ಮಣಿಪುರ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪೂರ್ಣ ಪಟ್ಟಿ ಪ್ರಕಟ

ಇಂಫಾಲ, ಜನವರಿ 30: ಮಣಿಪುರದ 60 ವಿಧಾನಸಭಾ ಕ್ಷೇತ್ರಗಳಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಇಂದು ಪೂರ್ಣ ಪಟ್ಟಿಯನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿ ಸಿಎಂ ಎನ್ ಬಿರೇನ್ ಸಿಂಗ್ ಅವರು ಹೀಂಗಾಂಗ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಕೇಂದ್ರ ಸಚಿವ ಭೂಪೇಂದರ್ ಯಾದವ್ ಭಾನುವಾರದಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮಣಿಪುರದಲ್ಲಿ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಮೂರನೇ ಎರಡರಷ್ಟು ಬಹುಮತದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಬಿಜೆಪಿಯು ಮಣಿಪುರದಲ್ಲಿ ಶಾಂತಿ ಮತ್ತು ಅಭಿವೃದ್ಧಿಯೊಂದಿಗೆ ಸರ್ಕಾರವನ್ನು ನಡೆಸಿದೆ. ಮಣಿಪುರದಲ್ಲಿ ಪಕ್ಷವು ಎಲ್ಲಾ 60 ಸ್ಥಾನಗಳಲ್ಲಿ ಪ್ರಬಲವಾಗಿ ಹೋರಾಡಲಿದೆ. ನಾವು ಎಲ್ಲಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ನಿಗದಿಪಡಿಸಿದ್ದೇವೆ. ಸಿಎಂ ಎನ್ ಬಿರೇನ್ ಸಿಂಗ್ ಹೀಂಗಾಂಗ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ದೀರ್ಘ ಕಾಲದಿಂದ ಬಿಜೆಪಿಗಾಗಿ ದುಡಿದವರಿಗೆ ಹೆಚ್ಚಿನ ಟಿಕೆಟ್ ನೀಡಲಾಗಿದೆ, ಕ್ರೀಡೆ, ಆಡಳಿತ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದವರಿಗೂ ಟಿಕೆಟ್ ನೀಡಲಾಗಿದೆ ಎಂದು ಭೂಪೇಂದರ್ ಯಾದವ್ ಹೇಳಿದರು.

Manipur Election: BJP Announces Candidates For All Seats, CM N Biren Singh To Contest From Heingang

60 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿ ಟ್ವೀಟ್ ಹೀಗಿದೆ:

ಮಣಿಪುರದ 60 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ಫೆಬ್ರವರಿ 27ರಂದು 38 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸೈಕುಲ್, ಕಂಗ್ ಪೊಕ್ಪಿ, ಸೈತು, ತಿಪಾಯಿಮುಖ್, ಥಾಂಲೊನ್, ಹೆಂಗ್ಲೆಪ್, ಚುರಾಚಂದಾಪುರ್, ಸಾಯಿಕೋಟ್ ಹಾಗೂ ಸಿಂಘಾಟ್ ಕ್ಷೇತ್ರಗಳು ಗುಡ್ಡಗಾಡು ಪ್ರದೇಶದಲ್ಲಿದ್ದು ಈ ಪ್ರದೇಶದಲ್ಲಿ ಬಹುತೇಕ ಕ್ರೈಸ್ತ ಸಮುದಾಯದ ಮತದಾರರಿದ್ದಾರೆ. ಎರಡನೇ ಮತದಾನ ಮಾರ್ಚ್ 3 ರಂದು ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರ ಬರಲಿದೆ.

ಮಣಿಪುರದ ಜನಸಂಖ್ಯೆಯ ಶೇಕಡಾ 43 ರಷ್ಟು ಬುಡಕಟ್ಟು ಜನಾಂಗದವರು ಮತ್ತು ಪ್ರಧಾನವಾಗಿ ಕ್ರಿಶ್ಚಿಯನ್ನರು ಎಂದು ವಿದ್ಯಾರ್ಥಿಗಳ ಒಕ್ಕೂಟ ಹೇಳಿದೆ. ಭಾನುವಾರದಂದು, "ವಿಶ್ರಾಂತಿ ಮತ್ತು ಆರಾಧನೆಯ ದಿನ", ಅವರು ತಪ್ಪದೇ ಚರ್ಚ್‌ಗೆ ಹೋಗುತ್ತಾರೆ. ಹೀಗಾಗಿ, ಮತದಾನ ದಿನಾಂಕ ಬದಲಾಯಿಸುವಂತೆ ಬಿಜೆಪಿ ಹಾಗೂ ಚುನಾವಣಾ ಆಯೋಗವನ್ನು ಬುಡಕಟ್ಟು ವಿದ್ಯಾರ್ಥಿ ಸಂಘಟನೆ, ಕುಕಿ ಇಂಪಿ ಸಂಘಟನೆ, ನಾಗಾ ಮಹಿಳೆಯ ಒಕ್ಕೂಟ, ಕ್ರೈಸ್ತ ಸಮುದಾಯ ಮನವಿ ಸಲ್ಲಿಸಿದೆ.

ಮಾರ್ಚ್ 10 ರಂದು ಫಲಿತಾಂಶ:
ಐದು ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರಗಳಲ್ಲಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ರಾಜ್ಯ ಚುನಾವಣೆಗಳು ನಡೆಯುತ್ತಿವೆ. ಇವುಗಳಲ್ಲಿ ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶಗಳನ್ನು ಘೋಷಿಸಲಾಗುತ್ತದೆ.

ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ ಪೋಲ್ ಪ್ರಕಾರ, ಮುಂಬರುವ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಿಕಟ ಸ್ಪರ್ಧೆ ಏರ್ಪಡಲಿದ್ದು, ಈ ಬಾರಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಹೊರಬೀಳಲಿದೆ ಎಂದು ಸಮೀಕ್ಷೆಯ ವರದಿಯಿಂದ ತಿಳಿದುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ ಪ್ರಕಾರ, 60 ಸ್ಥಾನಗಳ ಪೈಕಿ ಬಿಜೆಪಿಗೆ 23 ರಿಂದ 27 ಸ್ಥಾನಗಳು ಸಿಗುತ್ತವೆ. ಆಡಳಿತ ಪಕ್ಷಕ್ಕೆ ಕಠಿಣ ಪೈಪೋಟಿ ನೀಡಲಿರುವ ಕಾಂಗ್ರೆಸ್, 22-26 ಸ್ಥಾನಗಳನ್ನು ಪಡೆಯಬಹುದು. ಇದರ ಹೊರತಾಗಿ ಎನ್ ಪಿಎಫ್ ಪಕ್ಷವು 2 ರಿಂದ 6 ಸ್ಥಾನ, ಇತರರು 5 ರಿಂದ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ ಮಣಿಪುರದಲ್ಲಿ ಅತಂತ್ರ ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+