Manipur Violence: ಸಾಕು ಹಿಂಸಾಚಾರ ನಿಲ್ಲಿಸಿ ಎಂದ ಮಣಿಪುರ ಸಿಎಂ!
ಇಂಫಾಲ್: ದೇಶದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮೇಳೈಸಿತ್ತು. ಅದ್ರಲ್ಲೂ ಗಲ್ಲಿಗಲ್ಲಿಯೂ ಸ್ವಾತಂತ್ರ್ಯದ ಕಳೆ ತುಂಬಿಕೊಂಡು, ಭಾರತದ ಗೆಲುವಿನ ಮೆಲುಕು ಹಾಕಿವೆ. ಹೀಗಿರುವಾಗಲೇ ಹಿಂಸಾಚಾರ ಪೀಡಿತ ಮಣಿಪುರದಲ್ಲೂ ಸ್ವಾತಂತ್ರ್ಯ ದಿನದ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲಾಗಿದೆ. ಈ ಸಮಯದಲ್ಲೇ ಮಣಿಪುರದ ಸಿಎಂ ಶಾಂತಿ ಸಂದೇಶ ರವಾನಿಸಿದ್ದಾರೆ.
ಮಣಿಪುರದ ಪರಿಸ್ಥಿತಿ ಕಳೆದ 3 ತಿಂಗಳಿಂದಲೂ ಬದಲಾಗುತ್ತಿಲ್ಲ, ಕ್ಷಣಕ್ಷಣಕ್ಕೂ ಕೈಮೀರಿ ಹೋಗುತ್ತಿರುವ ಸ್ಥಿತಿ ಆತಂಕ ಮೂಡಿಸಿದೆ. ಇದೇ ಹೊತ್ತಲ್ಲಿ ಮಣಿಪುರ ಸಿಎಂ ಮಾತನಾಡಿ ಕೆಲವು ತಪ್ಪು ತಿಳುವಳಿಕೆ, ಪಟ್ಟಭದ್ರ ಹಿತಾಸಕ್ತಿಗಳ ಪಿತೂರಿ ಮತ್ತು ವಿದೇಶಿ ಶಕ್ತಿಗಳ ಪರೋಕ್ಷ ಆತಂಕವಾದ ಮಣಿಪುರದಲ್ಲಿ ಹಿಂಸಾಚಾರಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಈ ಮೂಲಕ ಹಿಂಸೆ ನಡೆಸುತ್ತಿರುವವರ ವಿರುದ್ಧ ಮಣಿಪುರ ಸಿಎಂ ಎನ್. ಬಿರೇನ್ ಸಿಂಗ್ ಆಕ್ರೋಶ ಹೊರ ಹಾಕಿದ್ದು, ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.

ಹಿಂಸೆಯಿಂದ ಪರಿಹಾರ ಸಿಗುವುದಿಲ್ಲ
ಮಣಿಪುರ ರೈಫಲ್ಸ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನಂತರ ಬಿರೇನ್ ಸಿಂಗ್ ಮಾತನಾಡಿದರು. ಹತ್ತಾರು ವರ್ಷದಿಂದ ನಾವು ಒಟ್ಟಿಗೆ ವಾಸಿಸಿದ್ದೇವೆ ಈಗ ಅದೇ ರೀತಿ ಸಾಮರಸ್ಯದಿಂದ ಒಟ್ಟಿಗೆ ಬಾಳಬೇಕು. ಹಿಂಸಾಚಾರದಿಂದ ನೂರಾರು ಜನರು ಜೀವ ಕಳೆದುಕೊಂಡು ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಆಸ್ತಿ ಪಾಸ್ತಿ ನಷ್ಟವಾಗಿ ಜನರು ಸಂಕಷ್ಟದಲ್ಲಿದ್ದಾರೆ ಹಿಂಸಾಚಾರದಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗಲ್ಲ. ಹೀಗಾಗಿಯೇ ಎಲ್ಲ ಸಮುದಾಯದ ಮುಖಂಡರು ಕುಳಿತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಚರ್ಚಸಲಿ ಎಂದು ಸಲಹೆ ನೀಡಿದ್ದಾರೆ. ಸ್ವಾತಂತ್ರ್ಯ ಸಂಭ್ರಮದ ಕಾರ್ಯಕ್ರಮದಲ್ಲಿ ಸಂಧಾನಕ್ಕೆ ಈ ಮೂಲಕ ಪರೋಕ್ಷವಾಗಿ ಸೂಚಿಸಿದ್ದಾರೆ.
ಹಳೆಯದನ್ನು ಮರೆತು ನಾವು ಬಾಳಬೇಕು!
ಹಾಗೇ ಹಿಂಸಾಚಾರ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದವರ ಬಗ್ಗೆ ಮಾತನಾಡಿರುವ ಮಣಿಪುರದ ಸಿಎಂ ಬಿರೇನ್ ಸಿಂಗ್, ಹಿಂಸಾಚಾರ ಪೀಡಿತ ಜನರ ಪುನರ್ವಸತಿಗೆ ರಾಜ್ಯ ಸರ್ಕಾರ ನಿರಂತರ ಶ್ರಮ ವಹಿಸಿದೆ. ಕ್ಷಮಿಸಿ ಮರತುಬಿಡಿ ಎಂಬ ಮಂತ್ರವನ್ನು ಎಲ್ಲರೂ ಪಾಲಿಸಬೇಕು. ಒಂದು ಕುಟುಂಬ ಒಂದೇ ಜೀವನೋಪಾಯ ಯೋಜನೆ ಕಲ್ಪಿಸಿ ಜನರಿಗೆ ಪುನರ್ವಸತಿ ಕಲ್ಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಮಣಿಪುರ ಸರ್ಕಾರ ಈ ಸಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಾಕಷ್ಟು ಭದ್ರತೆ ಕೈಗೊಳ್ಳಲಾಗಿತ್ತು.

ಡ್ರಗ್ಸ್ ವಿರುದ್ಧ ವಾರ್ ಗ್ಯಾರಂಟಿ!
ಮಣಿಪುರ ಹಿಂಸೆಯ ವಿಚಾರವಾಗಿ ಸಾಕಷ್ಟು ಚರ್ಚೆ ನಡೆಯುವಾಗಲೇ ಮಣಿಪುರದ ಸಿಎಂ ಡ್ರಗ್ಸ್ ದಂಧೆ ವಿರುದ್ಧ ಗರಂ ಆಗಿದ್ದಾರೆ. ಡ್ರಗ್ಸ್ ವಿರುದ್ಧದ ಕ್ರಮ ಯಾವುದೇ ಸಮುದಾಯದ ಅಥವಾ ವ್ಯಕ್ತಿಗಳ ವಿರುದ್ಧ ಅಲ್ಲ. ದೇಶವನ್ನು ರಕ್ಷಿಸಲು ಇದು ಅನಿವಾರ್ಯ ಎಂದು ಬಿರೇನ್ ಸಿಂಗ್ ಗುಡುಗಿದ್ದಾರೆ. ನಿಷೇಧಿತ ಕೃಷಿಗಾಗಿ ವ್ಯಾಪಕ ಅರಣ್ಯನಾಶ ಆರಂಭಿಸಿದಾಗ ಸರ್ಕಾರವು ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ, ಅಕ್ರಮ ಡ್ರಗ್ಸ್ ದಂಧೆ ಕೊನೆಗಾಣಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಮಣಿಪುರ ಸಿಎಂ ಹೇಳಿದ್ದಾರೆ. ಹೀಗಾಗಿ ಹಿಂಸೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮದ ಮುನ್ಸೂಚನೆ ಸಿಕ್ಕಿದೆ.
3 ತಿಂಗಳಿಂದ ಮಣಿಪುರ ಧಗಧಗ
ಅಂದಹಾಗೆ ಮೇ 3 ರಂದು ಮಣಿಪುರದಲ್ಲಿ ಆರಂಭವಾದ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಮೃತಪಟ್ಟು, 3000 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದು, ಆಸ್ತಿ ನಷ್ಟಕ್ಕೆ ಲೆಕ್ಕ ಸಿಗುತ್ತಿಲ್ಲ. ಹೀಗಾಗಿ ಪರಿಸ್ಥಿತಿ ಕ್ಷಣಕ್ಷಣಕ್ಕೂ ಕೈಮೀರಿ ಹೋಗುತ್ತಿದೆ. ಮಣಿಪುರ ಸರ್ಕಾರ ಮಾತ್ರವಲ್ಲ ಕೇಂದ್ರ ಸರ್ಕಾರ ಕೂಡ ಹಿಂಸೆ ತಡೆಗಟ್ಟಲು ಕಠಿಣ ಕ್ರಮ ಕೈಗೊಂಡಿದೆ. ಆದ್ರೂ ಮಣಿಪುರ ತಣ್ಣಗಾಗದೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಇತ್ತೀಚೆಗೆ ವಿಪಕ್ಷ ಮುಖಂಡರು ಮುಂಗಾರು ಅಧಿವೇಶನದಲ್ಲಿ ಇದೇ ವಿಚಾರ ಮುಂದಿಟ್ಟುಕೊಂಡು ಹೋರಾಟ ನಡೆಸಿದ್ದವು. ಈಗ ಮಣಿಪುರ ಸಿಎಂ ಮಾತನಾಡಿದ್ದು, ಹಿಂಸೆ ಬಿಟ್ಟು ಶಾಂತಿ ಸ್ಥಾಪಿಸಲು ಕರೆ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications