ಮೋದಿಯನ್ನು 'ನೀಚ' ಎಂದ ಅಯ್ಯರ್, ಮೋದಿಯಿಂದ ತಕ್ಕ ಉತ್ತರ

Posted By:
Subscribe to Oneindia Kannada

ಅಹಮದಾಬಾದ್, ಡಿಸೆಂಬರ್ 07: ಗುಜರಾತ್ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನದಂದು ಕಾಂಗ್ರೆಸ್ ಹಾಗೂ ಬಿಜೆಪಿಯ ವಾಕ್ಸಮರ ತಾರಕಕ್ಕೇರಿದೆ. ಹಿರಿಯ ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆದಿದ್ದಲ್ಲದೆ 'ಸಭ್ಯತೆ' ಇಲ್ಲದವನು ಎಂದು ಹೇಳಿದ್ದಾರೆ.

ಡಾ. ಬಿ. ಆರ್ ಅಂಬೇಡ್ಕರ್ ಅವರು ಕಂಡ ಕನಸನ್ನು ನನಸಾಗಿಸಲು ಶ್ರಮಿಸಿದವರಲ್ಲಿ ಜವಹರಲಾಲ್ ನೆಹರೂ ಅಗ್ರಗಣ್ಯರು. ದೇಶಕ್ಕಾಗಿ ದುಡಿದ ಇಂಥ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂಥ ವ್ಯಕ್ತಿ(ಮೋದಿ)ಯನ್ನು ನೀಚ ಎನ್ನದೇ ಇರಲಾಗದು, ಆತನಿಗೆ ಯಾವುದೇ ನಾಗರಿಕ ಸಭ್ಯತೆಗಳಿಲ್ಲ. ಸತ್ಯಂತ ಹೀನಾಯ ರೀತಿಯ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಎಎನ್ಐ ಜತೆ ಮಾತನಾಡುತ್ತಾ ಅಯ್ಯರ್ ಹೇಳಿದರು.

Congress calls Modi Neech, PM hits back

ಅಯ್ಯರ್ ಕೆರಳಲು ಕಾರಣ?: ಡಾ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಮರೆತುಬಿಟ್ಟಿದೆ. ಅಂಬೇಡ್ಕರ್ ಅವರ ಕೊಡುಗೆಗಳನ್ನು ಅಳಿಸಿ ಹಾಕಲು ಯತ್ನಿಸಿ ಕಾಂಗ್ರೆಸ್ ಸೋತಿದೆ.

ಜನರ ಮನಸ್ಸಿನಿಂದ ಅಂಬೇಡ್ಕರ್ ಅವರನ್ನು ಅಳಿಸಲು ಸಾಧ್ಯವಿಲ್ಲ ಎಂದು ಮೋದಿ ಅವರು ಚುನಾವಣಾ ಪ್ರಚಾರ ಭಾಷಣದ ವೇಳೆ ಹೇಳಿದ್ದರು. ಇದಕ್ಕೆ ಉತ್ತರವಾಗಿ ಅಯ್ಯರ್ ಮೇಲ್ಕಂಡ ರೀತಿ ಪ್ರತಿಕ್ರಿಯಿಸಿದ್ದಾರೆ.

ಉತ್ತಮವಾದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಹಿರಿಯ ರಾಜಕಾರಣಿಯೊಬ್ಬರು ಇಂಥ ಕೆಟ್ಟ ಭಾಷೆ ಬಳಸುತ್ತಿದ್ದಾರೆ. ಇದಕ್ಕೆ ಗುಜರಾತಿನ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

Read in English: Congress calls Modi 'Neech'
English summary
The war of words between the Congress and the BJP sunk to a new low on Thursday with veteran leader Manishankar Aiyar calling Prime Minister Narendra Modi 'Neech' (Lowly) and a person with no "Sabhyata" (Civic sense).

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ