ಮಣಿಪುರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಜೆಡಿಯು ಬೆಂಬಲ
ಇಂಫಾಲ, ಮಾರ್ಚ್ 13: ಮಣಿಪುರದ 60 ಕ್ಷೇತ್ರಗಳಿಗೆ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಸಲಾಯಿತು. 2022ರ ಮಾರ್ಚ್ 10ರಂದು ಮತ ಎಣಿಕೆ ನಂತರ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ''ಪ್ರಸ್ತುತ ಆಡಳಿತದ ಭಾಗವಾಗಿರುವ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಜೊತೆ ಪಕ್ಷವು ಮೈತ್ರಿಯನ್ನು ಮುಂದುವರೆಸಲಿದೆ," ಎಂದು ಹಾಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಬಿಜೆಪಿ ಹೈಕಮಾಂಡ್ ಮೂಲಗಳು ತಿಳಿಸಿವೆ.
ಈ ನಡುವೆ ಮಣಿಪುರದಲ್ಲಿ ಶೇ 10.77ರಷ್ಟು ಮತ ಗಳಿಕೆ ಮೂಲಕ 6 ಸ್ಥಾನ ಗೆದ್ದಿರುವ ಜನತಾ ದಳ(ಸಂಯುಕ್ತ) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಈಗಾಗಲೇ ಎನ್ ಪಿ ಎಫ್ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿರೇನ್ ಸಿಂಗ್, ಮುಂದಿನ ಸರ್ಕಾರದಲ್ಲಿ ಎನ್‌ಪಿಪಿ ನಮ್ಮೊಂದಿಗೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಜೆಡಿಯು ಶಾಸಕರಿಗೆ ಸಚಿವರಾಗುವ ಅವಕಾಶ ಲಭ್ಯವಾಗಲಿವೆ.
ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) 22 ವರ್ಷಗಳ ನಂತರ ಮಣಿಪುರದಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಎನ್‌ಪಿಎಫ್ ಹಾಗೂ ಎನ್‌ಪಿಪಿ ಎರಡೂ ಪಕ್ಷಗಳು ಬಿಜೆಪಿ ನೇತೃತ್ವದ ಪ್ರಸ್ತುತ ಆಡಳಿತ ಮೈತ್ರಿಕೂಟದ ಭಾಗವಾಗಿದೆ. ಆದಾಗ್ಯೂ, ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ 60 ಸ್ಥಾನಗಳಲ್ಲಿ ಏಕಾಂಗಿಯಾಗಲು ಸ್ಪರ್ಧಿಸಿತ್ತು.

ಜೆಡಿಯು ಬೆಂಬಲ ಪತ್ರ:
ಮಣಿಪುರದ ಜನರ ಹಿತದೃಷ್ಟಿಯಿಂದ ಸರ್ಕಾರ ರಚನೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ಜೆಡಿಯು ನಿರ್ಧರಿಸಿದೆ ಎಂದು ಜೆಡಿಯು ಶಾಸಕರು ಪತ್ರದಲ್ಲಿ ಬರೆದಿದ್ದಾರೆ. "ಪಕ್ಷದಲ್ಲಿ ಬಂದ ಜನಾದೇಶವನ್ನು ಗೌರವಿಸಲು ಮತ್ತು ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ಜೆಡಿಯು ಬಿಜೆಪಿಗೆ ಮನವಿ ಮಾಡಲು ಬಯಸುತ್ತದೆ" ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ ರಾಜ್ಯ ವಿಧಾನಸಭೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ಜೆಡಿಯು ಖುಮುಚ್ಚಮ್ ಜೋಯ್ಕಿಸನ್ ಸಿಂಗ್ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಅತ್ಯಂತ ಕಳಪೆ ಪ್ರದರ್ಶನ
ಏತನ್ಮಧ್ಯೆ, ಮಣಿಪುರದಲ್ಲಿ ಕಾಂಗ್ರೆಸ್ ತನ್ನ ಅತ್ಯಂತ ಕಳಪೆ ಪ್ರದರ್ಶನವನ್ನು ದಾಖಲಿಸಿದೆ. 2017 ರ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷದ ಸ್ಥಾನಮಾನವನ್ನು ಹೊಂದಿದ್ದ ದೇಶದ ಪುರಾತನ ಪಕ್ಷ 2022ರ ಚುನಾವಣೆಯಲ್ಲಿ ಕೇವಲ 5 ಸ್ಥಾನಗಳಿಗೆ ಕುಸಿದಿದೆ. ಈ ಹಿಂದಿನ ಚುನಾವಣೆಗಳಿಗಿಂತ 17 ಸ್ಥಾನಗಳನ್ನು ಕಡಿಮೆ ಗಳಿಸಿದೆ, ಆದರೂ ಮೂರು ಬಾರಿ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಮತ್ತು ಅವರ ಮಗ ಓ ಸುರ್ಜಾಕುಮಾರ್ ಕ್ರಮವಾಗಿ ತೌಬಲ್ ಮತ್ತು ಖಂಗಾಬೋ ಕ್ಷೇತ್ರಗಳಿಂದ ಜಯಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

60 ಸ್ಥಾನಗಳ ವಿಧಾನಸಭೆ
60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನ, ಜನತಾ ದಳ (ಯುನೈಟೆಡ್) 6, ಕಾಂಗ್ರೆಸ್ 5, ಎನ್ ಪಿ ಪಿ 7, ಎನ್ ಪಿಎಫ್ 5, ಕುಕಿ ಪೀಪಲ್ಸ್ ಮೈತ್ರಿಕೂಟ 2 ಸ್ಥಾನ ಗೆದ್ದುಕೊಂಡಿವೆ. ಬಿಜೆಪಿ ಶೇ 37.83, ಕಾಂಗ್ರೆಸ್ 16.83%, ಜೆಡಿಯು 10.77%, ಎನ್ ಪಿ ಇ ಪಿ 17.29%, ಎನ್ ಪಿ ಎಫ್ 8.09 %, ಇತರೆ 7.53 % ಬಂದಿದೆ.

ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ
2017 ರಲ್ಲಿ ಮಣಿಪುರದಲ್ಲಿ 60 ಸ್ಥಾನ (31 ಮ್ಯಾಜಿಕ್ ನಂಬರ್) ಗಳ ಪೈಕಿ ಬಿಜೆಪಿಯು ಒಟ್ಟು 21 ವಿಧಾನಸಭೆ ಸ್ಥಾನಗಳೊಂದಿಗೆ ಸರ್ಕಾರವನ್ನು ನಡೆಸುತ್ತಿದೆ. ಈಗ 40 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿಯನ್ನು ಮಣಿಪುರ ಬಿಜೆಪಿಯು ಹೊಂದಿದೆ. ಕಳೆದ ಚುನಾವಣೆಯಲ್ಲಿ 28 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದರೂ ಕೂಡ ಬಿಜೆಪಿ ಎನ್‌ಪಿಪಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚನೆ ಮಾಡಿದೆ. ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications