ಮಣಿಪುರ: ಎನ್ ಕೌಂಟರ್ ಗೆ ಓರ್ವ ಭಯೋತ್ಪಾದಕ ಬಲಿ, 2 ಯೋಧರು ಹುತಾತ್ಮ

ಚಾಂಡೇಲ್(ಮಣಿಪುರ), ನವೆಂಬರ್ 15: ಮಣಿಪುರದ ಚಾಂಡೇಲ್ ಎಂಬಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕನನ್ನು ಬಲಿಹಾಕುವಲ್ಲಿ ಭಾರತೀಯ ಸೇನೆ ಸಫಲವಾಗಿದ್ದರೆ, ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಇಲ್ಲಿನ ಚಾಮೋಲಿ ಟಾಪ್ ನಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಇಂದು(ನ.15) ನಸುಕಿನಲ್ಲೇ ದಾಳಿ ಆರಂಭಿಸಿದ ಭಾರತೀಯ ಸೈನಿಕರು ಅಡಗಿ ಕುಳಿತಿದ್ದ ಓರ್ವ ಭಯೋತ್ಪಾದಕನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾದರು. ಎನ್ ಕೌಂಟರ್ ಸಮಯದಲ್ಲಿ ಭಯೋತ್ಪಾದಕರು ಪ್ರತಿದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾದರು.

Manipur ambush: Two jawans, one terrorist killed

ಮೃತ ಸೈನಿಕರು ಮತ್ತು ಭಯೋತ್ಪಾದಕನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮುಂದುವರಿದಿದೆ. ಮೃತ ಭಯೋತ್ಪಾದಕನಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನವೆಂಬರ್ 6 ರಂದು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ಎನ್ ಕೌಂಟರ್ ನಲ್ಲಿ ಓರ್ವ ಸೈನಿಕ ಹುತಾತ್ಮರಾಗಿ, ಮೂವರು ಭಯೋತ್ಪಾದಕರನ್ನು ಹತ್ಯೆಗೈದಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+