ಅಂದು ರಿಷಬ್ ಪಂತ್ ಜೀವ ಉಳಿಸಿದ್ದ ವ್ಯಕ್ತಿ ಜೀವವೇ ಅಪಾಯದಲ್ಲಿ; ಆಗಿದ್ದೇನು?
2022ರಲ್ಲಿ ಭಾರತದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ಅವರ ಕಾರು ಭೀಕರ ಅಪಘಾತಕ್ಕೆ ಈಡಾಗಿದ್ದ ಘಟನೆ ಇಂದಿಗೂ ಕ್ರಿಕೆಟ್ ಅಭಿಮಾನಿಗಳಿಗೆ ನೆನಪಿದೆ. ಅಂದು ಪಂತ್ ಜೀವ ಅಪಾಯದಲ್ಲಿದ್ದಾಗ ಅವರ ಜೀವವನ್ನು ಕಾಪಾಡಿದ್ದ 25 ವರ್ಷದ ರಜತ್ ಕುಮಾರ್ ಜೀವವೇ ಇಂದು ಅಪಾಯಕ್ಕೆ ಸಿಲುಕಿದೆ. ಪಂತ್ ಪ್ರಾಣ ಕಾಪಾಡಿದ್ದ ರಜತ್ ಈಗ ಪ್ರೇಯಸಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಫೆಬ್ರವರಿ 9 ರಂದು ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಬುಚ್ಚಾ ಬಸ್ತಿ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಜತ್ ಕುಮಾರ್ ಪ್ರೇಯಸಿ ಮನು ಕಶ್ಯಪ್ ಜೊತೆ ವಿಷ ಸೇವಿಸಿದ್ದು, ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ರಜತ್ ಕುಮಾರ್ ಪರಿಸ್ಥಿತಿ ಗಂಭೀರವಾಗಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಪ್ರೀತಿಗೆ ಮನೆಯವರು ಒಪ್ಪದ ಕಾರಣ ರಜತ್ ಮತ್ತು ಮನು ಈ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಬ್ಬರ ಜಾತಿ ಬೇರೆ ಬೇರೆ ಎನ್ನುವ ಕಾರಣಕ್ಕೆ ಮನೆಯವರು ಸಂಬಂಧವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಅಲ್ಲದೇ ಎರಡೂ ಕುಟುಂಬಗಳು ಬೇರೆ ಕಡೆ ಮದುವೆ ಮಾಡಲು ನಿರ್ಧರಿಸಿದ್ದರು. ಇದರಿಂದ ಮನನೊಂದಿರುವ ಪ್ರೇಮಿಗಳು ವಿಷ ಸೇವಿಸಿದ್ದಾರೆ. ರಜತ್ ಕುಮಾರ್ ತನ್ನ ಮಗಳನ್ನು ಅಪಹರಿಸಿ ವಿಷ ಸೇವಿಸುವಂತೆ ಮಾಡಿದ್ದಾನೆ ಎಂದು ಮನು ಕಶ್ಯಪ್ ತಾಯಿ ಆರೋಪಿಸಿದ್ದಾರೆ.
ಪಂತ್ ಪ್ರಾಣ ಉಳಿಸಿದ್ದ ರಜತ್
ಡಿಸೆಂಬರ್ 2022ರಲ್ಲಿ ರಿಷಭ್ ಪಂತ್ ಕಾರಿನಲ್ಲಿ ದೆಹಲಿಯಿಂದ ಉತ್ತರಾಖಂಡಕ್ಕೆ ಹೋಗುತ್ತಿದ್ದಾಗ ರೂರ್ಕಿ ಬಳಿ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರಜತ್ ಕುಮಾರ್ ಮತ್ತೊಬ್ಬ ಸ್ಥಳೀಯ ನಿವಾಸಿ ನಿಶು ಕುಮಾರ್ ಪಂತ್‌ರನ್ನು ಕಾರಿನಿಂದ ಹೊರಗೆಳೆದು ಸ್ಥಳೀಯ ಆಸ್ಪತ್ರೆಗೆ ಸೇರಿಸುವಲ್ಲಿ ಸಹಾಯ ಮಾಡಿದ್ದರು. ಇಬ್ಬರೂ ಹತ್ತಿರದ ಕಾರ್ಖಾನೆಯಲ್ಲೇ ಕೆಲಸ ಮಾಡುತ್ತಿದ್ದರು. ಇಬ್ಬರು ಯುವಕರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಪಂತ್ ಚೇತರಿಸಿಕೊಂಡ ಬಳಿಕ ಇಬ್ಬರಿಗೂ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದ್ದರು.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications