West Bengal CM Mamata Banerjee: ಬಂದೂಕು ಹಿಡಿದು ಮಮತಾ ಬ್ಯಾನರ್ಜಿ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ
ಕೋಲ್ಕತ್ತಾ, ಜುಲೈ 21: ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿ ಅವಘಡವೊಂದು ಸಂಭವಿಸಿದೆ. ಇಂದು ಬೆಳಿಗ್ಗೆ 11:30 ರ ಸುಮಾರಿಗೆ ಮಮತಾ ಅವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಈ ವ್ಯಕ್ತಿಯು ಬಂದೂಕು ಮತ್ತು ಚಾಕು ಹಿಡಿದುಕೊಂಡು ಮನೆಗೆ ನುಗ್ಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಶೇಖ್ ನೂರ್ ಎಂದು ಗುರುತಿಸಲಾದ ವ್ಯಕ್ತಿ ಪೊಲೀಸರಂತೆ ನಟಿಸಿ ಕಪ್ಪು ಕಾರಿನಲ್ಲಿ ಬಂದಿದ್ದ. ಮಮತಾ ನಿವಾಸದ ಬಳಿಯ ಲೇನ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ವಿವಿಧ ಭದ್ರತಾ ಏಜೆನ್ಸಿಗಳಿಗೆ ಸೇರಿದ ಹಲವಾರು ನಕಲಿ ಗುರುತಿನ ಚೀಟಿಗಳನ್ನು ಸಹ ವ್ಯಕ್ತಿ ತನ್ನೊಂದಿಗೆ ಕೊಂಡೊಯ್ಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಪ್ರಕಾರ, ವ್ಯಕ್ತಿಯಿಂದ ಒಂದು ಚಾಕು, ಒಂದು ಬಂದೂಕು ಮತ್ತು ಗಾಂಜಾದಂತಹ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಕಾರಿನಿಂದ ಇಳಿದಾಗ ಪೊಲೀಸರು ತಡೆದರು. ಆದರೆ, ಆತ ತನ್ನನ್ನು ತಾನು ಪೋಲೀಸ್ ಅಧಿಕಾರಿ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದ. ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡನೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ಬ್ಯಾನರ್ಜಿ ಅವರ ನಿವಾಸದೊಳಗೆ 'ಪೊಲೀಸ್' ಸ್ಟಿಕ್ಕರ್‌ನೊಂದಿಗೆ ಕಾರನ್ನು ಓಡಿಸಲು ವ್ಯಕ್ತಿ ಪ್ರಯತ್ನಿಸಿದ್ದಾನೆ. ಆತನನ್ನು ನೂರ್ ಆಲಂ ಎಂದು ಗುರುತಿಸಲಾಗಿದೆ. ಕಪ್ಪು ಕೋಟ್ ಮತ್ತು ಟೈ ಧರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ತಿಳಿಸಿದ್ದಾರೆ.
ಘಟನೆ ನಡೆದಾಗ ಬ್ಯಾನರ್ಜಿ ಅವರು ತಮ್ಮ ಮನೆಯಲ್ಲಿದ್ದರು ಎಂದು ಗೋಯಲ್ ಮಾಹಿತಿ ನೀಡಿದ್ದಾರೆ.












Click it and Unblock the Notifications