ಪಾಪಿಗಳು ಪಂದ್ಯ ನೋಡಲು ಹೋಗಿದ್ದಕ್ಕೆ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ
ಏಕದಿನ ವಿಶ್ವಕಪ್ 2023ರ ಫೈನಲ್‌ನಲ್ಲಿ ಭಾರತ ಸೋತಿದ್ದನ್ನು ಇನ್ನೂ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಆಗಿಲ್ಲ. ಭಾರತದ ಸೋಲಿನ ಬಗ್ಗೆ ಹಲವರು ಹಲವು ಕಾರಣಗಳನ್ನು ನೀಡುತ್ತಿದ್ದಾರೆ, ಭಾರತ ಸೋತಿದ್ದು ರಾಜಕೀಯ ವಲಯದಲ್ಲಿ ಕೂಡ ಚರ್ಚೆಯಾಗುತ್ತಿದ್ದು, ಸಾಕಷ್ಟು ವಿವಾದ ಸೃಷ್ಟಿಯಾಗಿದೆ.
ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಐಸಿಸಿ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡವು "ಪಾಪಿಗಳು" ಭಾಗವಹಿಸಿದ್ದನ್ನು ಹೊರತುಪಡಿಸಿ ಎಲ್ಲಾ ಪಂದ್ಯಗಳನ್ನು ಗೆದ್ದಿದೆ ಎಂದು ಹೇಳಿದರು.

"ಭಾರತ ತಂಡವು ಎಷ್ಟು ಚೆನ್ನಾಗಿ ಆಡಿದೆ ಎಂದರೆ ಅವರು ವಿಶ್ವಕಪ್‌ನಲ್ಲಿ ಪಾಪಿಗಳು ಭಾಗವಹಿಸಿದ್ದನ್ನು ಹೊರತುಪಡಿಸಿ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ" ಎಂದು ಮಮತಾ ಬ್ಯಾನರ್ಜಿ ಯಾರ ಹೆಸರೂ ಹೇಳದೆ ವಾಗ್ದಾಳಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಮಂಗಳವಾರ ರಾಜಸ್ಥಾನದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯನ್ನು "ದುರದೃಷ್ಟ" (ಪನೌಟಿ) ಎಂದು ಕರೆದ ಕೆಲವು ದಿನಗಳ ನಂತರ ಮಮತಾ ಬ್ಯಾನರ್ಜಿ ಅವರ ಹೇಳಿಕೆ ಬಂದಿದೆ, ರಾಹುಲ್ ಹೇಳಿಕೆ ಬಳಿಕ ಬಿಜೆಪಿ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಗುರುವಾರ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಹಮದಾಬಾದ್ ಬದಲಿಗೆ ಕೋಲ್ಕತ್ತಾ ಅಥವಾ ಮುಂಬೈನಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು ಎಂದು ಹೇಳಿದ್ದಾರೆ.
ಆಟಗಾರರು ವಿರೋಧ ವ್ಯಕ್ತಪಡಿಸಿದ ಕಾರಣ ಭಾರತ ತಂಡ ಅಂಗಳದಲ್ಲಿ ಕೇಸರಿ ಜರ್ಸಿಯನ್ನು ಧರಿಸಿ ಆಡಲಿಲ್ಲ, ಕೇಸರಿ ಬಣ್ಣ ತ್ಯಾಗದ ಸಂಕೇತ ಆದರೆ ನೀವು ಭೋಗಿಗಳು ಎಂದು ಬಿಜೆಪಿಯನ್ನು ಗುರಿಯಾಗಿಸಿ ಟೀಕೆ ಮಾಡಿದ್ದಾರೆ.
ದೇಶದ ಆರ್ಥಿಕ ಸ್ಥಿತಿಯ ಬಗ್ಗೆಯೂ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. "ಬ್ಯಾಂಕಿಂಗ್ ವಲಯವು ಮಂದಗತಿಯಲ್ಲಿದೆ ಮತ್ತು ಪಿಎಸ್‌ಯುಗಳನ್ನು ಮಾರಾಟ ಮಾಡಲಾಗುತ್ತಿದೆ" ಎಂದು ಹೇಳಿದರು, ನಿರುದ್ಯೋಗ ದರವೂ ತುಂಬಾ ಹೆಚ್ಚಾಗಿದೆ ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದ ಮೂಲಕ ಬಾಂಗ್ಲಾದೇಶಕ್ಕೆ ಹಸು ಕಳ್ಳಸಾಗಣೆ ಆರೋಪದ ಮೇಲೆ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಬಾಂಗ್ಲಾದೇಶಕ್ಕೆ ಕಳ್ಳಸಾಗಾಣಿಕೆಗಾಗಿ ಹಸುಗಳನ್ನು ಯುಪಿ ಸೇರಿದಂತೆ ವಿವಿಧ ರಾಜ್ಯಗಳಿಂದ ತರಲಾಗುತ್ತದೆ. ಎಂದು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳವು ಹೂಡಿಕೆಯ ತಾಣವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. "ಎಲ್ಲಾ ದೊಡ್ಡ ಐಟಿ ಕಂಪನಿಗಳು ಕೋಲ್ಕತ್ತಾದ 'ಸಿಲಿಕಾನ್ ವ್ಯಾಲಿ' ಯೋಜನೆಯಲ್ಲಿ ಹೂಡಿಕೆ ಮಾಡುತ್ತಿವೆ" ಎಂದು ಅವರು ಹೇಳಿದರು.












Click it and Unblock the Notifications