ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಣಿಪುರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಜೆಡಿಯು ಬೆಂಬಲ

|
Google Oneindia Kannada News

ಇಂಫಾಲ, ಮಾರ್ಚ್ 13: ಮಣಿಪುರದ 60 ಕ್ಷೇತ್ರಗಳಿಗೆ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಸಲಾಯಿತು. 2022ರ ಮಾರ್ಚ್ 10ರಂದು ಮತ ಎಣಿಕೆ ನಂತರ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ''ಪ್ರಸ್ತುತ ಆಡಳಿತದ ಭಾಗವಾಗಿರುವ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಜೊತೆ ಪಕ್ಷವು ಮೈತ್ರಿಯನ್ನು ಮುಂದುವರೆಸಲಿದೆ," ಎಂದು ಹಾಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಬಿಜೆಪಿ ಹೈಕಮಾಂಡ್ ಮೂಲಗಳು ತಿಳಿಸಿವೆ.

ಈ ನಡುವೆ ಮಣಿಪುರದಲ್ಲಿ ಶೇ 10.77ರಷ್ಟು ಮತ ಗಳಿಕೆ ಮೂಲಕ 6 ಸ್ಥಾನ ಗೆದ್ದಿರುವ ಜನತಾ ದಳ(ಸಂಯುಕ್ತ) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಈಗಾಗಲೇ ಎನ್ ಪಿ ಎಫ್ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿರೇನ್ ಸಿಂಗ್, ಮುಂದಿನ ಸರ್ಕಾರದಲ್ಲಿ ಎನ್‌ಪಿಪಿ ನಮ್ಮೊಂದಿಗೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಜೆಡಿಯು ಶಾಸಕರಿಗೆ ಸಚಿವರಾಗುವ ಅವಕಾಶ ಲಭ್ಯವಾಗಲಿವೆ.

ಮಣಿಪುರದ ವಿಧಾನಸಭಾ ಚುನಾವಣೆ 2022: ಗೆದ್ದ ಅಭ್ಯರ್ಥಿಗಳ ಪಟ್ಟಿ ಮಣಿಪುರದ ವಿಧಾನಸಭಾ ಚುನಾವಣೆ 2022: ಗೆದ್ದ ಅಭ್ಯರ್ಥಿಗಳ ಪಟ್ಟಿ

ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) 22 ವರ್ಷಗಳ ನಂತರ ಮಣಿಪುರದಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಎನ್‌ಪಿಎಫ್‌ ಹಾಗೂ ಎನ್‌ಪಿಪಿ ಎರಡೂ ಪಕ್ಷಗಳು ಬಿಜೆಪಿ ನೇತೃತ್ವದ ಪ್ರಸ್ತುತ ಆಡಳಿತ ಮೈತ್ರಿಕೂಟದ ಭಾಗವಾಗಿದೆ. ಆದಾಗ್ಯೂ, ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ 60 ಸ್ಥಾನಗಳಲ್ಲಿ ಏಕಾಂಗಿಯಾಗಲು ಸ್ಪರ್ಧಿಸಿತ್ತು.

 ಎನ್‌ಪಿಪಿ, ಎನ್‌ಪಿಎಫ್‌ ಮಣಿಪುರ ಬಿಜೆಪಿ ಸರ್ಕಾರದ ಭಾಗವಾಗುತ್ತಾ? ಎನ್‌ಪಿಪಿ, ಎನ್‌ಪಿಎಫ್‌ ಮಣಿಪುರ ಬಿಜೆಪಿ ಸರ್ಕಾರದ ಭಾಗವಾಗುತ್ತಾ?

ಜೆಡಿಯು ಬೆಂಬಲ ಪತ್ರ:

ಜೆಡಿಯು ಬೆಂಬಲ ಪತ್ರ:

ಮಣಿಪುರದ ಜನರ ಹಿತದೃಷ್ಟಿಯಿಂದ ಸರ್ಕಾರ ರಚನೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ಜೆಡಿಯು ನಿರ್ಧರಿಸಿದೆ ಎಂದು ಜೆಡಿಯು ಶಾಸಕರು ಪತ್ರದಲ್ಲಿ ಬರೆದಿದ್ದಾರೆ. "ಪಕ್ಷದಲ್ಲಿ ಬಂದ ಜನಾದೇಶವನ್ನು ಗೌರವಿಸಲು ಮತ್ತು ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ಜೆಡಿಯು ಬಿಜೆಪಿಗೆ ಮನವಿ ಮಾಡಲು ಬಯಸುತ್ತದೆ" ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ ರಾಜ್ಯ ವಿಧಾನಸಭೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ಜೆಡಿಯು ಖುಮುಚ್ಚಮ್ ಜೋಯ್ಕಿಸನ್ ಸಿಂಗ್ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಅತ್ಯಂತ ಕಳಪೆ ಪ್ರದರ್ಶನ

ಅತ್ಯಂತ ಕಳಪೆ ಪ್ರದರ್ಶನ

ಏತನ್ಮಧ್ಯೆ, ಮಣಿಪುರದಲ್ಲಿ ಕಾಂಗ್ರೆಸ್ ತನ್ನ ಅತ್ಯಂತ ಕಳಪೆ ಪ್ರದರ್ಶನವನ್ನು ದಾಖಲಿಸಿದೆ. 2017 ರ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷದ ಸ್ಥಾನಮಾನವನ್ನು ಹೊಂದಿದ್ದ ದೇಶದ ಪುರಾತನ ಪಕ್ಷ 2022ರ ಚುನಾವಣೆಯಲ್ಲಿ ಕೇವಲ 5 ಸ್ಥಾನಗಳಿಗೆ ಕುಸಿದಿದೆ. ಈ ಹಿಂದಿನ ಚುನಾವಣೆಗಳಿಗಿಂತ 17 ಸ್ಥಾನಗಳನ್ನು ಕಡಿಮೆ ಗಳಿಸಿದೆ, ಆದರೂ ಮೂರು ಬಾರಿ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಮತ್ತು ಅವರ ಮಗ ಓ ಸುರ್ಜಾಕುಮಾರ್ ಕ್ರಮವಾಗಿ ತೌಬಲ್ ಮತ್ತು ಖಂಗಾಬೋ ಕ್ಷೇತ್ರಗಳಿಂದ ಜಯಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

60 ಸ್ಥಾನಗಳ ವಿಧಾನಸಭೆ

60 ಸ್ಥಾನಗಳ ವಿಧಾನಸಭೆ

60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನ, ಜನತಾ ದಳ (ಯುನೈಟೆಡ್) 6, ಕಾಂಗ್ರೆಸ್ 5, ಎನ್ ಪಿ ಪಿ 7, ಎನ್ ಪಿಎಫ್ 5, ಕುಕಿ ಪೀಪಲ್ಸ್ ಮೈತ್ರಿಕೂಟ 2 ಸ್ಥಾನ ಗೆದ್ದುಕೊಂಡಿವೆ. ಬಿಜೆಪಿ ಶೇ 37.83, ಕಾಂಗ್ರೆಸ್ 16.83%, ಜೆಡಿಯು 10.77%, ಎನ್ ಪಿ ಇ ಪಿ 17.29%, ಎನ್ ಪಿ ಎಫ್ 8.09 %, ಇತರೆ 7.53 % ಬಂದಿದೆ.

ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ

ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ

2017 ರಲ್ಲಿ ಮಣಿಪುರದಲ್ಲಿ 60 ಸ್ಥಾನ (31 ಮ್ಯಾಜಿಕ್ ನಂಬರ್) ಗಳ ಪೈಕಿ ಬಿಜೆಪಿಯು ಒಟ್ಟು 21 ವಿಧಾನಸಭೆ ಸ್ಥಾನಗಳೊಂದಿಗೆ ಸರ್ಕಾರವನ್ನು ನಡೆಸುತ್ತಿದೆ. ಈಗ 40 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿಯನ್ನು ಮಣಿಪುರ ಬಿಜೆಪಿಯು ಹೊಂದಿದೆ. ಕಳೆದ ಚುನಾವಣೆಯಲ್ಲಿ 28 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದರೂ ಕೂಡ ಬಿಜೆಪಿ ಎನ್‌ಪಿಪಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚನೆ ಮಾಡಿದೆ. ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ.

English summary
Manipur election results 2022: The six MLAs of Janata Dal (United), extended support to the Bharatiya Janata Party (BJP) in Manipur as the latter is set to form the government in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X