ಒಡಿಶಾ ರೈಲು ದುರಂತ: ಸಂತ್ರಸ್ತ ಕುಟುಂಬಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ , ಜೂನ್. 08: ಒಡಿಶಾದ ಬಾಲಾಸೋರ್ ರೈಲು ಅಪಘಾತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ 86 ಜನರನ್ನು ಗೃಹರಕ್ಷಕರನ್ನಾಗಿ ನೇಮಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ಭೀಕರ ಅಪಘಾತದಲ್ಲಿ ಕೈಕಾಲು ಕಳೆದುಕೊಂಡವರ ಸಂಬಂಧಿಕರಿಗೂ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಈ ಹಿಂದೆ ಘೋಷಿಸಿದ್ದರು.
ಅಪಘಾತದಲ್ಲಿ ಪಶ್ಚಿಮ ಬಂಗಾಳದ ಕನಿಷ್ಠ 103 ಜನರು ಸಾವನ್ನಪ್ಪಿದ್ದಾರೆ ಮತ್ತು 40 ರಿಂದ 50 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಘಟನೆಯಲ್ಲಿ ಬದುಕುಳಿದ ಪಶ್ಚಿಮ ಬಂಗಾಳದ ಕನಿಷ್ಠ ಮೂವರು ತೀವ್ರ ಅಂಗವೈಕಲ್ಯವನ್ನು ಅನುಭವಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ವಿಕಲಚೇತನ ಅಥವಾ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ, ಗೃಹ ರಕ್ಷಕರ ಕೆಲಸ ಮತ್ತು ಒಂದು ಬಾರಿ 10,000 ರೂಪಾಯಿ ಭತ್ಯೆ ನೀಡಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದರು.

ರಾಜ್ಯ ಸರ್ಕಾರವು ಮುಂದಿನ ಮೂರು ತಿಂಗಳಲ್ಲಿ ಅಕ್ಕಿ ಮತ್ತು ಬೇಳೆಕಾಳುಗಳಂತಹ ಆಹಾರ ಪದಾರ್ಥಗಳೊಂದಿಗೆ ಗಾಯಾಳುಗಳ ಪ್ರತಿ ಕುಟುಂಬಕ್ಕೆ 2,000 ರೂಪಾಯಿ ನೀಡಲಿದೆ. ಕನಿಷ್ಠ 172 ಜನರಿಗೆ ಗಂಭೀರ ಗಾಯಗಳಾಗಿದ್ದು, ರಾಜ್ಯದ 635 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಸಂತ್ರಸ್ತ ಕುಟುಂಬದಲ್ಲಿ ಯಾರಾದರೂ ಬಯಸಿದರೆ ನಾವು 50 ಹುಡುಗಿಯರು ಮತ್ತು 50 ಹುಡುಗರು ಸೇರಿದಂತೆ 100 ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತೇವೆ. ನಾನು ಈಗಾಗಲೇ ಅಂತಹ ಒಂದು ವಿನಂತಿಯನ್ನು ಸ್ವೀಕರಿಸಿದ್ದೇನೆ ಎಂದಿದ್ದಾರೆ.
ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತರಾದ ಪ್ರತಿಯೊಬ್ಬರ ಸಂಬಂಧಿಕರಿಗೆ ಪ್ರಧಾನಮಂತ್ರಿ ಕಾರ್ಯಾಲಯವು PMNRF ನಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ 10 ಲಕ್ಷ ರೂಪಾಯಿ ಹೆಚ್ಚುವರಿಯಾಗಿ ಘೋಷಿಸಿದ್ದಾರೆ.

ರಾಜ್ಯ ಪೊಲೀಸರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಇಲಾಖೆಯು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಾಧ್ಯವಾದರೆ ನೋಡಲು ಇಲಾಕೆಗಳಿಗೆ ಸೂಚಿಸಿದ್ದಾರೆ. ಇತ್ತ, ಪರಿಹಾರವನ್ನು ಪಾವತಿಸಲು ರಾಜ್ಯ ಸರ್ಕಾರವು ಇತರ ಹಂಚಿಕೆಗಳಿಂದ ಹಣವನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
"ಪಶ್ಚಿಮ ಬಂಗಾಳ ಸರ್ಕಾರವು ಕೋರಮಂಡಲ್ ಎಕ್ಸ್‌ಪ್ರೆಸ್ ಅಪಘಾತದ ಸಂತ್ರಸ್ತರಿಗೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ (BOCWWB) ನಿಧಿಯಿಂದ ಪರಿಹಾರವನ್ನು ಪಾವತಿಸುತ್ತಿದೆ. ಸರಳವಾಗಿ ಹೇಳುವುದಾದರೆ ಮಮತಾ ಬ್ಯಾನರ್ಜಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಉದ್ದೇಶಿಸಲಾದ ಹಣವನ್ನು ಕಿತ್ತುಕೊಳ್ಳುತ್ತಿದ್ದಾರೆ" ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications