ಮಣಿಪುರ ಭೂಕುಸಿತ: ಸೇನಾ ಸಿಬ್ಬಂದಿ ಸೇರಿ 7 ಸಾವು, 26 ಮಂದಿ ನಾಪತ್ತೆ

ಮಣಿಪುರ ಜುಲೈ 1: ಈಶಾನ್ಯ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದು 26 ಮಂದಿ ನಾಪತ್ತೆಯಾಗಿದ್ದಾರೆ.

ಮಣಿಪುರದ ರೈಲ್ವೆ ನಿರ್ಮಾಣ ಸ್ಥಳದ ಬಳಿ ಈ ಘಟನೆ ನಡೆದಿದ್ದು ರಕ್ಷಣ ಕಾರ್ಯಚರಣೆ ಮುಂದುವರೆದಿದೆ. ಘಟನೆ ತಿಳಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದು ತುರ್ತು ಕಾರ್ಯಚರಣೆಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡವೊಂದು ಭೂಕುಸಿತ ಸ್ಥಳಕ್ಕೆ ತಲುಪಿದ್ದು, ಇನ್ನೂ ಎರಡು ತಂಡಗಳು ತೆರಳುತ್ತಿವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

Manipur landslide: 7 dead including army personnel, 26 missing

ಮಣಿಪುರದ ತುಪುಲ್ ರೈಲು ನಿಲ್ದಾಣದ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಸಿಎಂ ಎನ್ ಬಿರೇನ್ ಸಿಂಗ್ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ನಾನು ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್‌ಡಿಆರ್‌ಎಫ್ ತಂಡ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇನ್ನೂ 2 ತಂಡಗಳು ತುಪುಲ್‌ಗೆ ತೆರಳುತ್ತಿವೆ ಎಂದು ಶಾ ಟ್ವೀಟ್ ಮಾಡಿದ್ದಾರೆ.

ಭಾರೀ ಮಳೆಯಿಂದಾಗಿ ಇಜೆಯಿ ನದಿ ಉಕ್ಕಿ ಹರಿದು ತಗ್ಗು ಪ್ರದೇಶಗಳನ್ನು ಮುಳುಗಿಸಿ ಜಲಾಶಯವನ್ನು ಸೃಷ್ಟಿಸಿದೆ. ಈ ಘಟನೆಯ ಬಳಿಕ ನೋನಿ ಜಿಲ್ಲಾಧಿಕಾರಿ ಹೊರಡಿಸಿದ ಸಲಹೆಯಲ್ಲಿ, "ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಶಿಬಿರದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಸಾವುನೋವುಗಳು ವರದಿಯಾಗಿವೆ. ಜೊತೆಗೆ ಅಧಿಕ ಜನರು ಜೀವಂತ ಸಮಾಧಿಯಾಗಿದ್ದಾರೆ. ಇಜೆಯಿ ನದಿಯ ಹರಿವು ಸಹ ಅವಶೇಷಗಳನ್ನು ಆಕ್ರಮಿಸಿದೆ. ಇದರಿಂದ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಇಜೆಯಿ ನದಿ ಅಣೆಕಟ್ಟಿನ ಶೇಖರಣಾ ಸ್ಥಿತಿ ಮೀರಿ ಒಡೆದರೆ ನೋನಿ ಜಿಲ್ಲಾ ಕೇಂದ್ರದ ತಗ್ಗು ಪ್ರದೇಶಗಳಿಗೆ ಹಾನಿಯನ್ನುಂಟುಮಾಡುತ್ತದೆ. ಮಾತ್ರವಲ್ಲದೇ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುತ್ತದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಜೊತೆಗೆ ಸುರಕ್ಷಿತ ಸ್ಥಳಕ್ಕೆ ತೆರಳುವುದು ಉತ್ತಮ ಎಂದಿದ್ದಾರೆ. ವಿಶೇಷವಾಗಿ ಮಕ್ಕಳು ನದಿಯ ಬಳಿಗೆ ಬರದಂತೆ ನೋಡಿಕೊಳ್ಳಿ. ಯಾರು ಸ್ಥಳಾಂತರಿಸಬಹುದೋ ಅವರನ್ನು ಸ್ಥಳಾಂತರಿಸಲು ಸಹ ಸೂಚಿಸಲಾಗಿದೆ. ಸಾರ್ವಜನಿಕರಿಗೆ ಮತ್ತಷ್ಟು ಎಚ್ಚರಿಕೆ ವಹಿಸಲು ಮತ್ತು ಮಳೆಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಾಗ ಯಾವುದೇ ಸಹಾಯಕ್ಕೆ ಸಿದ್ಧರಾಗಿರಲು ಸೂಚಿಸಲಾಗಿದೆ'' ಎಂದಿದ್ದಾರೆ.

ಮಾತ್ರವಲ್ಲದೆ ಅನೇಕ ರಸ್ತೆ ತಡೆಗಳಿಂದಾಗಿ ರಾಷ್ಟ್ರೀಯ ಹೆದ್ದಾರಿ 37 ಅನ್ನು ತಪ್ಪಿಸಲು ಪ್ರಯಾಣಿಕರಿಗೆ ಸಲಹೆ ನೀಡಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಪರಿಸ್ಥಿತಿಯನ್ನು ಅವಲೋಕಿಸಲು ತುರ್ತು ಸಭೆ ಕರೆದಿದ್ದಾರೆ. "ತುಪುಲ್‌ನಲ್ಲಿ ಇಂದು ಸಂಭವಿಸಿದ ಭೂಕುಸಿತದ ಪರಿಸ್ಥಿತಿಯನ್ನು ನಿರ್ಣಯಿಸಲು ತುರ್ತು ಸಭೆಯನ್ನು ಕರೆಯಲಾಗಿದೆ. ಈಗಾಗಲೇ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ವೈದ್ಯರೊಂದಿಗೆ ಆಂಬ್ಯುಲೆನ್ಸ್‌ಗಳನ್ನು ಸಹ ಕಳುಹಿಸಲಾಗಿದೆ" ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ. .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+