ಮಣಿಪುರ ಹಿಂಸಾಚಾರ: ಇದುವರೆಗೂ 60 ಮಂದಿ ಸಾವು: ಮೊದಲ ಬಾರಿ ಸಿಎಂ ಸಾರ್ವಜನಿಕ ಸಭೆ

ಹಿಂಸಾಚಾರಕ್ಕೆ ಕಾರಣರಾದವರನ್ನು ಪತ್ತೆಹಚ್ಚಲು ಉನ್ನತಮಟ್ಟದ ತನಿಖೆ ನಡೆಸಲಾಗುವುದು ಮತ್ತು ಅಶಾಂತಿಯನ್ನು ತಡೆಯಲು ವಿಫಲವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದರು. ರಾಜ್ಯದ ಕಾಪಾಡುವಂತೆ ಶಾಂತಿ ಕಾಪಾಡುವಂತೆ ಹೆಚ್ಚಿಸಿದರು.

"ಹಿಂಸಾಚಾರದಲ್ಲಿ ಇದುವರೆಗೆ ಸುಮಾರು 60 ಜನರು ಸಾವನ್ನಪ್ಪಿದ್ದಾರೆ ಮತ್ತು 231 ಜನರು ಗಾಯಗೊಂಡಿದ್ದಾರೆ. ಅಲ್ಲದೆ, ಮೇ 3 ರಂದು ನಡೆದ ಗಲಭೆಯಲ್ಲಿ ಸುಮಾರು 1,700 ಮನೆಗಳನ್ನು ಸುಟ್ಟುಹಾಕಲಾಗಿದೆ. ಜನತೆ ಶಾಂತಿಯನ್ನು ಕಾಪಾಡಬೇಕು, ಸಾರ್ವಜನಿಕ ಸಾರಿಗೆಯ ಸಂಚಾರಕ್ಕೆ ಅಡ್ಡಿ ಮಾಡದಂತೆ ಜನರಿಗೆ ಮನವಿ" ಮಾಡಿದರು.

Manipur Chief Minister Urges Peace and Announces High-Level Inquiry into Ethnic Clashes

ಇದುವರೆಗೂ ಗಲಭೆಯಲ್ಲಿ ಸಿಲುಕಿದ್ದ 20,000 ಜನರನ್ನು ಸ್ಥಳಾಂತರಿಸಲಾಗಿದೆ ಇನ್ನೂ 10 ಸಾವಿರ ಮಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. ಇಲ್ಲಿಯವರೆಗೆ, 35,655 ವ್ಯಕ್ತಿಗಳು ಸೇರಿದಂತೆ 1593 ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಕುರಿತಂತೆ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದಾರೆ. ಘಟನೆ ಬಗ್ಗೆ ಮೇಲ್ವಿಚಾರಣೆ ಮಾಡಿದ್ದಕ್ಕೆ ಮತ್ತು ಸಮಯಕ್ಕೆ ಸರಿಯಾಗಿ ಕೇಂದ್ರ ಪಡೆಗಳನ್ನು ಕಳಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಕ್ಕಾಗಿ ಅಮಿತ್ ಶಾ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಅರೆಸೇನಾ ಮತ್ತು ರಾಜ್ಯ ಪಡೆಗಳಿಗೆ ತಮ್ಮ ಗರಿಷ್ಠ ಸಹಕಾರವನ್ನು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸಂತ್ರಸ್ತ ಕುಟುಂಬಗಳು ತಮ್ಮ ಮನೆಗಳಿಗೆ ಮರಳಲು ಸುರಕ್ಷಿತ ಮತ್ತು ಅನುಕೂಲಕರ ವಾತಾವರಣವನ್ನು ಸೃಷ್ಟಿಸುವಂತೆ ಭದ್ರತಾ ಪಡೆಗಳಿಗೆ ಮನವಿ ಮಾಡಲಾಗುವುದು ಎಂದರು.

"ಗೃಹ ಸಚಿವ ಅಮಿತ್ ಶಾ ಅವರಿಗೆ ಸರ್ಕಾರದ ಪರವಾಗಿ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅವರು ಹಿಂಸಾಚಾರದ ಮೊದಲ ದಿನದಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕೇಂದ್ರ ಪಡೆಗಳ ಹಲವಾರು ಕಂಪನಿಗಳನ್ನು ರಾಜ್ಯಕ್ಕೆ ಕಳುಹಿಸಿದ್ದಾರೆ," ಎಂದು ಸಿಂಗ್ ಹೇಳಿದರು.

ಈಶಾನ್ಯ ರಾಜ್ಯಗಳು ಸೇರಿದಂತೆ ಹಲವಾರು ರಾಜ್ಯ ಸರ್ಕಾರಗಳು ಹಿಂಸಾಚಾರ ಪೀಡಿತ ಮಣಿಪುರದಿಂದ ತಮ್ಮ ನಾಗರಿಕರನ್ನು ಸ್ಥಳಾಂತರಿಸುವ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ.

ಜನರು ದೈನಂದಿನ ಅಗತ್ಯ ವಸ್ತುಗಳನ್ನು ಖರೀದಿಸಲು ಅನುವು ಮಾಡಿಕೊಡಲು ಭಾನುವಾರ ಕರ್ಫ್ಯೂವನ್ನು ಸಡಿಲಗೊಳಿಸಲಾಗಿತ್ತು ಸೋಮವಾರ ಕೂಡ ಅದನ್ನು ಮುಂದುವರೆಸಲಾಗಿದೆ. ಮಣಿಪುರದ ಬಹುಸಂಖ್ಯಾತ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಯಲ್ಲಿ ಸೇರಿಸಲು ಪರಿಗಣಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನಂತರ ಈಶಾನ್ಯ ರಾಜ್ಯದಲ್ಲಿ ಘರ್ಷಣೆಗಳು ಭುಗಿಲೆದ್ದವು.

ಎಸ್‌ಟಿ ಸ್ಥಾನಮಾನಕ್ಕಾಗಿ ಮೀಟೈ ಜನರ ಬೇಡಿಕೆಯ ನಡುವೆ, ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟ (ಎಟಿಎಸ್‌ಯು) ಮಣಿಪುರದಿಂದ ಬುಧವಾರ ರ್‍ಯಾಲಿಯನ್ನು ಆಯೋಜಿಸಲಾಗಿತ್ತು, ಅದು ನಂತರ ಹಿಂಸಾಚಾರಕ್ಕೆ ತಿರುಗಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+