ಮುಂಬೈ: ರೈಲು ನಿಲ್ದಾಣದಲ್ಲಿ ಯುವತಿಯನ್ನು ಚುಂಬಿಸಿದ ವ್ಯಕ್ತಿ ಬಂಧನ

ಮುಬೈಂ, ಫೆಬ್ರವರಿ 23 : ಹಾಡು ಹಗಲೇ ರೈಲು ನಿಲ್ದಾಣದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಕೊಟ್ಟ ದುಷ್ಕರ್ಮಿಯನ್ನು ಬಂಧಿಸಲಾಗಿದೆ.
ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ 21 ವರ್ಷದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಚುಂಬಿಸಿದ್ದಾನೆ. ಇದರಿಂದ ಆಘಾತಕ್ಕೊಳಗಾದ ಆಕೆ ವ್ಯಕ್ತಿಗೆ ಹೊಡೆಯಲು ಮುಂದಾಗಿದ್ದಾಳೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ನಿಲ್ದಾಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ವ್ಯಕ್ತಿ ಯುವತಿಯನ್ನು ತಬ್ಬಿಕೊಂಡು ಚುಂಬಿಸಿದ ದೃಶ್ಯಾವಳಿಗಳನ್ನು ಸಿಬ್ಬಂದಿ ಪರಿಶೀಲನೆ ಮಾಡಿದ್ದು, ಯುವತಿ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಶರು ಬಂಧಿಸಿದ್ದಾರೆ.

Man tries to hug, molest 21 year old woman at Mumbai station, arrested

ವಿಚಾರಣೆ ವೇಳೆ ಬಂಧಿತ ಆರೋಪಿ 43 ವರ್ಷದ ನರೇಶ್ ಜೋಶಿ ಎಂದು ತಿಳಿದುಬಂದಿದ್ದು, ಇದೀಗ ಆತನ ವಿರುದ್ಧ ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳದಡಿ ದೂರು ದಾಖಲಿಸಿಕೊಂಡಿದ್ದಾರೆ.
ಇಂತಹದೇ ಘಟನೆ ಕಳೆದ ಜನವರಿಯಲ್ಲಿ ಕೂಡ ಸಂಭವಿಸಿತ್ತು. ಮೂಂಬೈನ ಕಾರ್ಟರ್ ರಸ್ತೆಯಲ್ಲಿ 23 ವರ್ಷದ ವ್ಯಕ್ತಿ ತನ್ನ ಮಾಜಿ ಗೆಳತಿಯನ್ನು ನಿಂದಿಸಿ, ಬಲವಂತವಾಗಿ ಚುಂಬಿಸಿದ ಆರೋಪದ ಮೇರೆಗೆ ಪೊಲೀಸರು ಆತನನ್ನು ಬಂಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+