'ಐ ಲವ್ ಪಾಕಿಸ್ತಾನ್' ಎಂದ ಮಣಿಶಂಕರ್ ಅಯ್ಯರ್

Posted By:
Subscribe to Oneindia Kannada

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ಸಿನಿಂದ ಅಮಾನತುಗೊಂಡಿರುವ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೆ ಸುದ್ದಿಯಲ್ಲಿದ್ದಾರೆ. ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 'ಭಾರತದಷ್ಟೇ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ' ಎಂದು ಹೇಳಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ. ಏಕೆಂದರೆ ನಾನು ಭಾರತವನ್ನು ಪ್ರೀತಿಸುತ್ತೇನೆ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

Mani Shankar Aiyar stirs up controversy, says he loves Pakistan

ಜಮ್ಮು ಮತ್ತು ಕಾಶ್ಮೀರದ ಸಂಜ್ವಾನ ಸೇನಾ ಶಿಬಿರದ ಮೇಲೆ ಪಾಕ್ ಪ್ರಾಯೋಜಿತ ಉಗ್ರರ ಪಡೆ ದಾಳಿ ನಡೆಸಿದ್ದರ ವಿರುದ್ಧ ಭಾರತ ಕಿಡಿಕಾರಿದೆ. 'ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ' ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಚ್ಚರಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಮಾತುಕೆಗೆ ಸ್ವಲ್ಪ ಸಮಯಾವಕಾಶ ಬೇಕಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಇಸ್ಲಾಮಾಬಾದ್ ದ್ವಿಪಕ್ಷೀಯ ಪ್ರಾಮುಖ್ಯತೆ ಮಾತುಕತೆ ನೀತಿಯನ್ನು ಒಪ್ಪಿಕೊಂಡಿದೆ. ಆದರೆ, ದೆಹಲಿ ಅದನ್ನು ಒಪ್ಪಿಲ್ಲ ಎಂದು ಹೇಳಿದರು.

ನಿನ್ನ ನೆರೆಹೊರೆಯವರನ್ನು ನಿನ್ನಂತೆಯೇ ಪ್ರೀತಿಸು ಎನ್ನುವಂತೆ ಭಾರತವನ್ನು ನಾನು ಪ್ರೀತಿಸುತ್ತೇನೆ. ಅದರಂತೆ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಎಂದರು.

ಕಾಂಗ್ರೆಸ್ಸಿನಿಂದ ಮಣಿಶಂಕರ್ ಅಯ್ಯರ್ ಅಮಾನತು

ಗುಜರಾತ್ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ನೀಚ್ ಆದ್ಮಿ' ಎಂದು ಜರೆದಿದ್ದರು. ನಂತರ ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಕ್ಷಮೆ ಕೋರಿದ್ದರು. ಆದರೆ, ಅವರನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress leader Mani Shankar Aiyar has sparked controversy yet again by saying that he loved Pakistan as much as India.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ