ಮಣಿಪುರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಏನೇನಿದೆ?

ಇಂಫಾಲ್, ಫೆಬ್ರವರಿ 17: ಮಣಿಪುರ ಚುನಾವಣೆ ಇನ್ನೇನು ಸನ್ನಿಹಿತವಾಗುತ್ತಿದೆ, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಮಹಿಳೆಯರು ಹಾಗೂ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಿದೆ. ಬಡ ಮಹಿಳೆಯರಿಗೆ ಎರಡು ಉಚಿತ ಅಡುಗೆ ಅನಿಲ ಸಿಲಿಂಡರ್, ಎಲ್ಲರಿಗೂ ಉಚಿತ ಸ್ಕೂಟಿ ಭರವಸೆ ನೀಡಲಾಗಿದೆ.

ಪ್ರತಿಭಾವಂತ ಕಾಲೇಜು ವಿದ್ಯಾರ್ಥಿನಿಯರು ಅಥವಾ ಬಡ ಹೆಣ್ಣುಮಕ್ಕಳಿಗೆ 25 ಸಾವಿರ ಪ್ರೋತ್ಸಾಹಧನ ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾದ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುವುದಾಗಿ ತಿಳಿಸಲಾಗಿದೆ.

Manipur : BJP Unveils Manifesto, Promises Free Scooty For College Girls, Rs 100 cr Startup Fund

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಯುವಕರ ಕೌಶಲ್ಯವನ್ನು ಹೆಚ್ಚಿಸಲು ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಭರವಸೆಯನ್ನು ಬಿಜೆಪಿ ನೀಡಿದೆ.

ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಮತ್ತು ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದು ತಿಳಿಸಲಾಗಿದೆ.

ಎಲ್ಲಾ ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿಯನ್ನು 200 ರೂನಿಂದ 1 ಸಾವಿರಕ್ಕೆ ಏರಿಕೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ನೀಡಲಾಗುವ ಹಣವನ್ನು 6 ರಿಂದ 8 ಸಾವಿರಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಹೇಳಲಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+