Manipur Election Result 2022: ಬಹುಮತದತ್ತ ಬಿಜೆಪಿ ಓಟ
ಇಂಫಾಲ್, ಮಾರ್ಚ್ 10: ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಪಂಜಾಬ್ ಮತ್ತು ಗೋವಾ ಎಲ್ಲಾ ಐದು ರಾಜ್ಯಗಳಿಗೆ 2022 ರ ವಿಧಾನಸಭಾ ಚುನಾವಣೆಯ ಎಣಿಕೆ ಪ್ರಾರಂಭವಾಗಿದೆ. ಮಣಿಪುರದಲ್ಲಿ ಬಹುಮತ ಸಾಧಿಸಲು 31 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಮುಖ್ಯವಾಗಿದೆ. ಈಗಾಗಲೇ ಬಿಜೆಪಿಯು ಬಹುಮತದತ್ತ ಓಟ ನಡೆಸಿದ್ದು, 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಕಾಂಗ್ರೆಸ್ 9 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಉಳಿದಂತೆ ಎನ್‌ಪಿಪಿ ಮೂರು ಹಾಗೂ ಇತರೆ ಪಕ್ಷಗಳು 19 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮೌ ಕ್ಷೇತ್ರದಲ್ಲಿ ಬಿಜೆಪಿಯ ಸಾನಿ ಅಲೆಕ್ಜಾಂಡರ್ ಮೈಖೋ ವಿರುದ್ಧ ಎನ್‌ಪಿಎಫ್‌ನ ಲೋಸಿ ಡಿಖೋ ಮುನ್ನಡೆ ಸಾಧಿಸಿದ್ದಾರೆ. ಬಿಷೆಂಪುರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎನ್ ಜೋಯ್‌ಕುಮಾರ್ ಸಿಂಗ್ ವಿರುದ್ಧ ಬಿಜೆಪಿಯ ಕೊಂತೌಜಮ್ ಗೋವಿಂದಾಸ್ ಸಿಂಗ್ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಬಿಜೆಪಿಯು ಮಣಿಪುರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. "ನಾನು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಕಳೆದ 5 ವರ್ಷಗಳಲ್ಲಿ ಇದ್ದಂತೆ ಮುಂಬರುವ ಐದು ವರ್ಷಗಳು ಶಾಂತಿ ಮತ್ತು ಅಭಿವೃದ್ಧಿಯೊಂದಿಗೆ ಸಾಗಲಿದೆ. ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸಿದ್ದೇನೆ," ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿದ್ದಾರೆ.

ಇದಕ್ಕೂ ಮುನ್ನ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್ ಬಿಜೆಪಿ ಮೂವತ್ತು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದರು. ಆದರೆ ಬಹುಮತ ಸಾಧಿಸಲು 31 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಮುಖ್ಯವಾಗಿದೆ.
ಮಣಿಪುರ ವಿಧಾನಸಭೆ ಚುನಾವಣೆ
ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಉತ್ತರ ಪ್ರದೇಶದ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಸಲಾಗಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಫೆಬ್ರವರಿ 20 ರಂದು ಮತದಾನ ನಡೆದಿದೆ.
2017 ರಲ್ಲಿ ಮಣಿಪುರದಲ್ಲಿ 60 ಸ್ಥಾನ (31 ಮ್ಯಾಜಿಕ್ ನಂಬರ್) ಗಳ ಪೈಕಿ ಬಿಜೆಪಿಯು ಒಟ್ಟು 21 ವಿಧಾನಸಭೆ ಸ್ಥಾನಗಳೊಂದಿಗೆ ಸರ್ಕಾರವನ್ನು ನಡೆಸುತ್ತಿದೆ. ಈಗ 40 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿಯನ್ನು ಮಣಿಪುರ ಬಿಜೆಪಿಯು ಹೊಂದಿದೆ. ಕಳೆದ ಚುನಾವಣೆಯಲ್ಲಿ 28 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದರೂ ಕೂಡ ಬಿಜೆಪಿ ಎನ್‌ಪಿಪಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚನೆ ಮಾಡಿದೆ. ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ. (ಒನ್‌ಇಂಡಿಯಾ ಸುದ್ದಿ)
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications