‘ಸುಳ್ಳುಗಳಿಂದ ಹೀರೋ ಆಗಿರುವ ಬಿಜೆಪಿ ಸೊನ್ನೆ ಆಗಬೇಕು’
ಕೊಲ್ಕತ್ತಾ: ಬಿಜೆಪಿ ನೇತೃತ್ವದ NDA ಸರ್ಕಾರದ ವಿರುದ್ಧ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ಹೊರಹಾಕಿದ್ದಾರೆ. 'ಸುಳ್ಳುಗಳಿಂದ ಹೀರೋ ಆದ ಬಿಜೆಪಿ ಸೊನ್ನೆ ಆಗಬೇಕು' ಎನ್ನುವ ಮೂಲಕ 2024ರ ಲೋಕಸಭಾ ಚುನಾವಣೆಗೆ ಕಿಡಿ ಹೊತ್ತಿಸಿದ್ದಾರೆ. ವಿಪಕ್ಷಗಳ ನೇತೃತ್ವದಲ್ಲಿ ಸಂಘಟನೆ ಮೂಡುವ ಬಗ್ಗೆ ಮುನ್ಸೂಚನೆ ಕೊಟ್ಟಿದ್ದಾರೆ ಮಮತಾ ಬ್ಯಾನರ್ಜಿ (Mamata Banerjee).
ಹೌದು 2024ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ರೂಪಿಸಲು ಪ್ರಯತ್ನ ಸಾಗಿದೆ. ಇದರ ಮುಂದಾಳತ್ವ ವಹಿಸಿಕೊಂಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಮಹತ್ವದ ಚರ್ಚೆ ನಡೆಸಿದರು. ಈ ವೇಳೆ ಮಮತಾ ಬ್ಯಾನರ್ಜಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವೆಲ್ಲ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ ಹಾಗೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

'ಬಿಜೆಪಿ ಸೊನ್ನೆ ಆಗಬೇಕು'
ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮಮತಾ, ಜಯಪ್ರಕಾಶ್ ನಾರಾಯಣ್ ಅವರ ಚಳುವಳಿ ಬಿಹಾರದಿಂದ ಪ್ರಾರಂಭವಾಗಿತ್ತು. ಹೀಗಾಗಿ ಬಿಹಾರದಲ್ಲಿ ಸರ್ವಪಕ್ಷ ಸಭೆ ನಡೆಸಿದರೆ ಮುಂದಿನ ದಾರಿ ನಿರ್ಧರಿಸಬಹುದು. ಈ ಕಾರಣಕ್ಕೆ ನಾನು ನಿತೀಶ್ ಕುಮಾರ್ ಅವರಿಗೆ ಮನವಿ ಮಾಡಿದ್ದೇನೆ. ಬಿಜೆಪಿ ಶೂನ್ಯವಾಗಬೇಕು ಎಂಬುದನ್ನು ನಾನು ಬಯಸುತ್ತೇನೆ. ಮಾಧ್ಯಮಗಳ ಬೆಂಬಲ ಮತ್ತು ಸುಳ್ಳುಗಳಿಂದ ದೊಡ್ಡ ಹೀರೋ ಆಗಿದ್ದಾರೆ ಎಂದು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ವಿಪಕ್ಷಗಳ ನಡುವೆ ಒಗ್ಗಟ್ಟಿನ ಪಾಠ ಮಾಡಿದ್ದಾರೆ ಮಮತಾ ಬ್ಯಾನರ್ಜಿ.
ವಿಪಕ್ಷ ನಾಯಕರ ತಂತ್ರ ಏನು?
ಬಿಹಾರ ಸಿಎಂ ನಿತೀಶ್ ಕುಮಾರ್ ಮಾತನಾಡಿ, ಇದು ತುಂಬಾ ಸಕಾರಾತ್ಮಕ ಚರ್ಚೆಯಾಗಿದೆ. ವಿರೋಧ ಪಕ್ಷಗಳು ಒಟ್ಟಿಗೆ ಕುಳಿತು ಕಾರ್ಯತಂತ್ರ ರೂಪಿಸುವ ಅಗತ್ಯವಿದೆ ಎಂದರು. ಈ ಮೂಲಕ ಪ.ಬಂಗಾಳದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸಿವೆ. ಬಿಹಾರದಲ್ಲಿ ವಿಪಕ್ಷಗಳ ನಾಯಕರ ಬೃಹತ್ ಸಭೆ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ಮತ್ತೊಂದ್ಕಡೆ ನಿತೀಶ್ ಕುಮಾರ್ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಅವರನ್ನ ಶೀಘ್ರವೇ ಭೇಟಿ ಮಾಡಲಿದ್ದಾರೆ.
ಶರದ್ ಪವಾರ್ & ರಾಹುಲ್ ಭೇಟಿ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮಧ್ಯೆ ಕೆಲದಿನಗಳ ಹಿಂದೆ ವಿಪಕ್ಷಗಳ ಒಗ್ಗಟ್ಟಿನ ವಿಚಾರವಾಗಿ ಗಂಭೀರ ಚರ್ಚೆ ನಡೆದಿತ್ತು. ಸಂಸತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣತಂತ್ರ ಹೆಣೆಯುವ ಸಲುವಾಗಿ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಭೇಟಿ ನೀಡಿ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದರು. ಸಮಾನ ಮನಸ್ಕ ಪಕ್ಷಗಳು ಒಗ್ಗೂಡಬೇಕು ಎಂಬ ವಿಷಯ ಮೊದಲಿನಿಂದ ಚರ್ಚೆಯಲ್ಲಿತ್ತು. ಈಗಲೂ ಅದೇ ವಿಚಾರವಾಗಿ ನಿತೀಶ್ ಮತ್ತು ಮಮತಾ ಬ್ಯಾನರ್ಜಿ ಚರ್ಚೆ ನಡೆಸಿದ್ದಾರೆ.

ನಿತೀಶ್, ತೇಜಸ್ವಿ & ರಾಹುಲ್ ಭೇಟಿ
ಶರದ್ ಪವಾರ್ ಭೇಟಿಗೆ ಮೊದಲು ರಾಹುಲ್ ಗಾಂಧಿ ಜೊತೆ ಬಿಹಾರ ಸಿಎಂ ನಿತೀಶ್ ಕುಮಾರ್ ಚರ್ಚೆ ನಡೆಸಿದ್ದರು. ನಿತೀಶ್ ಕುಮಾರ್ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಒಟ್ಟಾಗಿ ರಾಹುಲ್ ಜೊತೆ ಮಾತುಕತೆ ನಡೆಸಿದ್ದರು. ಈ ಚರ್ಚೆ ನಡೆದು ಒಂದೆರಡು ದಿನ ಕಳೆಯುವ ಒಳಗೆ ಶರದ್ ಪವಾರ್ ಕೂಡ ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ಇದೀಗ ಖುದ್ದು ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications