ABP ನ್ಯೂಸ್-CVoter ಸಮೀಕ್ಷೆ: ಮಣಿಪುರ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ

ನವದೆಹಲಿ, ಜನವರಿ 11: ಪಂಚರಾಜ್ಯಗಳಲ್ಲಿ ವಿಧಾನಸಭೆ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಐದು ರಾಜ್ಯಗಳ ಪೈಕಿ ಮಣಿಪುರದ 60 ವಿಧಾನಸಭೆ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ದಿನಾಂಕ ಪ್ರಕಟಿಸಿದೆ. ಫೆಬ್ರವರಿ 27 ಮತ್ತು ಮಾರ್ಚ್ 3ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ದೇಶದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಹರಡುವಿಕೆ ವೇಗ ಹೆಚ್ಚಾಗಿದೆ. ಈ ಹಿನ್ನೆಲೆ ಜನವರಿ 15ರವರೆಗೂ ರೋಡ್ ಶೋ, ಚುನಾವಣಾ ಮೆರವಣಿಗೆ ಮತ್ತು ಪ್ರಚಾರಗಳನ್ನು ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಜನವರಿ 15ರ ನಂತರದಲ್ಲಿ ಕೊವಿಡ್-19 ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳುವುದಾಗಿ ಆಯೋಗ ತಿಳಿಸಿದೆ.

ಮಣಿಪುರ ವಿಧಾನಸಭೆ ಚುನಾವಣೆ 2022ಕ್ಕೆ ಇನ್ನೂ ಎರಡು ತಿಂಗಳು ಬಾಕಿ ಇರುವಂತೆ ಎಬಿಪಿ ಮತ್ತು ಸಿ-ವೋಟರ್ ಸಮೀಕ್ಷೆ ನಡೆಸಿದೆ. ವಾಸ್ತವದಲ್ಲಿ ಜನರ ಅಭಿಪ್ರಾಯ ಹೇಗಿದೆ ಎಂಬುದರ ಕುರಿತು ಚುನಾವಣಾಪೂರ್ಣ ಸಮೀಕ್ಷೆ ವರದಿಯನ್ನು ಪ್ರಕಟಿಸಿದೆ. ಪ್ರಸ್ತುತ ಸಂದರ್ಭದಲ್ಲಿ ರಾಜ್ಯದ ಮತದಾರರ ಒಲವು ಯಾವ ಪಕ್ಷದ ಕಡೆಗಿದೆ ಎಂಬುದನ್ನು ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆಯು ಬಹಿರಂಗಪಡಿಸಿದೆ.

Manipur ABP News-CVoter Opinion Poll: Tough Contest Between BJP and Congress

ಬಿಜೆಪಿ ಮತ್ತು ಕಾಂಗ್ರೆಸ್ ನಿಕಟ ಸ್ಪರ್ಧೆ:

ಉತ್ತರಪ್ರದೇಶದ ಜೊತೆಗೆ ಉತ್ತರಾಖಂಡ್, ಗೋವಾ, ಮಣಿಪುರ, ಪಂಜಾಬ್ ರಾಜ್ಯಗಳಿಗೂ ಚುನಾವಣೆ ನಿಗದಿಯಾಗಿದೆ. ಎಲ್ಲಾ ರಾಜ್ಯಗಳಲ್ಲಿನ ಜನಾಭಿಪ್ರಾಯ ಸಂಗ್ರಹ ನಡೆಸಿರುವ ಎಬಿಪಿ -ಸಿ ವೋಟರ್ ಸಂಸ್ಥೆ ಸಮೀಕ್ಷೆ ವರದಿಗಳನ್ನು ಪ್ರಕಟಿಸಿದೆ. ಎಬಿಪಿ ನ್ಯೂಸ್ ಮತ್ತು ಸಿ-ವೋಟರ್ ಚುನಾವಣಾ ಪೂರ್ವ ಸಮೀಕ್ಷೆಯ ವರದಿಯಲ್ಲಿ ಯಾವ ಪಕ್ಷ ಹೆಚ್ಚು ಮತಗಳನ್ನು ಗಳಿಸಬಹುದು ಎಂದು ಅಭಿಪ್ರಾಯ ಸಂಗ್ರಹ ಮಾಡಲಾಗಿದೆ.

ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ ಪೋಲ್ ಪ್ರಕಾರ, ಮುಂಬರುವ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಿಕಟ ಸ್ಪರ್ಧೆ ಏರ್ಪಡಲಿದ್ದು, ಈ ಬಾರಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಹೊರಬೀಳಲಿದೆ ಎಂದು ಸಮೀಕ್ಷೆಯ ವರದಿಯಿಂದ ತಿಳಿದುಬಂದಿದೆ.

ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ:

ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ ಪ್ರಕಾರ, ಬಿಜೆಪಿಗೆ 23 ರಿಂದ 27 ಸ್ಥಾನಗಳು ಸಿಗುತ್ತವೆ. ಆಡಳಿತ ಪಕ್ಷಕ್ಕೆ ಕಠಿಣ ಪೈಪೋಟಿ ನೀಡಲಿರುವ ಕಾಂಗ್ರೆಸ್, 22-26 ಸ್ಥಾನಗಳನ್ನು ಪಡೆಯಬಹುದು. ಇದರ ಹೊರತಾಗಿ ಎನ್ ಪಿಎಫ್ ಪಕ್ಷವು 2 ರಿಂದ 6 ಸ್ಥಾನ, ಇತರರು 5 ರಿಂದ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ ಮಣಿಪುರದಲ್ಲಿ ಅತಂತ್ರ ಫಲಿತಾಂಶ ಹೊರಬೀಳಲಿದೆ.

ಯಾವುದೇ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ:

ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ. ಈ ಮೊದಲು ನಡೆಸಿದ ಚುನಾವಣಾ ಸಮೀಕ್ಷೆಗಳಲ್ಲಿ ಬಿಜೆಪಿಯು ಮ್ಯಾಜಿಕ್ ನಂಬರ್ ಸನ್ನಿಹಿತಕ್ಕೆ ಬರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಪ್ರಸ್ತುತ ಚಿತ್ರಣವನ್ನು ಗಮನಿಸಿದಾಗ ಬಿಜೆಪಿಗೆ ಬಹುಮತ ಸಿಗುವುದಿಲ್ಲ, ಕಾಂಗ್ರೆಸ್ ಪ್ರಬಲ ಪಕ್ಷವಾಗಿ ಪೈಪೋಟಿ ನೀಡಲಿದ್ದು, NPF 2 ರಿಂದ 6 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಈ ಮಧ್ಯೆ ಇತರರು ಯಾವ ಪಕ್ಷಕ್ಕೆ ಬೆಂಬಲ ನೀಡುತ್ತಾರೋ ಅದೇ ಪಕ್ಷವು ಅಧಿಕಾರಕ್ಕೆ ಬರುವ ನಿರೀಕ್ಷೆ ಹೆಚ್ಚಾಗಿದೆ.

ಯಾವ ಪಕ್ಷಕ್ಕೆ ಎಷ್ಟು ಶೇಕಡಾವಾರು ಮತ:

Recommended Video

      Pant out of 3rd Test? ಕುತೂಹಲ ಮೂಡಿಸಿದ ಸಾಹ ಟ್ವಿಟ್ಟರ್ ಪೋಸ್ಟ್:ಇವತ್ತು ಯಾರು ಇನ್ ಯಾರು ಔಟ್?|Oneindia Kannada

      ಮಣಿಪುರದಲ್ಲಿ ಶೇಕಡಾವಾರು ಮತ ಪ್ರಮಾಣವನ್ನು ಲೆಕ್ಕ ಹಾಕಿದಾಗ ಬಿಜೆಪಿಗೆ ಶೇ.35.5ರಷ್ಟು ಮತಗಳು ಬೀಳಲಿದ್ದು, ಕಳೆದ 2017ರ ಚುನಾವಣೆಗೆ ಹೋಲಿಸಿದರೆ ಶೇ.0.8ರಷ್ಟು ಇಳಿಕೆಯಾಗಿದೆ. ಅದೇ ರೀತಿ ಕಾಂಗ್ರೆಸ್ ಶೇಕಡಾವಾರು ಮತಪ್ರಮಾಣದಲ್ಲೂ ಇಳಿಕೆಯಾಗಿದೆ. 2017ರಲ್ಲಿ ಶೇ.35.10ರಷ್ಟು ಮತಗಳನ್ನು ಗಳಿಸಿದ್ದ ಕಾಂಗ್ರೆಸ್ ಮುಂಬರುವ ಚುನಾವಣೆಯಲ್ಲಿ ಶೇ.32.60ರಷ್ಟು ಮತಗಳನ್ನು ಗಳಿಸಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+