ಮಣಿಪುರದ ಇಂಫಾಲದಲ್ಲಿ ಸಚಿವರ ಅಧಿಕೃತ ನಿವಾಸಕ್ಕೆ ಬೆಂಕಿ: ಸಿಎಂ ಬಂಧನಕ್ಕೆ ಕಾಂಗ್ರೆಸ್ ಆಗ್ರಹ!
ಇಂಫಾಲ, ಜೂನ್. 15: ಗಲಭೆ ಪೀಡಿತ ಮಣಿಪುರ ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ಇಂಫಾಲ್ ಪಶ್ಚಿಮದಲ್ಲಿರುವ ಮಣಿಪುರದ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಮೂಲಗಳ ಪ್ರಕಾರ ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ಪಶ್ಚಿಮ ಜಿಲ್ಲೆಯ ಲಂಫೇಲ್ ಪ್ರದೇಶದಲ್ಲಿರುವ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್ಗೆನ್ ನಿವಾಸಕ್ಕೆ ಅಪರಿಚತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ. ಮೈತೀಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆ ಮತ್ತಷ್ಟು ಮುಂದುವರೆದಿದೆ. ಘಟನೆ ವೇಳೆ ನಿವಾಸದಲ್ಲಿ ಯಾರು ಇಲ್ಲದೇ ಇದ್ದ ಕಾರಣ ಅನಾಹುತ ತಪ್ಪಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ತಲುಪಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು, ಮಂಗಳವಾರ ಕಾಂಗ್‌ಪೋಕ್ಪಿ ಜಿಲ್ಲೆಯ ಖಮೆನ್‌ಲೋಕ್ ಪ್ರದೇಶದ ಹಳ್ಳಿಯೊಂದರಲ್ಲಿ ದುಷ್ಕರ್ಮಿಗಳು ದಾಳಿ ಮಾಡಿದ ನಂತರ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಹಲವಾರು ಮನೆಗಳನ್ನು ಸುಟ್ಟುಹಾಕಿದ್ದಾರೆ ಮತ್ತು ತಮೆಂಗ್ಲಾಂಗ್ ಜಿಲ್ಲೆಯ ಗೋಬಜಾಂಗ್‌ನಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ.
ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ಭದ್ರತಾ ಸಿಬ್ಬಂದಿ ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿ ಗಸ್ತು ತಿರುಗುವುದನ್ನು ಮುಂದುವರೆಸಿದ್ದಾರೆ. ಕಳೆದ 24 ಗಂಟೆಗಳಲ್ಲಿ, ತೆಂಗ್ನೌಪಾಲ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಿಂದ ಬಂದೂಕುಗಳು ಮತ್ತು 63 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಣಿಪುರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಪ್ರಕಾರ, ಇದುವರೆಗೆ ಒಟ್ಟು 1,040 ಶಸ್ತ್ರಾಸ್ತ್ರಗಳು, 13,601 ಮದ್ದುಗುಂಡುಗಳು ಮತ್ತು 230 ವಿವಿಧ ರೀತಿಯ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಅಧಿಕಾರಿಗಳು ಇಂಫಾಲ್ ಪೂರ್ವ ಜಿಲ್ಲೆ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಎಂದಿನಂತೆ ಬೆಳಗ್ಗೆ 5 ರಿಂದ ಸಂಜೆ 6 ರವರೆಗೆ ಕರ್ಫ್ಯೂ ಸಡಿಲಿಕೆ ಸಮಯವನ್ನು ಬೆಳಗ್ಗೆ 5 ರಿಂದ 9 ಕ್ಕೆ ಕಡಿತಗೊಳಿಸಿದ್ದಾರೆ. ಮಣಿಪುರದ 16 ಜಿಲ್ಲೆಗಳಲ್ಲಿ 11 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೆ, ಇಡೀ ಈಶಾನ್ಯ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಇತ್ತ, ಮಣಿಪುರ ಚುನಾವಣೆಗೆ ಕುಕಿ ಉಗ್ರಗಾಮಿ ಗುಂಪಿನ ನಾಯಕರ ಸಹಾಯ ಪಡೆದ ಆರೋಪದ ಮೇಲೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಬುಧವಾರ ಒತ್ತಾಯಿಸಿದ್ದಾರೆ.
"ಕುಕಿ ಉಗ್ರಗಾಮಿಗಳೊಂದಿಗಿನ ಅಸಂವಿಧಾನಿಕ ಸಂಬಂಧ" ಕ್ಕಾಗಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಪ್ರತಿಭಟಿಸಲು ಪಕ್ಷವು ಗುವಾಹಟಿಯಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸಿದೆ. ಪ್ರಜಾಪ್ರಭುತ್ವದ ಪ್ರಕ್ರಿಯೆಯಿಂದ ಚುನಾಯಿತರಾದ ಮುಖ್ಯಮಂತ್ರಿಯೊಬ್ಬರು ಮಣಿಪುರದ ಚುನಾವಣೆಯಲ್ಲಿ ಗೆಲ್ಲಲು ಮಣಿಪುರ ವಿಧಾನಸಭೆಯಲ್ಲಿ ಕುಕಿ ಉಗ್ರಗಾಮಿಗಳನ್ನು ಭೇಟಿಯಾಗಿದ್ದಾರೆ. ಉಗ್ರಗಾಮಿ ಗುಂಪಿನ ನಾಯಕ ಇದನ್ನು ಹೇಳಿದ್ದಾನೆ. ಬಿಜೆಪಿ ಹೈಕಮಾಂಡ್ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ ಎಂದು ನಾವು ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ-ಇಂಡಿಪೆಂಡೆಂಟ್ (ಉಲ್ಫಾ-I) ಮುಖ್ಯಸ್ಥ ಪರೇಶ್ ಬರುವಾ ಅವರು ಯಾವಾಗಲೂ ಹಿಮಂತ ಬಿಸ್ವಾ ಶರ್ಮಾ ಅವರನ್ನು ತಮ್ಮ ಮಾಜಿ ಕೌಂಟರ್ಪಾರ್ಟ್ ಎಂದು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಹೇಳಿದ್ದಾರೆ.
ಮಣಿಪುರವು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಯಲ್ಲಿ ನಲುಗುತ್ತಿರುವಾಗ, 2019 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕುಕಿ ಸಂಘಟನೆಯ ನಾಯಕರೊಬ್ಬರು ಬರೆದ ಪತ್ರದಲ್ಲಿ ಇಬ್ಬರು ಬಿಜೆಪಿ ನಾಯಕರಾದ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಮ್ ಮಾಧವ್ ಅವರು ಅದರ ಉಸ್ತುವಾರಿ ವಹಿಸಿದ್ದಾರೆ ಎಂದು ಹೇಳಿದ್ದಾರೆ.
2017ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಕುಕಿ ಸಂಘಟನೆಗಳ ನೆರವು ಪಡೆದಿದ್ದವು. ಬಿಜೆಪಿ 2017 ರಲ್ಲಿ ಮಣಿಪುರದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತು ಮತ್ತು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಿತ್ತು. ಜೂನ್ 8, 2023 ರಂದು ಎನ್‌ಐಎ ನ್ಯಾಯಾಲಯದಲ್ಲಿ SoO ಅಡಿಯಲ್ಲಿನ ಸಶಸ್ತ್ರ ಸಂಘಟನೆಗಳಲ್ಲಿ ಒಂದಾದ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (UKLF) ಅಧ್ಯಕ್ಷ ಎಸ್‌ಎಸ್ ಹಾಕಿಪ್ ಅವರು ಸಲ್ಲಿಸಿದ ಅಫಿಡವಿಟ್‌ನೊಂದಿಗೆ ಪತ್ರವನ್ನು ಲಗತ್ತಿಸಲಾಗಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications