ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ಬಸ್ ದುರಂತ: ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

|
Google Oneindia Kannada News

Recommended Video

Mandya Bus incident : ಮಂಡ್ಯ ದುರಂತಕ್ಕೆ ಸಂತಾಪ ಸೂಚಿಸಿದ ರಾಜಕೀಯ ನಾಯಕರು | Oneindia Kannada

ನವದೆಹಲಿ, ನವೆಂಬರ್ 24: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದಲ್ಲಿ ಖಾಸಗಿ ಬಸ್ ನಾಲೆಗೆ ಉರುಳಿ 23ಕ್ಕೂ ಹೆಚ್ಚು ಮಂದಿ ಮೃತಪಟ್ಟ ದುರಂತಕ್ಕೆ ಇಡೀ ದೇಶ ಮುಮ್ಮಲ ಮರಗಿದೆ.

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ನಾಯಕರು ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ರಾಜಕುಮಾರ್ ಎಂಬ ಖಾಸಗಿ ಬಸ್ ನಾಲೆಗೆ ಉರುಳಿದ ಪರಿಣಾಮ 23ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಬಸ್‌ನಲ್ಲಿದ್ದರು. ಒಬ್ಬ ಶಾಲಾ ವಿದ್ಯಾರ್ಥಿ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದಾರೆ.

ಮಂಡ್ಯ ಭೀಕರ ದುರಂತ LIVE:ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಮಂಡ್ಯ ಭೀಕರ ದುರಂತ LIVE:ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಸಿಎಂ ಅವರ ಎಲ್ಲ ಪೂರ್ವನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಅತೀವ ನೋವು

ಕರ್ನಾಟಕದ ಮಂಡ್ಯದಲ್ಲಿ ನಡೆದ ಬಸ್ ಅಪಘಾತ ದುರಂತ ಅತೀವ ನೋವುಂಟು ಮಾಡಿದೆ. ಮೃತಪಟ್ಟವರ ಕುಟುಂಬದವರಿಗೆ ನನ್ನ ಸಾಂತ್ವನಗಳನ್ನು ಹೇಳುತ್ತೇನೆ. ಈ ದುಃಖದ ಸಂದರ್ಭದಲ್ಲಿ ಅದನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ಅವರಿಗೆ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆಮಂಡ್ಯ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Array

ರಾಹುಲ್ ಗಾಂಧಿ ಸಂತಾಪ

ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ಸುಮಾರು 20 ಜನರು ಮೃತಪಟ್ಟು, ಇನ್ನೂ ಅನೇಕರು ಗಾಯಗೊಂಡಿರುವ ಭೀಕರ ಘಟನೆ ಕುರಿತು ಕೇಳಿ ತೀವ್ರ ದುಃಖವಾಗಿದೆ.

ಮೃತರ ಕುಟುಂಬದವರಿಗೆ ನನ್ನ ತೀವ್ರವಾದ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಲಾಗಿದೆ.

ಕನಗನಮರಡಿ ಬಸ್ ದುರಂತ ಶನಿವಾರ ನಡೆದಿದ್ದರಿಂದ ಅನಾಹುತ ಪ್ರಮಾಣ ಕಡಿಮೆಯಾಯಿತೆ?ಕನಗನಮರಡಿ ಬಸ್ ದುರಂತ ಶನಿವಾರ ನಡೆದಿದ್ದರಿಂದ ಅನಾಹುತ ಪ್ರಮಾಣ ಕಡಿಮೆಯಾಯಿತೆ?

ದುರ್ದೈವದ ಸಂಗತಿ

ಪಾಂಡವಪುರ ತಾಲ್ಲೂಕಿನ ಕನಗನಮರಡಿಯಲ್ಲಿ ವಿ.ಸಿ.ನಾಲೆಗೆ ಖಾಸಗೀಗಿ ಬಸ್ ಬಿದ್ದು 23 ಮಂದಿ ಅಸು ನೀಗಿರುವುದು ದುರ್ದೈವದ ಸಂಗತಿ. ಅಮಾಯಕರು ಹೀಗೆ ಅನ್ಯಾಯವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವುಂಟು ಮಾಡಿದೆ. ಮೃತರ ಕುಟುಂಬಕ್ಕೆ ಸಾಂತ್ವನ ಕೋರುವೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮೃತರ ಕುಟುಂಬಕ್ಕೆ ಅಗತ್ಯವಾದ ನೆರವು ನೀಡಲು ಮುಂದಾಗಬೇಕು ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಿನೇಶ್ ಗುಂಡೂರಾವ್

ಮಂಡ್ಯ ಜಿಲ್ಲೆಯಲ್ಲಿ ಬಸ್ ನಾಲೆಗೆ ಬಿದ್ದು ಪ್ರಯಾಣಿಕರು ಮೃತಪಟ್ಟ ದುರಂತವನ್ನು ಕೇಳಿ ದುಃಖಬವಾಯಿತು. ಮೃತಪಟ್ಟ ಮತ್ತು ಗಾಯಗೊಂಡ ಪ್ರಯಾಣಿಕರ ಕುಟುಂಬದವರಿಗಾಗಿ ಪ್ರಾರ್ಥಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದುಃಖ ತಂದಿದೆ

ಮಂಡ್ಯದ ಪಾಂಡವಪುರದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರು ಸಾವ್ನಪ್ಪಿರುವುದು ಅತೀವ ದುಃಖ ತಂದಿದೆ. ರಕ್ಷಣಾಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಈ ದಾರುಣ ಅವಘಡದಲ್ಲಿ ಅಗಲಿದ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಂತಾಪ ಕೋರಿದ್ದಾರೆ.

ಸಿದ್ದರಾಮಯ್ಯ ಆಘಾತ

ಮಂಡ್ಯದ ವಿಸಿ ನಾಲೆಯಲ್ಲಿ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಮೃತಪಟ್ಟವರ ಕುಟುಂಬದವರಿಗೆ ತಕ್ಷಣ ಪರಿಹಾರ ಒದಗಿಸುವ ಸಲುವಾಗಿ ಮುಖ್ಯಮಂತ್ರಿ ಮತ್ತು ಇತರೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

English summary
Prime Minister Narendra Modi, Congress chief Rahul Gandhi expressed condolence on tragic bus accident that killed more than 25 in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X