ಮಾ.5ರಂದು ಮಣಿಪುರ ಎರಡನೇ ಹಂತದ ಚುನಾವಣೆ: ಪೂರ್ಣ ಮಾಹಿತಿ
ಮಣಿಪುರದ 6 ಜಿಲ್ಲೆಗಳ ಒಟ್ಟು 22 ವಿಧಾನಸಭೆ ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆಯಲಿದ್ದು, ಮಾರ್ಚ್ 3ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ತೌಬಲ್, ಜಿರಿಬಾಮ್, ಚಾಂಡೆಲ್, ಉಖ್ರುಲ್, ಸೇನಾಪತಿ, ತಮೆಂಗ್ಲಾಂಗ್ ಜಿಲ್ಲೆಗಳಲ್ಲಿ ಎರಡನೇ ಹಂತದ ಚುನಾವಣಾ ಮತದಾನ ನಡೆಯಲಿದೆ. ಈ ಬಾರಿ ಮಣಿಪುರ ಚುನಾವಣೆ 2022ರ ಎರಡನೇ ಹಂತದಲ್ಲಿ 425,192 ಮಹಿಳೆಯರು ಮತ್ತು 407,224 ಪುರುಷರು ಸೇರಿದಂತೆ ಸುಮಾರು 8.3 ಲಕ್ಷ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ.
ಎರಡನೇ ಹಂತದಲ್ಲಿ ಚಾಂಡೆಲ್ ಕ್ಷೇತ್ರದಲ್ಲಿ ಬಿಜೆಪಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ ನಡುವೆ ನೇರ ಸ್ಪರ್ಧೆ ನಿರೀಕ್ಷೆಯಿದೆ. ಆದರೆ ನುಂಗ್ಬಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಾಮುಖಿ ಆಗಲಿವೆ. ಇನ್ನೊಂದು ಕಡೆ ಖಂಗಾಬೊಕ್, ವಾಂಗ್ಜಿಂಗ್-ತೆಂತಾ, ಸುಗ್ನೂ, ಮಾವೋ ಮತ್ತು ಉಖ್ರುಲ್ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಹೋರಾಟ ನಡೆಯಲಿದೆ.
ರಾಜ್ಯದಲ್ಲಿ ಪ್ರಮುಖರಿಗೆ ಅಗ್ನಿ ಪರೀಕ್ಷೆ:
ಎರಡನೇ ಹಂತದ ಮತದಾನವನ್ನು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಇಬೋಬಿ ಸಿಂಗ್, ಮಾಜಿ ಉಪಮುಖ್ಯಮಂತ್ರಿ ಗೈಖಾಂಗಮ್, ಹಾಲಿ ಕ್ರೀಡಾ ಸಚಿವ ಲೆಟ್ಪಾವೊ ಹಾಕಿಪ್, ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಸಚಿವ ಲೊಸಿ ಡಿಖೋ, ಅರಣ್ಯ ಸಚಿವ ಅವಾಂಗ್‌ಬೋ ನ್ಯೂಮೈ ಪಾಲಿಗೆ ಅಗ್ನಿ ಪರೀಕ್ಷೆ ಎಂದು ಹೇಳಲಾಗುತ್ತಿದೆ. ಈ ನಾಯಕರು ಕ್ರಮವಾಗಿ ತೌಬಲ್, ನುಂಗ್ಬಾ, ತೆಂಗ್ನೌಪಾಲ್, ಮಾವೋ ಮತ್ತು ತಮೇಯ್ ಕ್ಷೇತ್ರಗಳಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಮೊದಲ ಹಂತದಲ್ಲಿ ನಕಲಿ ಮತದಾನದ ಆರೋಪ:
ಕಳೆದ ಫೆಬ್ರವರಿ 28ರಂದು ಮಣಿಪುರದಲ್ಲಿ ಮೊದಲ ಹಂತದ ಮತದಾನ ನಡೆದು ಶೇ 78.03ರಷ್ಟು ಶೇಕಡಾವಾರು ಮತದಾನ ದಾಖಲಾಗಿತ್ತು. ಆದರೆ, ಮೊದಲ ಹಂತದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಬೂತ್‌ಗಳನ್ನು ವಶಪಡಿಸಿಕೊಂಡು ಚುನಾವಣಾ ಸಮಯದಲ್ಲಿ ಬೋಗಸ್ ಮತಗಳನ್ನು ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಮಣಿಪುರದ ಬಿಜೆಪಿ ಕಾರ್ಯಕರ್ತರು ಮಣಿಪುರದ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಈ 23 ಬೂತ್‌ಗಳಿಗೆ ಮರು ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಮಣಿಪುರ ಮತದಾನ ದಿನಾಂಕ ಪರಿಷ್ಕರಣೆ:
ಮಣಿಪುರದಲ್ಲಿ ಮಾರ್ಚ್ 5ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ ದಿನಾಂಕಗಳನ್ನು ಪರಿಷ್ಕರಿಸಲಾಗಿತ್ತು. ಪಂಚ ರಾಜ್ಯಗಳಾದ ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಗೋವಾ ಮತ್ತು ಉತ್ತರಾಖಂಡದಲ್ಲಿ ಒಟ್ಟು ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಮಾರ್ಚ್ 7ರಂದು ಉತ್ತರ ಪ್ರದೇಶದಲ್ಲಿ ಅಂತಿಮ ಹಾಗೂ ಏಳನೇ ಹಂತದ ಮತದಾನ ನಡೆಯಲಿದೆ. ಮಾರ್ಚ್ 10ರಂದು ಐದೂ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
Recommended Video
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications