ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಪಿಪಿ, ಎನ್‌ಪಿಎಫ್‌ ಮಣಿಪುರ ಬಿಜೆಪಿ ಸರ್ಕಾರದ ಭಾಗವಾಗುತ್ತಾ?

|
Google Oneindia Kannada News

ಇಂಫಾಲ್‌, ಮಾರ್ಚ್ 10: ಭಾರತೀಯ ಜನತಾ ಪಕ್ಷವು (ಬಿಜೆಪಿ) ಮಣಿಪುರದಲ್ಲಿ ಅಧಿಕಾರಕ್ಕೆ ಮತ್ತೆ ಮರಳಲು ಸಜ್ಜಾಗುತ್ತಿದೆ. ಈ ನಡುವೆ ಪ್ರಸ್ತುತ ಆಡಳಿತದ ಭಾಗವಾಗಿರುವ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಜೊತೆ ಪಕ್ಷವು ಮೈತ್ರಿಯನ್ನು ಮುಂದುವರೆಸಲಿದೆ," ಎಂದು ಹಾಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ.

"ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಆ ಮೈತ್ರಿಯ ಭಾಗವಾಗಿರದಿರಬಹು," ಎಂದು ಕೂಡಾ ಈ ಸಂದರ್ಭದಲ್ಲೇ ಹೇಳಿದ್ದಾರೆ. "ಮುಂದಿನ ಸರ್ಕಾರದಲ್ಲಿ ಎನ್‌ಪಿಪಿ ನಮ್ಮೊಂದಿಗೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ," ಎಂದು ಹಾಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದಾರೆ.

ಉತ್ತರಾಖಂಡ್ ಫಲಿತಾಂಶ: ಬಿಜೆಪಿ, ಕಾಂಗ್ರೆಸ್ ಶೇಕಡಾವಾರು ಮತ ಗಳಿಕೆಉತ್ತರಾಖಂಡ್ ಫಲಿತಾಂಶ: ಬಿಜೆಪಿ, ಕಾಂಗ್ರೆಸ್ ಶೇಕಡಾವಾರು ಮತ ಗಳಿಕೆ

ಮಣಿಪುರದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದ್ದು, ಇತರ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಭಾರತೀಯ ಚುನಾವಣಾ ಆಯೋಗವು ಹಂಚಿಕೊಂಡ ಇತ್ತೀಚಿನ ಮಾಹಿತಿಯು ಹೇಳಿದೆ. ಹಾಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಮ್ಮ ಸಮೀಪದ ಕಾಂಗ್ರೆಸ್ ಪ್ರತಿಸ್ಪರ್ಧಿ ಪಿ ಶರತ್‌ಚಂದ್ರ ಸಿಂಗ್ ಅವರನ್ನು ಹೀಂಗಾಂಗ್ ಕ್ಷೇತ್ರದಲ್ಲಿ 18,271 ಮತಗಳಿಂದ ಸೋಲಿಸಿದ್ದಾರೆ.

Manipur Election Result 2022: Will NPP, NPF be part of new govt?

"ಪಕ್ಷದ ಕೇಂದ್ರ ನಾಯಕರು ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ. ನಾವು ಸರ್ಕಾರ ರಚನೆಗೆ ಹಕ್ಕು ಸಾಧಿಸಲು ಸಮಯ ತೆಗೆದುಕೊಳ್ಳುತ್ತೇವೆ. ಫಲಿತಾಂಶಗಳು ಹೊರಬರಲಿ. ನಮ್ಮ ರಾಷ್ಟ್ರೀಯ ನಾಯಕರು ಮುಖ್ಯಮಂತ್ರಿ ಯಾರು ಎಂಬುವುದನ್ನು ನಿರ್ಧಾರ ಮಾಡುತ್ತಾರೆ. ನಾವು ಪ್ರಧಾನಿ ನರೇಂದ್ರ ಮೋದಿಯವರ ಸಮಗ್ರ ಅಭಿವೃದ್ಧಿಯ ಮಂತ್ರವನ್ನು ನಂಬಿದ್ದೇವೆ," ಎಂದು ತಿಳಿಸಿದ್ದಾರೆ.

ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) 22 ವರ್ಷಗಳ ನಂತರ ಮಣಿಪುರದಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದು ಇತರ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 2017ರಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಈಗ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಎನ್‌ಪಿಎಫ್‌ ಹಾಗೂ ಎನ್‌ಪಿಪಿ ಎರಡೂ ಪಕ್ಷಗಳು ಬಿಜೆಪಿ ನೇತೃತ್ವದ ಪ್ರಸ್ತುತ ಆಡಳಿತ ಮೈತ್ರಿಕೂಟದ ಭಾಗವಾಗಿದೆ. ಆದಾಗ್ಯೂ, ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ 60 ಸ್ಥಾನಗಳಲ್ಲಿ ಏಕಾಂಗಿಯಾಗಲು ನಿರ್ಧರಿಸಿದೆ.

ಮಣಿಪುರ ವಿಧಾನಸಭೆ ಚುನಾವಣೆ

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಉತ್ತರ ಪ್ರದೇಶದ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಸಲಾಗಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಫೆಬ್ರವರಿ 20 ರಂದು ಮತದಾನ ನಡೆದಿದೆ.

2017 ರಲ್ಲಿ ಮಣಿಪುರದಲ್ಲಿ 60 ಸ್ಥಾನ (31 ಮ್ಯಾಜಿಕ್ ನಂಬರ್) ಗಳ ಪೈಕಿ ಬಿಜೆಪಿಯು ಒಟ್ಟು 21 ವಿಧಾನಸಭೆ ಸ್ಥಾನಗಳೊಂದಿಗೆ ಸರ್ಕಾರವನ್ನು ನಡೆಸುತ್ತಿದೆ. ಈಗ 40 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿಯನ್ನು ಮಣಿಪುರ ಬಿಜೆಪಿಯು ಹೊಂದಿದೆ. ಕಳೆದ ಚುನಾವಣೆಯಲ್ಲಿ 28 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದರೂ ಕೂಡ ಬಿಜೆಪಿ ಎನ್‌ಪಿಪಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚನೆ ಮಾಡಿದೆ. ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ. (ಒನ್‌ಇಂಡಿಯಾ ಸುದ್ದಿ)

English summary
Manipur Election Result 2022: Will NPP, NPF be part of new govt?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X