಕಡಿಮೆ ಸಾಲ ಮರುಪಾವತಿ ಮಾಡುತ್ತೇನೆ ಎಂದು ನ್ಯಾಯಾಲಯಕ್ಕೆ ವಕೀಲರ ಮೂಲಕ ತಿಳಿಸಿದ್ದಾರೆ.[ಟ್ವಿಟ್ಟರ್‌ನಲ್ಲಿ ಮಾಧ್ಯಮಗಳಿಗೆ ತಿರುಗೇಟು ನೀಡಿದ ಮಲ್ಯ!]
ಅಲ್ಲದೇ, ತಮ್ಮ ವಿರುದ್ಧ ಇಲ್ಲ ಸಲ್ಲದ ಕಾಮೆಂಟ್ ಮಾಡಿದ ಟಿವಿ ಚಾನಲ್ ವೊಂದರ ಸಂಪಾದಕರ ಬಗ್ಗೆ ಕಿಡಿಕಾರಿರುವ ಮಲ್ಯ "ಈ ಮನುಷ್ಯ ಜೈಲು ಯುನಿಫಾರ್ಮ್ ಹಾಕ್ಕೊಳ್ತಾನೆ ಮತ್ತು ಜೈಲು ಊಟ ಮಾಡೋದು ಗ್ಯಾರಂಟಿ" ಎಂದು ಚಾಟಿ ಬೀಸಿದರು.
17 ಬ್ಯಾಂಕ್ ಗಳಲ್ಲಿ ಮಲ್ಯ 9500 ಕೋಟಿಗೂ ಅಧಿಕ ಸಾಲ ಮಾಡಿಕೊಂಡಿದ್ದಾರೆ. ಅದರಲ್ಲಿ 4 ಸಾವಿರ ಕೋಟಿ ಅಂದರೆ ಶೇ. 40 ನ್ನು ಸೆಪ್ಟೆಂಬರ್ ಒಳಗೆ ತುಂಬಿಕೊಡುತ್ತೇನೆ ಎಂದು ಮಲ್ಯ ಹೇಳಿದ್ದಾರೆ.
ಮಾರ್ಚ್ 11ರಂದು ಮಲ್ಯ ಮಾಡಿದ್ದ ಟ್ವೀಟ್
The editor of Times Now needs to be in prison clothes and eat prison food for libel, deceit, slander and absolutely sensational lies.
— Vijay Mallya (@TheVijayMallya) March 10, 2016
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications